ಶಿಕ್ಷಣ, ಆರ್&ಡಿ ಚಟುವಟಿಕೆಗಳಿಗೆ ಹೆಚ್ಚಿನ ಗಮನ ಈ ಸಮಯದ ಅಗತ್ಯವಾಗಿದೆ

0
26

ಕಲಬುರಗಿ; ಸಂಶೋಧನೆ ಮತ್ತು ಅಭಿವೃದ್ಧಿ ಚಟುವಟಿಕೆಗಳಿಗೆ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಗಮನದ ಅಗತ್ಯತೆಯನ್ನು ದಕ್ಷಿಣ ಪ್ರಾದೇಶಿಕ ಸಮಿತಿಯ ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಪರಿಷತ್ತಿನ (ಎನ್‍ಸಿಟಿಇ) ಚೇರಪರ್ಸನ್ ಹಾಗೂ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿಯೂ ಆಗಿರುವ ಡಾ.ಮೀನಾ ಚಂದಾವರಕರ್ ಒತ್ತಿ ಹೇಳಿದರು.

ಕಲಬುರಗಿ ನಗರದ ಶರಣಬಸವ ವಿಶ್ವವಿದ್ಯಾಲಯದಲ್ಲಿ ಅನಿಮಲ್ ಹೌಸ್ ಫೆಸಿಲಿಟಿ ಮತ್ತು ಜುವಾಲೋಜಿಕಲ್ ವಸ್ತುಸಂಗ್ರಹಾಲಯವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದ ಡಾ. ಚಂದಾವರಕರ, ಈ ವರ್ಷ ಶಿಕ್ಷಣ ಮತ್ತು ಸಂಶೋಧನೆ ಹಾಗೂ ಅಭಿವೃದ್ಧಿ ಚಟುವಟಿಕೆಗಳು ಅತ್ಯಂತ ನಿರ್ಲಕ್ಷ್ಯ ಕ್ಷೇತ್ರವಾಗಿ ಉಳಿದಿವೆ ಮತ್ತು ಇತರ ಕ್ಷೇತ್ರಗಳಿಗೆ ಹೋಲಿಸಿದರೆ ಇವುಗಳಿಗೆ ಅನುದಾನ ಕಡಿಮೆಯಿದೆ ಆದಾಗ್ಯೂ, ರಾಷ್ಟ್ರೀಯ ಶಿಕ್ಷಣ ನೀತಿ ಓಇP-2020ರ ಆಗಮನದೊಂದಿಗೆ, ಶಿಕ್ಷಣ ಮತ್ತು ಸಂಶೋಧನೆ ಹಾಗೂ ಅಭಿವೃದ್ಧಿ ಚಟುವಟಿಕೆಗಳು ಹೆಚ್ಚು ಅಗತ್ಯವಾದ ಗಮನವನ್ನು ಪಡೆಯುತ್ತಿವೆ ಮತ್ತು ಓಇP ಅಡಿಯಲ್ಲಿ ರಾಷ್ಟ್ರೀಯ ಸಂಶೋಧನಾ ಪ್ರತಿμÁ್ಠನವನ್ನು ಸ್ಥಾಪಿಸಲು, ಸಾಕಷ್ಟು ಹಣವನ್ನು ನಿಯೋಜಿಸಲು ಸರ್ಕಾರದ ನಿರ್ಧಾರವು ಅಚಲವಾಗಿದೆ. ಇಂದು ದೇಶವನ್ನು ಅಭಿವೃದ್ಧಿಯ ಪಥದಲ್ಲಿ ಕೊಂಡೊಯ್ಯಲು ಆರ್ & ಡಿ ಚಟುವಟಿಕೆಗಳಿಗೆ ಹೆಚ್ಚಿನ ಒತ್ತು ನೀಡುವುದು ಅಗತ್ಯವಿದೆ ಎಂದರು.

Contact Your\'s Advertisement; 9902492681

ವಿಶ್ವವಿದ್ಯಾಲಯಗಳು ಮತ್ತು ಉನ್ನತ ಶಿಕ್ಷಣ ಕೇಂದ್ರಗಳು ಪ್ರತಿ ಸೆಮಿಸ್ಟರ್‍ನಲ್ಲಿ ಕಡ್ಡಾಯವಾಗಿ ಒಂದು ಸಂಶೋಧನಾ ಪ್ರಬಂಧವನ್ನು ಪರಿಚಯಿಸುವ ವ್ಯವಸ್ಥೆಯನ್ನು ಪರಿಚಯಿಸುವ ಅವಶ್ಯಕತೆಯಿದೆ ಎಂದು ಡಾ. ಚಂದಾವರಕರ್ ಹೇಳಿದರು. ವಿದ್ಯಾರ್ಥಿಗಳು ತಮ್ಮ ಸಂಶೋಧನಾ ಚಟುವಟಿಕೆಗಳನ್ನು ಮುಂದುವರಿಸಲು ವಿಶ್ವವಿದ್ಯಾಲಯದಲ್ಲಿರುವ ಸೌಲಭ್ಯಗಳನ್ನು ಸಂಪೂರ್ಣವಾಗಿ ಬಳಸಿಕೊಳ್ಳಬೇಕು ಮತ್ತು ಇಡೀ ಉತ್ತರ ಕರ್ನಾಟಕದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದಲ್ಲಿ ಏಕೈಕ ಪ್ರಾಣಿ ಗೃಹ ಸೌಲಭ್ಯ ಮತ್ತು ಪ್ರಾಣಿ ಸಂಗ್ರಹಾಲಯವನ್ನು ಸ್ಥಾಪಿಸಲು ಮುಂದಾದ ಶರಣಬಸವ ವಿಶ್ವವಿದ್ಯಾಲಯವನ್ನು ಶ್ಲಾಘಿಸಿದರು. ಈ ಭಾಗದ ವಿದ್ಯಾರ್ಥಿಗಳು ಅರ್ಥಪೂರ್ಣ ಸಂಶೋಧನಾ ಚಟುವಟಿಕೆಗಳನ್ನು ಕೈಗೊಳ್ಳಲು ಕಲಬುರಗಿಯಿಂದ ಹೊರಗೆ ಹೋಗಿ ಹೊಸ ಜನರೊಂದಿಗೆ ಬೆರೆತು ಹೊಸ ಸಂಶೋಧನೆಗಳತ್ತ ಸಾಗಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಶರಣಬಸವೇಶ್ವರ ಸಂಸ್ಥಾನದ 7ನೇ ಪೀಠಾಧಿಪತಿ ಪೂಜ್ಯ ದೊಡ್ಡಪ್ಪ ಅಪ್ಪಾಜಿ ಹಾಗೂ 8ನೇ ಪೀಠಾಧಿಪತಿ ಡಾ. ಶರಣಬಸವಪ್ಪ ಅಪ್ಪಾಜಿ ಅವರು ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಸಬಲೀಕರಣಕ್ಕೆ ವಿಶೇಷವಾಗಿ ಮಹಿಳೆಯರ ಶೈಕ್ಷಣಿಕ ಸಬಲೀಕರಣಕ್ಕೆ ನೀಡಿದ ಕೊಡುಗೆಗಾಗಿ ಸಂತಸ ಪಟ್ಟ ಅವರು “ಈ ದಿಗ್ಗಜರ ದೃಷ್ಟಿಕೋನವು ಇಂದು ಶರಣಬಸವ ವಿಶ್ವವಿದ್ಯಾಲಯದ ಮಟ್ಟಿಗೆ ಬಂದಿದೆ, ಇದು ಗುಣಮಟ್ಟದ ಶಿಕ್ಷಣವನ್ನು ನೀಡುವ ಮೂಲಕ ಮತ್ತು ಮಹಿಳಾ ಸಬಲೀಕರಣದ ಮೇಲೆ ಹೆಚ್ಚಿನ ಗಮನವನ್ನು ನೀಡುವ ಮೂಲಕ ಶೈಕ್ಷಣಿಕ ವಲಯಗಳಲ್ಲಿ ಹೊಸ ಅಲೆಗಳನ್ನು ಉಂಟುಮಾಡುತ್ತಿದೆ” ಎಂದು ಅಭಿಪ್ರಾಯ ಪಟ್ಟರು.

ಶರಣಬಸವ ವಿಶ್ವವಿದ್ಯಾಲಯವು ಉನ್ನತ ಶಿಕ್ಷಣದಲ್ಲಿ ಹೊಸ ಮಾರ್ಗಗಳನ್ನು ಒದಗಿಸುವ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಮತ್ತು ಕೇವಲ ಏಳು ವರ್ಷಗಳ ಹರೆಯದಲ್ಲಿ ಶರಣಬಸವ ವಿಶ್ವವಿದ್ಯಾಲಯವು ತನ್ನ ಸಂಶೋಧನಾ ಕಾರ್ಯಗಳು ಮತ್ತು ಆವಿμÁ್ಕರಗಳು ಹಾಗೂ ಆವಿμÁ್ಕರಗಳಿಗೆ 100 ಪ್ಲಸ್ ಪೇಟೆಂಟ್ಗಳನ್ನು ಪಡೆಯುವುದು ಒಂದು ಸಾಧನೆಯೇ ಸರಿ ಎಂದು ಡಾ ಚಂದಾವರ್ಕರ್ ಅವರು ಹೇಳಿದರು.

ಈ ಕಾರ್ಯಕ್ರಮದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಶ್ರೀ ಬಸವರಾಜ ದೇಶಮುಖ ಮಾತನಾಡಿ, ಡಾ. ಚಂದಾವರಕರ್ ಅವರು ಎಲ್ಲ ವಿದ್ಯಾರ್ಥಿನಿಯರಿಗೆ ಮಾದರಿಯಾಗಿದ್ದು, ಮುಂಬೈನಲ್ಲಿ ಹುಟ್ಟಿ ಬೆಳೆದ ಇವರು 45 ವರ್ಷಗಳ ಹಿಂದೆ ವೃತ್ತಿಜೀವನಕ್ಕೆಂದು ಬಾಗಲಕೋಟೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು. ಶಿಕ್ಷಣ ಕ್ಷೇತ್ರದಲ್ಲಿ ತನ್ನ ಕೊಡುಗೆಗಾಗಿ ಹಲವಾರು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿದ್ದಾರೆ ಎಂದರು.

ಈ ಕಾರ್ಯಕ್ರಮದಲ್ಲಿ ಶರಣಬಸವ ವಿಶ್ವವಿದ್ಯಾಲಯದ ಉಪಕುಲಪತಿ ಪೆÇ್ರ. ಅನಿಲಕುಮಾರ ಬಿಡವೆ ಅಧ್ಯಕ್ಷತೆ ವಹಿಸಿದ್ದರು. ಕುಲಸಚಿವ ಡಾ. ಎಸ್.ಜಿ. ಡೊಳ್ಳೇಗೌಡರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಡೀನ್ ಡಾ. ಲಕ್ಷ್ಮೀ ಪಾಟೀಲ್ ಮಾಕಾ, ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ಗೌರವ ಡೀನ್ ಡಾ. ಬಿ. ರಾಮಕೃಷ್ಣ ರೆಡ್ಡಿ, ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ಡೀನ್ ಡಾ. ನಾಗಬಸವಣ್ಣ ಗುರಗೋಳ ಸೇರಿದಂತೆ ಇತರ ಪ್ರಮುಖರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here