ಕಲಬುರಗಿ: ಜಿಲ್ಲೆಯ ಎಲ್ಲ ತಾಲೂಕುಗಳು ಬರಪೀಡಿತವಾಗಿದ್ದು ಸಾರ್ವಜನಿಕರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಈ ಹಿನ್ನೆಯಲ್ಲಿ ಜಿಲ್ಲೆಯ ಎಲ್ಲ ಶಾಸಕರೊಂದಿಗೆ ಸಭೆ ನಡೆಸಿ ತಕ್ಷಣ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರಕಾಗಿ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.
ಅವರು ತಮ್ಮ ಪತ್ರದಲ್ಲಿ, ಇದೀಗ ತಾನೆ ಎರಡನೆಯ ಹಂತದ ಲೋಕಸಭಾ ಚುನಾವಣೆ ಅಂತ್ಯಗೊಂಡಿದೆ. ಚುನಾವಣಾ ನೀತಿ ಸಂಹಿತೆ ಫಲಿತಾಂಶದ ದಿನದವರೆಗೆ ಜಾರಿಯಲ್ಲಿಯಿದೆ. ಆದರೆ ಜಿಲ್ಲೆಯಲ್ಲಿ ಏಪ್ರೀಲ್ ಹಾಗೂ ಮೇ ತಿಂಗಳಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಾಗಿರಲಿದ್ದು, ಕುಡಿಯುವ ನೀರಿನ ಸಮಸ್ಯೆ ಮತ್ತಷ್ಟು ತಲೆದೋರುವ ಸಾಧ್ಯತೆಯಿದೆ. ಹಾಗಾಗಿ, ಶಾಸಕರ ಸಭೆ ನಡೆಸಲು ಮುಖ್ಯ ಚುನಾವಣಾ ಆಯುಕ್ತರ ಹಾಗೂ ರಾಜ್ಯ ಮುಖ್ಯ ಕಾರ್ಯದರ್ಶಿ ಗಳ ಅನುಮತಿ ಪಡೆದು ಸಭೆಯ ದಿನಾಂಕ ನಿಗದಿಪಡಿಸುವಂತೆ ಸಮಾಜಕಲ್ಯಾಣ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಕಲಬುರಗಿ ಜಿಲ್ಲಾಧಿಕಾರಿಗೆ ಪತ್ರ ಬರೆದೂ ಅನುಮತಿ ಕೇಳಿದ್ದಾರೆ.