ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಗುರುವಾರ ಕಲಬುರಗಿ-ಸೇಡಂ ಮಾರ್ಗದ ಮಳಖೇಡ್‍ನಲ್ಲಿ ಕೆ.ಆರ್.ಐ.ಡಿ.ಎಲ್ ನಿಂದ ನಡೆಯುತ್ತಿರುವ ಕಾಗಿಣಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣದ ಅಂತಿಮ ಹಂತದ ಕಾಮಗಾರಿಯನ್ನು ವೀಕ್ಷಿಸಿ, ಕೂಡಲೆ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆಗೆ ಸೇಡಂ ತಾಲೂಕು ಪ್ರವಾಸ ಕೈಗೊಂಡಿದ್ದ ಅವರು, ಮಳೆ ಹೆಚ್ಚಾದಲ್ಲಿ ಹಳೇ ಸೇತುವೆ ಮುಳುಗಿ ಸಂಪರ್ಕ ಕಡಿತಗೊಳ್ಳುವುದು ಇಲ್ಲಿ ಸರ್ವೇ ಸಾಮಾನ್ಯವಾಗಿದ್ದು, ಯುದ್ದೋಪಾದಿಯಲ್ಲಿ ಕೆಲಸವನ್ನು ಮುಗಿಸಬೇಕು ಮತ್ತು ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಂತರ ಕೊಂಕನಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ಮಳೆಯಿಂದ ಬಿದ್ದ ಮನೆಗೆ ಭೇಟಿ ನೀಡಿ ಸಂತ್ರಸ್ತರನ್ನು ಮಾತಾಡಿಸಿದ್ದರು. ನಂತರ ಅಲ್ಲಿಯೇ ಇದ್ದ ಅಂಗನವಾಡಿಗೆ ಭೇಟಿ ನೀಡಿದ ಡಿ.ಸಿ. ಅವರು ಪುಟಾಣಿ ಮಕ್ಕಳೊಂದಿಗೆ ಸ್ವಲ್ಪ ಹೊತ್ತು ಕಳೆದರು. ಗರ್ಭಿಣಿ-ಬಾಣಂತಿಯರಿಗೆ ನೀಡಲಾಗುತ್ತಿರುವ ಪೌಷ್ಠಿಕ ಆಹಾರಗಳ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯಿಂದ ಮಾಹಿತಿ ಪಡೆದರು.
ಸೇಡಂ ಪಟ್ಟಣದಲ್ಲಿ ನಗರೋತ್ಥಾನ ಯೋಜನೆಯಡಿ ನಡೆಯುತ್ತಿರುವ ಸಿ.ಸಿ. ರಸ್ತೆ ಕಾಮಗಾರಿ ಮತ್ತು ಸೇಡಂ ಪುರಸಭೆ ಸಿಬ್ಬಂದಿ ಕಟ್ಟಡ ಸಹ ಪರಿಶೀಲಿಸಿದರು. ಮುಖ್ಯಾಧಿಕಾರಿ ಶರಣಯ್ಯ ಸ್ವಾಮಿ ಕಾಮಗಾರಿಗಳ ಬಗ್ಗೆ ಡಿ.ಸಿ.ಗೆ ಮಾಹಿತಿ ನೀಡಿದರು.
ಕೋಡ್ಲಾ ಸಿಮೆಂಟ್ ಘಟಕ್ಕೆ ಡಿ.ಸಿ.ಭೇಟಿ: ಇತ್ತೀಚೆಗೆ ಕೆಲಸದಲ್ಲಿ ನಿರತನಾಗಿದ್ದ ಕಾರ್ಮಿಕನೊಬ್ಬ ಮೃತಪಟ್ಟಿರುವ ತಾಲೂಕಿನ ಕೋಡ್ಲಾ-ಬೆನಕನಳ್ಳಿಯ ಶ್ರೀ ಸಿಮೆಂಟ್ ಘಟಕಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಕಾರ್ಮಿಕ ಸಾವನಪ್ಪಿರುವ ಘಟನಾ ಸ್ಥಳ ವೀಕ್ಷಿಸಿದಲ್ಲದೆ ಘಟನೆಗೆ ಕಾರಣ ಏನು ಎಂಬುದರ ಬಗ್ಗೆ ಕಂಪನಿಯ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಕಾರ್ಮಿಕರ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು. ಕಂಪನಿಯ ಆವರಣದಲ್ಲಿ ಎಲ್ಲೆಡೆ ಸುರಕ್ಷತೆಯ ಸಂಕೇತ ಬೋರ್ಡ್‍ಗಳು ಹಾಕಬೇಕು. ಸುರಕ್ಷತೆಯಿಂದ ಕಾರ್ಯನಿರ್ವಹಣೆ ಕುರಿತು ಕಾರ್ಮಿಕರಿಗೆ ಅರಿವು ನೀಡುವುದಲ್ಲದೆ ಸುಕರ್ಷಾ ಪರಿಕರಗಳನ್ನು ಕಂಪನಿ ವಿತರಿಸಬೇಕು. ಮುಂದೆ ಇಂತಹ ಯಾವುದೇ ಅವಘಡ ಆಗದಂತೆ ಆಡಳಿತ ಮಂಡಳಿ ಎಚ್ಚರಿಕೆ ವಹಿಸಬೇಕೆಂದು ಕಾರ್ಖಾನೆಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಎಂ.ಸತೀಷಕುಮಾರ ಈ ಸಂದರ್ಭದಲ್ಲಿ ಇದ್ದರು.
ನಂತರ ಕಾರ್ಖಾನೆ ಎದುರುಗಡೆ ವಿವಿಧ ಬೇಡಿಕೆಗೆ ಆಗ್ರಹಿಸಿ ಧರಣಿ ನಡೆಸುತ್ತಿರುವ ರೈತ ಸಂಘಟನೆಗಳ ಅಹವಾಲು ಆಲಿಸಿದರು. ಕೋಡ್ಲಾ ಗ್ರಾಮದಲ್ಲಿ ನಿರ್ಮಿತಿ ಕೇಂದ್ರದಿಂದ ನೂತನವಾಗಿ ನಿರ್ಮಿಸಲಾಗುತ್ತಿರುವ ನಾಡ ಕಚೇರಿ ಕಟ್ಟಡ ಕಾಮಗಾರಿ ವೀಕ್ಷಿಸಿದಲ್ಲದೆ ಮೋರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳೊಂದಿಗೆ ಕೆಲ ಹೊತ್ತು ಕಳೆದು ಅವರ ಶೈಕ್ಷಣಿಕ ಚಟುವಟಿಕೆ ಬಗ್ಗೆ ಮಾಹಿತಿ ಪಡೆದಲ್ಲದೆ ಅವರ ಸಮಸ್ಯೆಗಳನ್ನು ಆಲಿಸಿದರು.
ಸಹಾಯಕ ಆಯುಕ್ತ ಪ್ರಭುರೆಡ್ಡಿ, ತಹಶೀಲ್ದಾರ ಶ್ರೀಯಾಂಕ್ ಧನಶ್ರೀ ಸೇರಿದಂತೆ ತಾಲೂಕಾ ಮಟ್ಟದ ಅಧಿಕಾರಿಗಳು ಇದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…