ಸುರಪುರ: ಹಿಂದೆ ಬಸವರಾಜ ಬೊಮ್ಮಾಯಿ ಸರಕಾರ ಇದ್ದಾಗ ಅಂದು ಕಾರ್ಮಿಕ ಸಚಿವರಾಗಿದ್ದ ಶಿವರಾಮ ಹೆಬ್ಬಾರ ಅವರು ಈಗ ಕಾರ್ಮಿಕ ಸಚಿವರಾಗಿರುವ ಸಂತೊಷ ಲಾಡ್ ಅವರು ಕಟ್ಟಡ ಕಾರ್ಮಿಕರ ಕಿಟ್ ಹೆಸರಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಎಐಟಿಯುಸಿ ಜಿಲ್ಲಾಧ್ಯಕ್ಷ ದೇವಿಂದ್ರಪ್ಪ ಪತ್ತಾರ ಮಾತನಾಡಿದರು.
ನಗರದ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ಕಚೇರಿಯಲ್ಲಿ ನಡೆದ ಆಗಷ್ಟ್ 5ರ ಬೆಂಗಳೂರ ಚಲೋ ಕಾರ್ಯಕ್ರಮದ ಭಿತ್ತಿ ಪತ್ರಗಳನ್ನು ಬಿಡುಗಡೆಗೊಳಿಸಿ ಮಾತನಾಡಿ,ರಾಜ್ಯದಲ್ಲಿರುವ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಸರಕಾರ ಯಾವುದೇ ಯೋಜನೆ ಅಡಿಯಲ್ಲಿ ಸರಿಯಾದ ಹಣ ಬಿಡುಗಡೆ ಮಾಡುತ್ತಿಲ್ಲ,ಕಟ್ಟಡ ಕಾರ್ಮಿಕರ ಕಾರ್ಡ್‍ಗಳ ನವೀಕರಣ ಮತ್ತು ಹೊಸ ಕಾರ್ಡ್‍ಗಳ ನೊಂದಣಿಗೆ ಯಾವ್ಯಾವುದೋ ನಿಯಮಗಳನ್ನು ಜಾರಿಗೊಳಿಸಿ ಕಟ್ಟಡ ಕಾರ್ಮಿಕರಿಗೆ ಸರಕಾರದ ಸೌಲಭ್ಯ ದಿಂದ ವಂಚಿತಗೊಳಿಸುತ್ತಿದ್ದಾರೆ.ಇದನ್ನು ಖಂಡಿಸಿ ಇದೇ ಆಗಷ್ಟ್ 5ನೇ ತಾರಿಕು ಬೆಂಗಳೂರಲ್ಲಿ ಮುಖ್ಯಮಂತ್ರಿ ಗೃಹ ಕಚೇರಿ ಮುತ್ತಿಗೆ ಹಮ್ಮಿಕೊಳ್ಳಲಾಗಿದೆ.ಕಟ್ಟಡ ಕಾರ್ಮಿಕ ಜಂಟಿ ಸಂಘಟನೆಗಳು ಭಾಗವಹಿಸಲಿದ್ದು,ಈ ಹೋರಾಟದಲ್ಲಿ ಎಲ್ಲರು ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ತಿಮ್ಮಯ್ಯ ತಳವಾರ ಮಾತನಮಾಡಿದರು,ಸಂಘದ ತಾ.ಅಧ್ಯಕ್ಷ ದೇವಿಂದ್ರಪ್ಪ ನಗರಗುಂಡ,ಭೀಮರಾಯ ಕದರಾಪುರ,ಬಸವರಾಜ,ರಫೀಕ ರಂಗಂಪೇಟೆ,ಮರೆಪ್ಪ ದೇಸಾಯಿ,ಭೀಮಣ್ಣ,ಮರೆಪ್ಪ,ಭೀಮಣ್ಣ ಚೌದಕರ್,ಯಲ್ಲಪ್ಪ ಬಡಿಗೇರ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ನ.25 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಮಲಾಪುರ ಮತ್ತು ಕಲಬುರಗಿ ವತಿಯಿಂದ ಧರ್ಮಾಧಿಕಾರಿ ಡಾ.…
ಕಲಬುರಗಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರೀಯಾಂಕ್ ಖರ್ಗೆ ಅವರ 46ನೇ ವರ್ಷದ…
ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…
ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…