ಕಲಬುರಗಿ: ಗ್ರಾಮೀಣಾ ಭಾಗದಲ್ಲಿ ಸ್ವಚ್ಛತೆ ಮುಖ್ಯವಾಗಿದೆ. ಸ್ವಚ್ಛತೆ ಇದ್ದಲ್ಲಿ ಯಾವುದೇ ರೋಗ ರುಜಿನಗಳು ಬರುವುದಿಲ್ಲವೆಂದು ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ಪ್ರಾದೇಶಿಕ ಕಚೇರಿಯ ಉಪನಿರ್ದೇಶಕರಾದ ಧನರಾಜ್ ಬೋರಾಳೆ ಅವರು ಹೇಳಿದರು.
ನಗರದ ಹೊರವಲಯದಲ್ಲಿರುವ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ಪ್ರಾದೇಶಿಕ ತರಬೇತಿ ಕೇಂದ್ರದಲ್ಲಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ ರಾಜ್ ಇಲಾಖೆ, ಮತ್ತು ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ಮೈಸೂರು ಹಾಗೂ ಪ್ರಾದೇಶಿಕ ಕೇಂದ್ರ ಕಲಬುರಗಿ ರವರ ಸಂಯುಕ್ತಾಶ್ರದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಘನ ತ್ಯಾಜ್ಯ ನಿರ್ವಹಣೆ ಮತ್ತು ಕಾರ್ಯಾಚರಣೆಯಲ್ಲಿ ತೊಡಗಿರುವ ಜಿ.ಪಿ.ಎಲ್.ಎಫ್ ಸದಸ್ಯರುಗಳಿದೆ 3 ದಿನಗಳ ವಸತಿ ಸಹಿತ ಪುನಶ್ಚೇತನ ತರಬೇತಿ ಆಯೋಜಿಸಲಾಗಿರುವ ಕಾರ್ಯಕ್ರಮವನ್ನು ಸಸಿಗೆ ನೀರೆರುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಭಾಗದಲ್ಲಿ ಸ್ವ-ಸಹಾಯ ಗುಂಪುಗಳಿಗೆ ವಹಿಸಲಾಗಿರುವ ಘನ-ತ್ಯಾಜ್ಯ ನಿರ್ವಹಣೆಯನ್ನು ಉತ್ತಮವಾಗಿ ನಿರ್ವಹಿಸದಲ್ಲಿ ಎಸ್.ಎಚ್.ಜಿ. ಹಾಗೂ ಗ್ರಾಮ ಪಂಚಾಯತಗಳಿಗೆ ಉತ್ತಮ ಆದಾಯ ಬರುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಬೋಧಕರುಗಳಾದ ಶಿವಪುತ್ರಪ್ಪ ಗೊಬ್ಬೂರು, ಡಾ.ರಾಜು ಕಂಬಳಿಮಠ, ಸಂತೋಷ ಎನ್ ರವರು ತರಬೇತಿಯನ್ನು ಉದ್ದೇಶಿಸಿ ಮಾತನಾಡಿದರು. ವಿಕೇಂದ್ರೀಕೃತ ಸಂಯೋಜಕರಾದ ಸತೀಶ್ಚಂದ್ರ ಸುಲೇಪೇಟ ರವರು ನಿರೂಪಿಸಿದರು.
ವಿಕೇಂದ್ರೀಕೃತ ಸಂಯೋಜಕರಾದ ಪುಷ್ಪಾ ಬೆಳಮಗಿ ವಂದಿಸಿದರು. ಕಾರ್ಯಕಮದಲ್ಲಿ ಆಡಳಿತ & ಲೆಕ್ಕಾಧಿಕಾರಿಗಳಾದ ಕು.ಸಾಕ್ಷಿ ಪಾಟೀಲ್, ಸಿಬ್ಬಂಧಿಗಳಾದ ಅಶ್ವೀನಿ ಪೂಜಾರಿ, ಅರ್ಚನ ಪಾಟೀಲ್ ರವರು ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…