ಕಾನೂನು ಸುವ್ಯವಸ್ಥೆಗಾಗಿ ರಾಜ್ಯಪಾರಿಗೆ ಪತ್ರ

0
85

ವಾಡಿ; ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿನ ಹತ್ಯೆಗಳ ಹೆಚ್ಚಳ ಮತ್ತು ಭ್ರಷ್ಟಾಚಾರದ ವಿರುದ್ಧ ಕ್ರಮಕೈಗೊಳ್ಳಿ ಎಂದು ಶಕ್ತಿ ಕೇಂದ್ರದ ಅಧ್ಯಕ್ಷ ವೀರಣ್ಣ ಯಾರಿ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿದ್ದಾರೆ.

ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹತ್ಯೆಗಳು ಸಾಮಾನ್ಯವಾಗಿವೆ. ನಿನ್ನೆ ಶನಿವಾರ ಯಾದಗಿರಿ ನಗರ ಠಾಣೆಯ ಪಿಎಸ್ಐ ಪರಶುರಾಮ ವರ್ಗಾವಣೆಗೆ ಸಂಭವಿಸಿದಂತೆ ಖಿನ್ನತೆಗೆ ಒಳಗಾಗಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದು,ಇದರ ಹಿಂದೆ ಯಾದಗಿರಿ ಯ ಕಾಂಗ್ರೆಸ್ ಪಕ್ಷದ ಶಾಸಕ ಚೆನ್ನಾರಡ್ಡಿ ಪಾಟೀಲ ಮತ್ತು ಅವರ ಮಗ ಪಂಪನಗೌಡ ಬಗ್ಗೆ ದಟ್ಟ ಅನುಮಾನವಿರುವುದರಿಂದ ಅವರ ವಿರುದ್ಧ ಎಫ್ಐರ್ ದಾಖಲಾಗಿದೆ. ಮೃತ ಬಡ ಪ್ರತಿಭಾನ್ವಿತನಾಗಿದ್ದ ಪಿಎಸ್ಐ ಪರಶುರಾಮ ಕುಟುಂಬಕ್ಕೆ ನ್ಯಾಯ ಒದಗಿಸಿ.

Contact Your\'s Advertisement; 9902492681

ಈ ಸರ್ಕಾರದಲ್ಲಿ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಅಧಿಕಾರಿಗಳು ತಮ್ಮ ಕರ್ತವ್ಯ ನಿಭಾಯಿಸಲು ಆಸ್ಪದ ನೀಡದೆ, ಅವರನ್ನು ಮಾನಸಿಕವಾಗಿ ಕಿರುಕುಳ ನೀಡುತ್ತಿರುವ ಪರಿಣಾಮದಿಂದ ಅನೇಕ ಅಧಿಕಾರಿಗಳು ಆತ್ಮಹತ್ಯೆ ಶರಣಾಗುತ್ತಿರುವುದನ್ನು ಕಾಣುತ್ತಿದ್ದೇವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥಿತವಾಗಿ ಇಲ್ಲದೆ ಇರುವುದರಿಂದ ಅಮಾಯಕರ ಹತ್ಯ,ಮಹಿಳೆಯರ ಮೇಲೆ ದೌರ್ಜನ್ಯ ಆಗುತ್ತಿರುವುದು ತಮ್ಮ ಗಮನಕ್ಕೂ ಪ್ರತಿದಿನ ಬರುತ್ತಿದೆ.

ಆಡಳಿತದ ಬಹುತೇಕ ಸಚಿವರು ಮತ್ತು ಶಾಸಕರು ಮುಡಾ ಹಾಗೂ ವಾಲ್ಮೀಕಿ ನಿಗಮದ ಹಗರಣ ಸೇರಿದಂತೆ ಇನ್ನಿತರ ಹಗರಣದಲ್ಲಿ ಭಾಗಿಯಾಗಿರುವುದರಿಂದ ಇವರ ವಿರುದ್ಧ ಕ್ರಮಕೈಗೊಂಡು ಸಾರ್ವಜನಿಕ ಸಂಪತ್ತನ್ನು ರಕ್ಷಿಸಿ ಜನಸಾಮಾನ್ಯರ ಕಲ್ಯಾಣಕ್ಕೆ ತಾವು ಮುಂದಾಗಬೇಕು ಎಂದು ಪತ್ರದಲ್ಲಿ ವಿನಂತಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here