ಸುರಪುರ: ತಾಲೂಕಿನಲ್ಲಿಯ ಪತ್ರಕರ್ತರ ಏಳಿಗೆಗಾಗಿ ಕೆಲಸ ಮಾಡಲು ಹಿರಿಯ ಪತ್ರಕರ್ತರ ಮಾರ್ಗದರ್ಶನದ ಜೊತೆಗೆ ಎಲ್ಲರು ಸಹಕಾರ ನೀಡುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷ ಶ್ರೀಕರ ಭಟ್ ಜೋಷಿ ಮಾತನಾಡಿದರು.
ಸಂಘದ ಹಿಂದಿನ ಅಧ್ಯಕ್ಷರ ರಾಜೀನಾಮೆಯಿಂದಾಗಿ ತೆರವಾಗಿದ್ದ ಸ್ಥಾನಕ್ಕೆ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ಅವರು ನೂತನ ಅಧ್ಯಕ್ಷರನ್ನಾಗಿ ನೇಮಕಗೊಳಿಸಿದ ಹಿನ್ನೆಲೆಯಲ್ಲಿ ಪತ್ರಿಕಾ ಭವನದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ,ಎಲ್ಲ ಹಿರಿಯ ಸಂಘದ ಕಾರ್ಯಚಟುವಟಿಕೆಗಳಿಗಾಗಿ ಮಾರ್ಗದರ್ಶನ ಮಾಡಿ,ಉತ್ತಮವಾಗಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು.
ಅಲ್ಲದೆ ನನ್ನನ್ನು ಅಧ್ಯಕ್ಷನನ್ನಾಗಿ ನೇಮಕಗೊಳಿಸಿದ ಜಿಲ್ಲಾಧ್ಯಕ್ಷರಾದಿಯಾಗಿ ಜಿಲ್ಲಾ ಘಟಕದ ಎಲ್ಲಾ ಪದಾಧಿಕಾರಿಗಳಿಗು ಹಾಗೂ ತಾಲೂಕ ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರಿಗೆ ಧನ್ಯವಾದ ಸಲ್ಲಿಸುವುದಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಗೌರವಾಧ್ಯಕ್ಷ ಗಿರೀಶ ಶಾಬಾದಿ ಮಾತನಾಡಿ,ಇಂದು ಶ್ರೀಕರ ಭಟ್ ಜೋಷಿಯವರು ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವುದು ಸಂತೋಷದ ಸಂಗತಿ,ಮುಂದಿನ ದಿನಗಳಲ್ಲಿ ಅವರು ಉತ್ತಮವಾಗಿ ಕಾರ್ಯನಿರ್ವಹಿಸಲು ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಹಿರಿಯ ಪತ್ರಕರ್ತರಾದ ಧೀರೇಂದ್ರ ಕುಲಕರ್ಣಿ,ಮಲ್ಲು ಗುಳಗಿ,ನಾಗರಾಜ ನ್ಯಾಮತಿ,ರಾಜು ಕುಂಬಾರ,ಹೊನ್ನಪ್ಪ ತೇಲ್ಕರ್,ಮಹಾದೇವಪ್ಪ ಬೊಮ್ಮನಹಳ್ಳಿ,ಕಲೀಂ ಫರೀದಿ,ಪರಶುರಾಮ ಮಲ್ಲಿಬಾವಿ,ಮನಮೋಹನ ದೇವಾಪುರ,ಶ್ರೀಮಂತ ಚಲುವಾದಿ, ಮಲ್ಲು ಬಾದ್ಯಾಪುರ ಮಾತನಾಡಿದರು.
ಈ ಸಂದರ್ಭದಲ್ಲಿ ಪತ್ರಕರ್ತರಾದ ಪುರಷೋತ್ತಮ ನಾಯಕ ದೇವತ್ಕಲ್, ಥಾಮಸ್ ಮ್ಯಾಥ್ಯೂ,ಉಸ್ಮಾನ ಚಿತಾಪುರ ಭಾಗವಹಿಸಿದ್ದರು.ಸಂಘದ ಪ್ರಧಾನ ಕಾರ್ಯದರ್ಶಿ ಕ್ಷೀರಲಿಂಗಯ್ಯ ಬೋನ್ಹಾಳ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಶ್ರೀಕರ ಭಟ್ ಜೋಷಿ ನೇಮಕಗೊಂಡ ಹಿನ್ನೆಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಪ್ಪ ಕಾಡ್ಲೂರ,ಶಿಕ್ಷಣ ಸಂಯೋಜಕ ಶರಣಸಬವ ನುಚ್ಚಿ ಹಾಗೂ ಬಿಆರ್‍ಪಿ ಖಾದರಪಟೇಲ್ ಸನ್ಮಾನಿಸಿ ಗೌರವಿಸಿದರು.
ಕಲಬುರಗಿ: ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ಸರ್ಕಾರಿ ಪದವಿ ಸ್ವಾಯತ್ತ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಮಹಾನಗರ ಪಾಲಿಕೆ,ಸಮಾಜ ಕಲ್ಯಾಣ ಇಲಾಖೆ, ಕನ್ನಡ…
ಕಲಬುರಗಿ: ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರಗಿ ಹಾಗೂ ಸಿ.ಆರ್.ಸಿ ಸ್ನೇಹ ಬಳಗ ಕಲಬುರಗಿ ಮತ್ತು ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ…
ಕಲಬುರಗಿ: ಸುವರ್ಣ ಭವನ (ಕನ್ನಡ ಭವನ)ದಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಜಿಲ್ಲಾ ಘಟಕ ವತಿಯಿಂದ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ…
ಕಲಬುರಗಿ : ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರಗಿಯಲ್ಲಿ ಎನ್.ಎಸ್.ಎಸ್, ರೆಡ್‍ಕ್ರಾಸ್, ಸ್ಕೌಟ್ಸ್ ಆಂಡ್ ಗೈಡ್ಸ್, ಐ.ಕ್ಯೂ.ಎ.ಸಿ ಮತ್ತು ಸಾಂಸ್ಕøತಿಕ ಘಟಕಗಳ…
ಕಲಬುರಗಿ; ಶಿಶು ಮಗುವಿಗೆ ಅಪಹರಣಕಾರರನ್ನು ಬಂಧಿಸಿದ ಕಲಬುರಗಿ ಪೆÇೀಲೀಸ್ ಇಲಾಖೆಗೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಅಭಿನಂದನೆ ವ್ಯಕ್ತಪಡಿಸಿದೆ.…
ಕಲಬುರಗಿ; ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಜೇವರ್ಗಿ, ಯಡ್ರಾಮಿ, ಅಫಜಲಪೂರ, ಸೇಡಂ, ಆಳಂದ, ಚಿಂಚೋಳಿ ತಾಲೂಕಿನಲ್ಲಿ ಜಂಗಲ್ ಕಟಿಂಗ್ ಹಾಗೂ ಮೆಂಟನೆನ್ಸ್…