ಬಿಸಿ ಬಿಸಿ ಸುದ್ದಿ

ಅನುಸೂಚಿತ ಜಾತಿ ಮತ್ತು ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ಸಮರ್ಪಕವಾಗಿ ಬಳಸಿ

ಕಲಬುರಗಿ: ಗ್ರಾಮೀಣಾ ಭಾಗದಲ್ಲಿ ಗ್ರಾಮ ಸ್ವರಾಜ್ ಮತ್ತು ಪಂಚಾಯತ ರಾಜ್ ಅಧಿನಿಯಮ 1993 ರ ಪ್ರಕರಣ 61 ಎ ಪ್ರಕಾರ ಅನುಸೂಚಿತ ಜಾತಿ ಮತ್ತು ಪಂಗಡಗಳ ಹಾಗೂ  ವಿಶೇಷ ಸಾಮಥ್ರ್ಯವುಳ್ಳ ಅಭಿವೃದ್ಧಿಗಾಗಿ ಮೀಸಲಿಟ್ಟ ನಿಧಿಯು ಸಮರ್ಪಕವಾಗಿ ಗ್ರಾಮ ಪಂಚಾಯತ ಮಟ್ಟದಲ್ಲಿ ಸದ್ಭಳಕೆಯಾಗಬೇಕೆಂದು ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ಪ್ರಾದೇಶಿಕ ಕೇಂದ್ರದ ಉಪನಿರ್ದೇಶಕರಾದ ಧನರಾಜ್ ಬೋರಾಳೆ ಅವರು ಹೇಳಿದರು.

ನಗರದ ಹೊರವಲಯದಲ್ಲಿರುವ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ಪ್ರಾದೇಶಿಕ ತರಬೇತಿ ಕೇಂದ್ರದಲ್ಲಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ ರಾಜ್ ಇಲಾಖೆ, ಮತ್ತು ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ಮೈಸೂರು ಹಾಗೂ ಪ್ರಾದೇಶಿಕ ಕೇಂದ್ರ ಕಲಬುರಗಿ ರವರ ಸಂಯುಕ್ತಾಶ್ರದಲ್ಲಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಹಾಗೂ  ವಿಶೇಷ ಸಾಮಥ್ರ್ಯವುಳ್ಳ ಅಭಿವೃದ್ಧಿಗಾಗಿ ಮೀಸಲಿಟ್ಟ ನಿಧಿ ಬಳಕೆಯ ಕುರಿತು ಮುಂಬರುವ ದಿನದಲ್ಲಿ ಗ್ರಾಮ ಪಂಚಾಯತ ಮಟ್ಟದಲ್ಲಿ ಆಯೋಜಿಸುವ ತರಬೇತಿಗಳಿಗೆ ಓದುವ ಸಾಮಗ್ರಿ ಸಿದ್ಧಪಡಿಸುವ ಎರಡು ದಿನಗಳ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಗಾರದಲ್ಲಿ ಪಂಚಾಯತ ರಾಜ್ ಅಧಿನಿಯಮದಂತೆ 3 ಹಂತದ ಜಿಲ್ಲಾ ಪಂಚಾಯತ, ತಾಲೂಕು ಪಂಚಾಯತ ಹಾಗೂ ಗ್ರಾಮ ಪಂಚಾಯತನಲ್ಲಿ ಮೀಸಲಿಟ್ಟ ಅನುದಾನವನ್ನು ನಿಜವಾದ ಫಲಾನುಭವಿಗಳು ಪಡೆಯಬೇಕೆಂದರು. ಕಾರ್ಯಾಗಾರದಲ್ಲಿ ವಿವಿಧ ಅನುಷ್ಠಾನ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯತ ಅಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರು, ವಿಕೇಂದ್ರೀಕೃತ ಸಂಯೋಜಕರು, ವಿವಿಧ ಸ್ವಯಂ ಸಂಸ್ಥೆಯ ಪ್ರತಿನಿಧಿಗಳು ಭಾಗವಹಿಸಿ ಸದರಿ ವಿಷಯದ ಕುರಿತು ಮಾಹಿತಿ ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ಮೈಸೂರಿನ ಹಿರಿಯ ಬೋಧಕರಾದ ಟಿ.ಎಂ.ಬೋಧಕರು ವಿಡಿಯೋ ವರ್ಚುವಲ್ ಮೂಲಕ ತರಬೇತಿಯ ರೂಪು ರೇಷೆ ಹಾಗೂ ಉದ್ದೇಶಗಳ ಕುರಿತು ತಿಳಿಸಿದರು. ಪ್ರಾದೇಶಿಕ ಕೇಂದ್ರದ ಬೋಧಕರುಗಳಾದ  ಶಿವಪುತ್ರಪ್ಪ ಗೊಬ್ಬೂರು, ಪ್ರಾಸ್ತವಿಕವಾಘಿ  ಮಾತನಾಡಿದರು. ಬೋಧಕರಾದ ಡಾ.ರಾಜು ಕಂಬಳಿಮಠ ರವರು ನಿರೂಪಿದರು. ಬೋಧಕರಾದ ಸಂತೋಷ ಎನ್ ರವರು ವಂದಿಸಿದರು ಕಾರ್ಯಗಾರದಲ್ಲಿ ಆಡಳಿತ & ಲೆಕ್ಕಾಧಿಕಾರಿಗಳಾದ ಕು.ಸಾಕ್ಷಿ ಪಾಟೀಲ್, ತರಬೇತಿ ವ್ಯವಸ್ಥಾಪಕರಾದ ಪ್ರಶಾಂತ ಅಂಗಡಿ, ಸಿಬ್ಬಂಧಿಗಳಾದ ಅಶ್ವೀನಿ ಪೂಜಾರಿ, ಅರ್ಚನ ಪಾಟೀಲ್ ರವರು ಉಪಸ್ಥಿತರಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

7 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

7 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

7 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

24 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago