ಬಾಲ್ಯ ವಿವಾಹ ಪ್ರಕರಣಗಳು ಜರುಗದಂತೆ ಕ್ರಮ ವಹಿಸಿ; ರಾಠೋಡ

0
94

ಎಂ.ಡಿ‌ ಮಶಾಖ ಚಿತ್ತಾಪುರ

ಚಿತ್ತಾಪುರ; ತಾಲೂಕಿನಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಜರುಗದಂತೆ ಸೂಕ್ತ ಕ್ರಮ ವಹಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ರಾಜಕುಮಾರ ರಾಠೋಡ ಅವರು ಹೇಳಿದರು.

Contact Your\'s Advertisement; 9902492681

ಪಟ್ಟಣದ ಸಿ.ಡಿ.ಪಿ.ಒ ಕಚೇರಿಯಲ್ಲಿ ಮೇಲ್ವಿಚಾರಕರ ಸಭೆ ನಡೆಸಿ ಮಾತನಾಡಿದ ಅವರು, ಸಚಿವ ಪ್ರಿಯಾಂಕ್ ಖರ್ಗೆ ಅವರು ಮಕ್ಕಳ ಹಾಗೂ ಮಹಿಳೆಯರ ಬಗ್ಗೆ ಹೆಚ್ವಿನ ಕಾಳಜಿ ವಹಿಸುತ್ತಾರೆ. ಹೀಗಾಗಿ ತಾಲೂಕಿನಲ್ಲಿ ಯಾವುದೇ ರೀತಿಯ ಬಾಲ್ಯ ವಿವಾಹಗಳು ನಡೆಯದಂತೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಮೇಲ್ವಿಚಾರಕರಿಗೆ ಸೂಚಿಸಿದರು.

ಕೆ.ಡಿ.ಪಿ ಗುರಿಗೆ ತಕ್ಕಂತೆ ಪೋಷಣಾ ಟ್ರ್ಯಾಕ್’ನಲ್ಲಿರುವ ಫಲಾನುಭವಿಗಳ ನೊಂದಣಿ, ಆಧಾರ ಪರಿಶೀಲನೆ ಮಾಡಬೇಕು. ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯಡಿ ನಿಗದಿ ಪಡಿಸಿದ ಗುರಿಗೆ ತಕ್ಕಂತೆ ಪ್ರಗತಿ ಸಾಧಿಸಬೇಕು ಎಂದು ಹೇಳಿದರು.

ನಂತರ ಪಟ್ಟಣದ ವಚವಚ ಗಲ್ಲಿಯ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ದಾಖಲಾತಿಗಳನ್ನು ಪರೀಶಿಲನೆ ಮಾಡಿದರು. ಬಾಹರಪೇಟ್ ಏರಿಯಾದಲ್ಲಿ 2022-23ನೇ ಸಾಲಿನ ಕೆ.ಕೆ.ಆರ್.ಡಿ.ಬಿ ಮೇಗಾ ಮ್ಯಾಕ್ರೋ ಯೋಜನೆಯ ಮೊದಲನೇ ಹಂತದಲ್ಲಿ ನಿರ್ಮಾಣವಾಗುತ್ತಿರುವ ಬಾಹಾರ್’ಪೇಠದ ಎರಡನೇ ಅಂಗನವಾಡಿ ಕೇಂದ್ರದ ಕಟ್ಟಡ ಕಾಮಗಾರಿಯನ್ನು ಪರಿಶೀಲನೆ ಮಾಡಿದರು.

ಈ ಸಂದರ್ಭದಲ್ಲಿ ಶಿಶಿ ಅಭಿವೃದ್ಧಿ ಯೋಜನಾಧಿಕಾರಿ ಆರತಿ ತುಪ್ಪದ್, ಹಿರಿಯ ಮೇಲ್ವಿಚಾರಕಿಯರು, ವಲಯ ಮೇಲ್ವಿಚಾರಕಿಯರು ಸೇರಿದಂತೆ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here