ಬಿಸಿ ಬಿಸಿ ಸುದ್ದಿ

ಕಾಂಗ್ರೆಸ್ ಮುಖಂಡ ಅಹ್ಮದ್ ಸೇಠ್’ಗೆ ಉನ್ನತ ಹುದ್ದೆ ನೀಡಲು ಒತ್ತಾಯ

ಚಿತ್ತಾಪುರ; ಕಾಂಗ್ರೆಸ್ ಪಕ್ಷದ ಕಟ್ಟಾಲು, ಹಿರಿಯ ಮುಖಂಡ ಅಹ್ಮದ್ ಸೇಠ್ ಅವರಿಗೆ ಕಾಂಗ್ರೆಸ್ ಪಕ್ಷದಲ್ಲಿ ರಾಜ್ಯ ಅಥವಾ ಜಿಲ್ಲಾ ಮಟ್ಟದಲ್ಲಿ ಉನ್ನತ ಹುದ್ದೆಯನ್ನು ನೀಡಬೇಕು ಎಂದು ಯುವ ಕಾಂಗ್ರೆಸ್ ಮುಖಂಡರಾದ ಶಶಿ ಪೂಜಾರಿ ಒತ್ತಾಯಿಸಿದರು.

ಪಟ್ಟಣದ ಆಸರ್ ಮೊಹಲ್ಲಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ೩೦ ವರ್ಷದಿಂದ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ಮುಖಂಡರಾಗಿ ಹಗಲು ರಾತ್ರಿಯನ್ನದೇ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದಾರೆ. ಪುರಸಭೆ ವ್ಯಾಪ್ತಿಯ ವಿವಿಧ ವಾರ್ಡಗಳಲ್ಲಿ ಅವರ ತಾಯಿ ಮತ್ತು ಪತ್ನಿ ಅವರನ್ನು ಕಾಂಗ್ರೆಸ್ ಪಕ್ಷದಿಂದ ನಾಲ್ಕು ಬಾರಿ ಟಿಕೆಟ್ ಪಡೆದು ಗೆಲ್ಲಿಸಿದ್ದಾರೆ.

ಲೋಕಸಭೆ, ವಿಧಾನಸಭೆ, ಜಿಪಂ, ತಾಪಂ, ಪುರಸಭೆ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಶ್ರಮಿಸಿದ್ದಾರೆ ಎಂದರು.
ಕಳೆದ ಬಾರಿಯ ಪುರಸಭೆ ವ್ಯಾಪ್ತಿಯಲ್ಲಿ ವಾರ್ಡ ಸಂಖ್ಯೆ ೧೦ರಿಂದ ಅವರ ತಾಯಿ ಸ್ಪರ್ಧಿಸಿ ಗೆದ್ದಿದ್ದರು.

ನಂತರ ಅವರ ತಾಯಿ ನಿಧನರಾದ ಪ್ರಯುಕ್ತ ಪತ್ನಿ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಪಡೆದು ನಿಲ್ಲಿಸಿದಾಗ ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರಚಾರಕ್ಕೆ ಆಗಮಿಸಿದಾಗ ಪತ್ನಿ ಅವರಿಗೆ ಅವಕಾಶ ಸಿಕ್ಕರೇ ಪುರಸಭೆ ಅಧ್ಯಕ್ಷರನ್ನಾಗಿ ಮಾಡಲಾಗುವುದು ಎಂದು ಭರವಸೆ ನೀಡಿದ್ದರು. ಆದರೆ ಮೀಸಲಾತಿ ಬರದೇ ಇರುವುದರಿಂದ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ. ಆದ್ದರಿಂದ ಕಾಂಗ್ರೆಸ್ ಮುಖಂಡ ಅಹ್ಮದ್ ಸೇಠ್ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಉನ್ನತ ಹುದ್ದೆ ನೀಡಬೇಕೆಂದು ಸಚಿವರಿಗೆ ಒತ್ತಾಯಿಸಿದ್ದಾರೆ.

ಯುವ ಮುಖಂಡರಾದ ಭೀಮಣ್ಣ ಕಲಬುರಗಿಕರ್, ವಿಶ್ವನಾಥ ಮಾತನಾಡಿ, ವಾರ್ಡ್ ಸಂಖ್ಯೆ ೧೦ ರಲ್ಲಿ ೩೬೦೦ ಮತದಾರರಿದ್ದು ಪಟ್ಟಣದಲ್ಲಿಯೇ ಅತೀ ದೊಡ್ಡ ವಾರ್ಡ್ ಎನಿಸಿಕೊಂಡಿದೆ. ಕಳೆದ ಹಲವು ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಮತಗಳನ್ನು ಹಾಕಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಮನೆ ಮನೆಗೆ ಹೋಗಿ ಶ್ರಮಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಅಹ್ಮದ್ ಸೇಠ್ ಅವರ ಕೊಡುಗೆ ಅಪಾರವಾಗಿದೆ. ಆದ್ದರಿಂದ ಸಚಿವರು ಅವರ ಸೇವೆಯನ್ನು ಗುರುತಿಸಿ ಉನ್ನತ ಹುದ್ದೆಯನ್ನು ಕೊಡಿಸಬೇಕು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಯುವ ಕಾಂಗ್ರೆಸ್ ಮುಖಂಡರಾದ ಹುಸೇನ್ ಪಗಡಿ, ಮೊಗಲಯ್ಯ ಗುತ್ತೇದಾರ, ಶಿವಕುಮಾರ ಯಾದಗಿರಿ, ಶಬೀರ್, ಹಾರೂನ್, ವಿನಾಯಕ ಭೋವಿ, ಅಶೋಕ ಮಾಡಗಿ ಸೇರಿದಂತೆ ಇತರರು ಇದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

11 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

13 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

20 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

20 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

20 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago