ಬಿಸಿ ಬಿಸಿ ಸುದ್ದಿ

ಒಳ ಮೀಸಲಾತಿ ಎತ್ತಿಹಿಡಿದ ಸುಪ್ರಿಂ: ಹರ್ಷ

ವಾಡಿ: ಪರಿಶಿಷ್ಟ ಜಾತಿ ಸಮುದಾಯಗಳ ಏಳಿಗೆಗಾಗಿ ಒಳ ಮೀಸಲಾತಿ ವರ್ಗೀಕರಣ ಕಲ್ಪಿಸುವ ಸದಾಶಿವ ಆಯೋಗ ವರದಿಯನ್ನು ಎತ್ತಿ ಹಿಡಿದಿರುವ ಸುಪ್ರಿಂ ಕೋರ್ಟ್‍ನ ಏಳು ಜನ ನ್ಯಾಯಾದೀಶರ ಪೀಠದ ತೀರ್ಪನ್ನು ವಾಡಿ ಮಾದಿಗ ಸಮಾಜದ ಅಧ್ಯಕ್ಷ, ಬಿಜೆಪಿ ಎಸ್‍ಸಿ ಮೋರ್ಚಾ ಚಿತ್ತಾಪುರ ತಾಲೂಕು ಅಧ್ಯಕ್ಷ ರಾಜು ಮುಕ್ಕಣ್ಣ ಸ್ವಾಗತಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಭಾರತದ ಸರ್ವೋಚ್ಛ ನ್ಯಾಯಾಲಯದ ಪೀಠಕ್ಕೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಅಸ್ಪøಶ್ಯರಲ್ಲಿ ಅಸ್ಪøಶ್ಯರಾಗಿ ಮೀಸಲಾತಿ ಸೌಲಭ್ಯಗಳಿಂದ ವಂಚಿತರಾಗಿದ್ದ ಕರ್ನಾಟಕ ರಾಜ್ಯದ ಮಾದಿಗ ಜನಾಂಗಕ್ಕೆ ಒಳ ಮೀಸಲಾತಿ ಸೌಲಭ್ಯ ಒದಗಿಸಬೇಕು ಎಂದು ನಡೆಸಿದ ಮೂವತ್ತು ವರ್ಷಗಳ ನಮ್ಮ ಹೋರಾಟಕ್ಕೆ ಇಂದು ಜಯ ಸಿಕ್ಕಂತಾಗಿದೆ.

ಪರಿಶಿಷ್ಟ ಜಾತಿ ಸಮುದಾಯಗಳಿಗೆ ಮೀಸಲಿರುವ ಜಾತಿ ಮೀಸಲಾತಿಯನ್ನು ಎಬಿಸಿಡಿ ವರ್ಗೀಕರಣ ಮಾಡಬೇಕು ಎಂಬುದು ಪ್ರಮುಖ ಬೇಡಿಕೆಯಾಗಿತ್ತು. ಇದಕ್ಕಾಗಿ ಮಾದಿಗ ಮೀಸಲಾತಿ ಹೋರಾಟ ಸಮಿತಿ ಹಾಗೂ ಮಾದಿಗ ದಂಡೋರಾ ಮೀಸಲಾತಿ ಹೋರಾಟ ಸಮಿತಿಗಳ ನೇತೃತ್ವದಲ್ಲಿ ನಾನು ಜಿಲ್ಲಾಧ್ಯಕ್ಷನಾಗಿ ಇಪ್ಪತ್ತು ವರ್ಷಗಳ ಕಾಲ ಹೋರಾಟ ನಡೆಸಿದ್ದೇನೆ. ಅಲ್ಲದೆ ಮಾದಿಗ ದಂಡೋರಾ ಮೀಸಲಾತಿ ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಮಂದಾಕೃಷ್ಣ ಮಾದಿಗ ಅವರನ್ನು ಕಲಬುರಗಿಗೆ ಆಹ್ವಾನಿಸಿ ಬೃಹತ್ ಚಳುವಳಿಗಳನ್ನು ಸಂಘಟಿಸಿದ್ದಕ್ಕೆ ಇಂದು ನ್ಯಾಯ ರೂಪದಲ್ಲಿ ನೆಮ್ಮದಿ ಸಿಕ್ಕಿದೆ ಎಂದು ಪ್ರತಿಕ್ರೀಯಿಸಿದ್ದಾರೆ.

ನ್ಯಾ.ಸದಾಶಿವ ಆಯೋಗದ ವರದಿ ಕರ್ನಾಟಕದ ಮಾದಿಗ ಸಮುದಾಯಕ್ಕೆ ನ್ಯಾಯ ಒದಗಿಸಿಕೊಟ್ಟಿದೆ. ಪರಿಶಿಷ್ಟ ಜಾತಿ ಮೀಸಲಾತಿಯನ್ನು ಎಬಿಸಿಡಿ ವರ್ಗೀಕರಣ ಮಾಡುವುದರಿಂದ ಮಾದಿಗರೂ ಸಹ ಸರ್ಕಾರದ ಹಲವು ಸೌಲಭ್ಯಗಳನ್ನು ನಿರ್ಭಯವಾಗಿ ಯಾವೂದೇ ಪೈಪೋಟಿಗಳಿಲ್ಲದೆ ಪಡೆಯಬಹುದಾಗಿದೆ. ಒಳ ಮೀಸಲಾತಿ ಜಾರಿಗೊಳಿಸಲು ಸರ್ಕಾರಗಳು ಹಿಂದೇಟು ಹಾಕುತ್ತಲೇ ಬರುವ ಮೂಲಕ ಮಾದಿಗ ಸಮುದಾಯಕ್ಕೆ ಮೀಸಲಾತಿ ಅನ್ಯಾಯ ಮಾಡಿದ್ದವು.

ಇದೀಗ ದೇಶದ ಸರ್ವೋಚ್ಛ ನ್ಯಾಯಾಲವೇ ಒಳ ಮೀಸಲಾತಿ ವರದಿಯನ್ನು ಎತ್ತಿ ಹಿಡಿದಿರುವುದು ಅತ್ಯಂತ ಹರ್ಷದಾಯಕವಾಗಿದೆ. ರಾಜ್ಯ ಸರ್ಕಾರಗಳು ಮೀನಾಮೇಷ ಎಣಿಸದೆ ಸುಪ್ರಿಂ ಕೋರ್ಟ್ ಆದೇಶದಂತೆ ಒಳ ಮೀಸಲಾತಿ ಜಾರಿಗೆ ಮುಂದಾಗಬೇಕು ಎಂದು ರಾಜು ಮುಕ್ಕಣ್ಣ ಒತ್ತಾಯಿಸಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

20 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago