ಕಲಬುರಗಿ: ಶನಿವಾರದÀಂದು ನಗರದ ಶಮ್ಸ್ ಫಂಕ್ಷನ್ ಹಾಲ್‍ನಲ್ಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘದ 11ನೇ ವಾರ್ಷಿಕ ಸಾಮಾನ್ಯ ಸಭೆ ನಡೆಸಲಾಯಿತು.
ಸಭೆಯ ಉದ್ಘಾಟನಾ ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಆಗಮಿಸಿದ ಸುರಕ್ಷಾ ಸೌಹಾರ್ದ ಸಂಘದ ಅಧ್ಯಕ್ಸರಾದ ಡಾ. ಅಹಮದ ಪಟೇಲ್ ರವರು ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಪ್ರತಿ ವರ್ಷವೂ ಈ ರೀತಿಯ ಸಭೆಗಳು ನಡೆಯಬೇಕು. ಸದಸ್ಯರು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಹೇಳಿದರು.
ಅತಿಥಿಗಳಾಗಿ ಆಗಮಿಸಿದ ಓಂ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಹಕರಾದ ರಾಮಣ್ಣ ಎಸ್. ಇಬ್ರಾಹಿಂಪೂರ ರವರು ಮಾತನಾಡುತ್ತಾ, ಸಂಘದ ಉದ್ದೇಶವು ಸದಸ್ಯರನ್ನು ಆರ್ಥಿಕವಾಗಿ ಮೇಲೆತ್ತುವುದಾಗಿದೆ. ಎಲ್ಲಾ ಸದಸ್ಯರು ತಮ್ಮತಮ್ಮ ಅವಶ್ಯಕತೆಗಳಿಗೆ ತಕ್ಕಂತೆ ಸಾಲವನ್ನು ಪಡೆದು ತಮ್ಮ ಅವಶ್ಯಕತೆಗಳನ್ನು ಪೂರೈಸಿಕೊಂಡು ನಿಗದಿತ ಸಮಯದಲ್ಲಿ ಸಾಲ ಮರುಪಾವತಿ ಮಾಡಬೇಕೆಂದು ನುಡಿದರು.
ಸಭೆಯ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಸೌಹಾರ್ದ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಡಾ. ವಿಶ್ವನಾಥ ಟಿ. ಬೆಲ್ಲದ ರವರು ಮಾತನಾಡುತ್ತಾ, ಎಲ್ಲಾ ಸದಸ್ಯರ, ಹಾಗೂ ನಿರ್ದೇಶಕರ ಬೆಂಬಲ, ಸಹಕಾರದಿಂದ ನಾವು 11 ವರ್ಷಗಳನ್ನು ಪೂರೈಸಿದ್ದೇವೆ. ಸಿಬ್ಬಂದಿ ವರ್ಗದವರೂ ಸಹ ಬಹಳ ಆತ್ಮವಿಶ್ವಾಸದಿಂದ ದಿನನಿತ್ಯದ ಸಂಘದ ಕೆಲಸಗಳನ್ನು ಮಾಡುತ್ತಿದ್ದಾರೆ.
ಶಹಾಬಾದಿನಲ್ಲಿ ಇದು ಒಂದು ಮಾದರಿ ಸಹಕಾರಿ ಸಂಘವನ್ನಾಗಿ ಮಾಡಬೇಕಾಗಿದೆ. ಅದಕ್ಕಾಗಿ ಪ್ರತಿಯೊಬ್ಬ ಸದಸ್ಯರು ಸಂಘದ ಕಾರ್ಯದ ಬಗ್ಗೆ, ಸದಸ್ಯರ ಹಕ್ಕು ಜವಾಬ್ದಾರಿಗಳ ಬಗ್ಗೆ ತಿಳಿದುಕೊಳ್ಳುವುದು ಬಹಳ ಅವಶ್ಯವಾಗಿದೆ ಎಂದು ನುಡಿದರು.
ಇನ್ನೋರ್ವ ಅತಿಥಿಗಳಾದ ಶಿವಾಜಿ ಪವಾರ ಸಾಯಿ ಸೌಹಾರ್ದ ಪತ್ತಿನ ಸಂಘದ ಅಧ್ಯಕ್ಷರು ಹಾಗೂ ಸೌಹಾರ್ದ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷರಾದ ಬಾಬು ಬಿ. ಪವಾರ ವೇದಿಕೆ ಮೇಲೆ ಉಪಸ್ಥಿತರಿದ್ದರು. ಉದ್ಘಾಟನಾ ಕಾರ್ಯಕ್ರಮದ ನಿರ್ವಹಣೆಯನ್ನು ಸೌಹಾರ್ದ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ರಾಜೇಶ ಎಸ್. ಅಲ್ಲಿಪೂರ ರವರು ನಿರ್ವಹಿಸಿದರು. ಸಂಘದ ನಿರ್ದೇಶಕರಾದ ನೀಲಕಂಠ ಎಂ. ಹುಲಿ ರವರು ವಂದನಾರ್ಪಣೆಯನ್ನು ಸಲ್ಲಿಸಿದರು.
ನಂತರ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಹಕರಾದ ರಾಘವೇಂದ್ರ ಎಂ.ಜಿ. ರವರು 2023-24 ನೇ ಸಾಲಿನ ಅಢಾವೆ ಪತ್ರಿಕೆಯನ್ನು ಓದಿದರು. ಸಂಘದ ಒಟ್ಟು ವಹಿವಾಟು ಪ್ರಸಕ್ತ ಸಾಲಿನಲ್ಲಿ ಒಟ್ಟು 3.45 ಕೋಟಿ ರೂಪಾಯಿಯಾಗಿದೆ ಎಂದು ತಿಳಿಸಿದರು.
2023-24ನೇ ಸಾಲಿನಲ್ಲಿ ಸಂಘವು 1.49 ಲಕ್ಷ ರೂಪಾಯಿಗಳ ಲಾಭ ಗಳಿಸಿದೆ ಎಂದು ತಿಳಿಸಿದರು. ಸಭೆಯಲ್ಲಿ ನಿರ್ದೇಶಕರಾದ ಎಲ್ಲಪ್ಪ ಡಿ. ಬಾಂಬೆ, ದುರ್ಗಪ್ಪ ದೇವಕರ, ಶಂಕರ ಬಿ. ದಂಡಗುಲಕರ್, ನರಸಪ್ಪ ಕೆ. ಮಾನೆ, ಬಸವರಾಜ ಎಸ್. ಅಲ್ಲಿಪೂರ, ಮತಿ ರೇಷ್ಮಾ ಆರ್. ಇಬ್ರಾಹಿಂಪೂರ, ಮತಿ ಸಿದ್ದಮ್ಮ ಪಿ. ಕೋಟನೂರ, ಮತಿ ಲೀಲಾವತಿ ಎಂ. ಸೋನಾರ, ತಿಮ್ಮಯ್ಯ ಬಿ. ಮಾನೆ, ದುರ್ಗಣ್ಣಾ ವಿ. ಕೂಸಾಳೆ, ಶರಣಪ್ಪಾ ಎಸ್. ಸನಾದಿ, ವಿರೇಶ ಎಂ. ಮಾಲಿಪಾಟೀಲ್, ಹಾಗೂ ಕಾನೂನು ಸಲಹೆಗಾರರಾದ ತಿಮ್ಮಯ್ಯ ಹೆಚ್. ಮಾನೆ ಸೇರಿದಂತೆ ಸಂಘದ ಸದ್ಯಸರು ಭಾಗವಹಿಸಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…