ನೂತನ ಬೌರಿಂಗ್ ಆಸ್ಪತ್ರೆ ಮುಂದಿನ ತಿಂಗಳು ಶಂಕುಸ್ಥಾಪನೆ: ಸಚಿವ ಪಾಟೀಲ್

0
30

ಬೆಂಗಳೂರು: ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡುವ ಸದುದ್ದೇಶದಿಂದ ಶಿವಾಜಿ ನಗರದಲ್ಲಿರುವ ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಾ ಬೌರಿಂಗ್ ಆಸ್ಪತ್ರೆ ಮುಂದಿನ ತಿಂಗಳು ಶಂಕುಸ್ಥಾಪನೆಗೊಳ್ಳಲಿದೆ.

ಈ ಹಿಂದೆ ಇದ್ದ ಬೌರಿಂಗ್ ಆಸ್ಪತ್ರೆಯನ್ನು ನೆಲಸಮಗೊಳಿಸಿದ ನಂತರ ನೂತನ ಹತ್ತು ಅಂತಸ್ತಿನ 500 ಹಾಸಿಗೆಗಳ ಸೌಲಭ್ಯವುಳ್ಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮುಂದಿನ ತಿಂಗಳು ಶಂಕುಸ್ಥಾಪನೆಗೊಳ್ಳಲಿದೆ ಎಂದು *ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್* ಸೋಮವಾರ ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗೆ ಭೇಟಿ ನೀಡಿದ ವೇಳೆ ವರಿದಿಗಾರರಿಗೆ ಹೇಳಿದರು.

Contact Your\'s Advertisement; 9902492681

ಇದೆ ವೇಳೆ ಅಲ್ಲಿನ ಡೆಂಘೀ ವಾರ್ಡ್ ಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು. ಅಸ್ಪತ್ರೆಯಲ್ಲಿ ವೈದ್ಯರು ಸೂಕ್ತವಾದ ಚಿಕಿತ್ಸೆ ನೀಡುತ್ತಿದ್ದಾರೆಯೇ? ಬೆಳಗಿನ ಉಪಹಾರ, ಮಧ್ಯಾಹ್ನಾದ ಬೋಜನ ಸಮಯಕ್ಕೆ ಸರಿಯಾಗಿ ನೀಡುತ್ತಿದ್ದಾರೆಯೇ ಎಂದು ರೋಗಿಗಳಿಂದ ಮಾಹಿತಿ ಪಡೆದುಕೊಂಡರು.

ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜುನಿಂದ ಶಿವಾಜಿನಗರದ ಚರಕ ಆಸ್ಪತ್ರೆಗೆ ಕಾಲ್ನಡಿಗೆಯಲ್ಲಿ ಭೇಟಿ ನೀಡಿದ ಸಚಿವ ಪಾಟೀಲ್ ಮಧ್ಯಮ ವರ್ಗದ ಜನರಿಗೆ ಅನುಕೂಲ ಅಗುವಂತೆ ಚರಕ ಆಸ್ಪತ್ರೆ ರೆಡಿಯಾಗ್ತಿದೆ..ಕೆಲವೇ ದಿನದಲ್ಲಿ ಲೋಕಾರ್ಪಣೆ ಆಗಲಿದೆ ಎಂದು ಹೇಳಿದರು.

“ಈ ಕಟ್ಟಡ ಬಿಬಿಎಂಪಿ ಮಾಡಿದೆ, ಇನ್ಫ್ರಾಸ್ಟ್ರಕ್ಚರ್ ಕೊಟ್ಟಿದ್ದು ಇನ್ಫೋಸಿಸ್. ಲೋಕಾರ್ಪಣೆ ಮಾಡೋದಕ್ಕೆ ಸರ್ಕಾರದಿಂದ ಏನೆನು ಬೇಕು ಅದನ್ನುಮಾಡಿಕೊಳ್ಳಲಾಗಿದೆ. ಕಾರ್ಡಿಯಾಕ್, ನ್ಯೂರೋ, ನೆಫ್ರಾಲಜಿ ಸೇರಿದಂತೆ ಎಲ್ಲಾ ಚಿಕಿತ್ಸೆ ಚರಕ ಆಸ್ಪತ್ರೆಯಲ್ಲಿ ನೀಡಲಾಗುತ್ತೆ. ಬಿಪಿಎಲ್ ಕಾರ್ಡ್ ದಾರರಿಗೆ ಉಚಿತ ಚಿಕಿತ್ಸೆ ಸಿಗಲಿದೆ,” ಎಂದು ಪಾಟೀಲ್ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ಹಾಗೂ ಹಿರಿಯ ಅಧಿಕಾರಿಗಳು ಡಾ.ಪಾಟೀಲ್ ಜೊತೆಗಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here