ಬಿಸಿ ಬಿಸಿ ಸುದ್ದಿ

ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿ ಭಾಗ್ಯ : ಸಿದ್ಧರಾಮಯ್ಯ

ಬೆಂಗಳೂರು; ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾದ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿ ಭಾಗ್ಯ ನೀಡಲಾಗುತ್ತಿದೆ ಎಂದು ಮುಖ್ಯಮುಂತ್ರಿಗಳಾದ ಸಿದ್ಧರಾಮಯ್ಯ ರವರು ಹೇಳಿದರು.

ಇಂದು ನಗರದ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಆಯೋಜಿಲಾಗಿದ್ದ, “ಒಲಿಂಪಿಕ್ಸ್, ಪ್ಯಾರಾಲಿಂಪಿಕ್ಸ್, ಏಷಿಯನ್ ಗೇಮ್ಸ್, ಪ್ಯಾರಾ ಏಷಿಯನ್ ಗೇಮ್ಸ್, ಕಾಮನ್‍ವೆಲ್ತ್ ಗೇಮ್ಸ್‍ಗಳಲ್ಲಿ ಪದಕ ವಿಜೇತರಿಗೆ ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಗುಂಪು-ಎ ಮತ್ತು ಗುಂಪು-ಬಿ ಮತ್ತು ಇತರೆ ವೃಂದದ ಹುದ್ದೆಗಳಿಗೆ ವಿಶೇಷ ನೇಮಕಾತಿಗೆ ಸಂಬಂಧಿಸಿದಂತೆ ಸನ್ಮಾನ್ಯ ಮುಖ್ಯಮಂತ್ರಿಗಳಿಂದ ಅವಕಾಶ ಪತ್ರ (Offer Letter) ವಿತರಣಾ ಸಮಾರಂಭ” ದಲ್ಲಿ ಅವರು ಮಾತನಾಡಿದರು.

ಸರ್ಕಾರವು ಸಾಧಕ ಕ್ರೀಡಾಪಟುಗಳಿಗೆ ಉದ್ಯೋಗಾವಕಾಶ ನೀಡಲು ಹೆಚ್ಚಿನ ಆದ್ಯತೆ ನೀಡುತ್ತಿದ್ದು, ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ 2% ರಷ್ಟು ಹುದ್ದೆಗಳನ್ನು ಕ್ರೀಡಾಪಟುಗಳಿಗೆ ಮೀಸಲಿಡಲಾಗಿದೆ. ಪದವಿ ಪೂರ್ಣಗೊಳಿಸಿದ ಸಾಧಕ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಗ್ರೂಪ್ ‘ಎ’ ಮತ್ತು ‘ಬಿ’ ಹಾಗೂ ಪದವಿ ಪೂರ್ವ ಶಿಕ್ಷಣ ಪೂರ್ಣಗೊಳಿಸಿದ ಸಾಧಕ ಕ್ರೀಡಾಪಟುಗಳಿಗೆ ಗ್ರೂಪ್ ‘ಸಿ’ ಮತ್ತು ‘ಡಿ’ ಹುದ್ದೆಗಳಿಗೆ ಅರ್ಹರು ಎಂದು ಹೇಳಿದರು.

ಕ್ರೀಡಾಪಟುಗಳು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ, ಪದಕ ಪಡೆಯಬೇಕೆಂದು ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಇದೇ ಮೊದಲ ಬಾರಿಗೆ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಸಾಧಕ ಕ್ರೀಡಾಪಟುಗಳಿಗೆ ಮುಖ್ಯಮಂತ್ರಿಗಳು ಅವಕಾಶ ಪತ್ರ (Offer Letter) ವನ್ನು ವಿತರಿಸಿದರು.

ಈ ಸಮಾರಂಭದಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದ ರಾಜು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಮತ್ತಿತರರು ಉಪಸ್ಥಿತರಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

8 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

10 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

17 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

17 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

17 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago