ಪೂಜ್ಯ ಶ್ರೀ ಮಹಾಂತಪ್ಪಗಳವರ ಜನ್ಮದಿನಾಚರಣೆ

0
37

ಕಲಬುರಗಿ: ಇಳಕಲ್ ನ ಪೂಜ್ಯ ಶ್ರೀ ಡಾ. ಮಹಾಂತಪ್ಪಗಳವರು 12ನೇ ಶತಮಾನದ ಬಸವಾದಿ ಶರಣರ ಆದರ್ಶಗಳನ್ನು ಅರಿತುಕೊಂಡು ಆಚರಿಸುವ ಮೂಲಕ ಇಂದಿನ ಆಧುನಿಕ ದಿನಮಾನಗಳಲ್ಲಿ ಬಸವ ಮೌಲ್ಯಗಳಿಗೆ ಘನವಾದ ಅರ್ಥವಂತಿಕೆಯನ್ನು ತಂದುಕೊಟ್ಟಿದ್ದಾರೆ. ಸಮಾಜಕ್ಕೆ ಮಾರಕವಾಗಿ ಕಾಡುತ್ತಿರುವ ಅಸಮಾನತೆ ಮತ್ತು ಜಾತಿ ವ್ಯವಸ್ಥೆಯನ್ನು ಹೋಗಲಾಡಿಸಲು ವಿಶ್ವಗುರು ಬಸವಣ್ಣನವರ ಆದರ್ಶಗಳನ್ನು ರೂಢಿಸಿಕೊಂಡು ಸಮಾಜದಲ್ಲಿ ಬಹು ದೊಡ್ಡ ಕಾರ್ಯ ಮಾಡಿದ್ದಾರೆ. ಹೀಗಾಗಿ ಇಂದಿನ ಸಮಾಜಕ್ಕೆ ಮಾದರಿಯಾದ ವ್ಯಕ್ತಿತ್ವ ಅವರದ್ದಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹೇಳಿದರು.

ನಗರದ ಕನ್ನಡ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗುರುವಾರ ಹಮ್ಮಿಕೊಂಡ ಇಲಕಲ್ ನ ಪೂಜ್ಯ ಶ್ರೀ ಮಹಾಂತಪ್ಪಗಳವರ ಜನ್ಮದಿನಾಚರಣೆಯ ವ್ಯಸನಮುಕ್ತ ದಿನಾಚರಣೆಯಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಅವರು ಮಾತನಾಡಿದರು.

Contact Your\'s Advertisement; 9902492681

ನ್ಯಾಯವಾದಿ ಶಿವಲಿಂಗಪ್ಪ ಅಷ್ಟಗಿ ಮಾತನಾಡಿ, ಜಾತಿ ವ್ಯವಸ್ಥೆಯನ್ನು ವಿರೋಧಿಸಿ ಸಮಾನತೆಯ ತತ್ವಗಳನ್ನು ಸಾರುವ ನಿಟ್ಟಿನಲ್ಲಿ 12ನೇ ಶತಮಾನದ ವಿಶ್ವಗುರು ಬಸವಣ್ಣನವರು ಪ್ರತಿಪ್ರಾದಿಸಿದ ತತ್ವಾದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಆಚರಿಸುವ ಮೂಲಕ ಆಧುನಿಕ ಬಸವಣ್ಣನವರಾಗಿದ್ದಾರೆ ಎಂದರು.

ಜಿಲ್ಲಾ ಕಸಾಪ ದ ಗೌರವ ಕಾರ್ಯದರ್ಶಿ ಶಿವರಾಜ ಎಸ್ ಅಂಡಗಿ, ಪ್ರಮುಖರಾದ ಪದ್ಮಾವತಿ ಎನ್ ಮಾಲಿಪಾಟೀಲ, ವಿನೋದಕುಮಾರ ಜೇನವೇರಿ, ರಾಜೇಂದ್ರ ಮಾಡಬೂಳ, ಗಣೇಶ ಚಿನ್ನಾಕಾರ, ಎಂ.ಎನ್. ಸುಗಂಧಿ, ಶಿವಶರಣ ಬಡದಾಳ, ಮಲ್ಲಿನಾಥ ಸಂಗಶೆಟ್ಟಿ, ಡಾ. ಬಾಬುರಾವ ಶೇರಿಕಾರ ಸೇರಿದಂತೆ ಇತರರು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here