ಕಲಬುರಗಿ: ಪ್ರಜ್ಞಾ ಪ್ರವಾಹ, ಶರಣಬಸವ ವಿಶ್ವಿದ್ಯಾಲಯ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕರ್ನಾಟಕ ಆಶ್ರಯದಲ್ಲಿ ನಗರದ ಪೂಜ್ಯ ಬಸವರಾಜಪ್ಪ ಅಪ್ಪ ಸ್ಮಾರಕ ಭವನದಲ್ಲಿ ಶನಿವಾರ ಸಂಜೆ ಆಯೋಜಿಸಿದ್ದ ವಚನ ದರ್ಶನ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ಆರಂಭವಾಗುವ ವೇಳೆ ಸಭಾಂಗಣದೊಳಗೆ ನುಗ್ಗಲು ಯತ್ನಿಸಿದ ರವೀಂದ್ರ ಶಾಬಾದಿ, ಆರ್.ಜಿ. ಶೆಟಕಾರ, ಪ್ರಭುಲಿಂಗ ಮಹಾಗಾಂವಕರ, ಸುನಿಲ್ ಮಾನ್ಪಡೆ ಸೇರಿದಂತೆ ಹಲವರನ್ನು ತಡೆದ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇಂದು ಕಲಬುರಗಿ ನಗರದಲ್ಲಿ ಸಂಘ ಪರಿವಾರದ ಪ್ರೇರಿತ ವಿಶ್ವ ಗುರು ಕರ್ನಾಟಕ ಸಾಂಸ್ಕೃತಿಕ ನಾಯಕ ಬಸವಣ್ಣನವರ , ಶರಣ ಚಳುವಳಿಯ ನಿಜ ತಿರುಚಿ ಅವರ ತತ್ವ ,ಚಿಂತನೆ ಚಳುವಳಿ, ಅಯೋಧ್ಯೆ ಪ್ರಕಾಶಿತ RSS ಪ್ರಕಟಿತ “ವಚನ ದರ್ಶನ,” ಕೃತಿ ವಿರೋಧಿಸಿ ಕಪ್ಪು ಬಟ್ಟೆ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಯಿತು.
ಬಸವಣ್ಣನವರ ಭಾವಚಿತ್ರ ಋಷಿ ಮುನಿಯಂತೆ ಮಾಡಿದ್ದು, ಕೊರಳಲ್ಲಿ ತುಳಸಿ ಮಾಲೆ ಹಾಕಿರುವುದು, ಬಿಲ್ಲು- ಬಾಣಗಳನ್ನು ತೋರಿಸಿರುವುದು ಬಸವಣ್ಣನವರಿಗೆ ಹಾಗೂ ಬಸವ ತತ್ವಕ್ಕೆ ಮಾಡಿದ ಅಪಚಾರ ಎಂದು ಪ್ರತಿಭಟಿಸಿ ಘೋಷಣೆ ಕೂಗಿದರು.
ಈ ಸಂದರ್ಭದಲ್ಲಿ RG ಶೆಟ್ಟಿಗಾರ, R k ಹುಡುಗಿ, ಶಾಂತಪ್ಪ ಪಾಟೀಲ, ಪ್ರಭು ಖಾನಾಪುರ, ಮೀನಾಕ್ಷಿ ಬಾಳಿ, ಸುನೀಲ ಮಾರುತಿ ಮಾನಪಡೆ, ರವೀಂದ್ರ ಶಬಾದಿ,ಲಕ್ಷ್ಮೀಕಾಂತ ಹುಬ್ಬಳ್ಳಿ, ಶರಣಗೌಡ ಪಾಟೀಲ, ಮಹಾಂತೇಶ್ ಕಲಬುರಗಿ, ಪ್ರಭುಲಿಂಗ ಮಾಹಗಾಂವಕರ್, ಲವಿತ್ರಾ ವಸ್ತ್ರದ ಸೇರಿದಂತೆ ಐವತ್ತಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.
ಪೊಲೀಸರು ಪ್ರತಿಭಟನಾ ನಿರತರನ್ನು ಬಂದಿಸಿ ಬ್ರಹ್ಮಪುರ ಪೊಲೀಸ್ ಠಾಣೆಗೆ ತರಲಾಗಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…