ಕಾನೂನಿನ ಬಗ್ಗೆ ಅರಿವಿದ್ದಲ್ಲಿ ಮುಂಬರುವ ದಿನಗಳು ಉತ್ತಮ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೊರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೋಸ್ಕರ “ಮಹಿಳಾ ಮತ್ತು ಮಕ್ಕಳಿಗೆ ಕಾನೂನು ಅರಿವು ಜಾಗೃತಿ” ಎಂಬ ಕಾರ್ಯಕ್ರಮವನ್ನು ಆಯೋಜಿಲಾಗಿತ್ತು.

ಸದರಿ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕಲಬುರಗಿ ಉತ್ತರವಲಯದ ಡಿವೈಎಸ್ಪಿ ಗಳಾದ ಶ್ರೀ ಚಂದ್ರಶೇಖರ ಅವರು ಆಗಮಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಹಾವಿದ್ಯಾಲಯದಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರು ಹಾಗೂ ಮಹಿಳಾ ಶಿಕ್ಷಕರಿಗೆ ಕಾನೂನಿನ ಅರಿವು ಮಾಡಿಕೊಟ್ಟರು.

ಚಂದ್ರಶೇಖರ ಅವರು ಮಾತನಾಡುತ್ತಾ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಕಾನೂನಿನ ಬಗ್ಗೆ ಅರಿವಿದ್ದಲ್ಲಿ ಮುಂಬರುವ ದಿನಗಳಲ್ಲಿ ಅವರು ಉತ್ತಮ ಸಮಾಜ ರೂಪಿಸುವಲ್ಲಿ ಮುಖ್ಯ ಪಾತ್ರ ವಹಿಸುತ್ತಾರೆ ಎಂದು ಹೇಳಿದರು. ವಿದ್ಯಾರ್ಥಿಗಳು ಕಾನೂನಿನ ಬಗ್ಗೆ ಅಧ್ಯಯನ ನಡೆಸಿ ಅರಿವು ಮೂಡಿಸಿಕೊಂಡು ಸಾರ್ವಜನಿಕರಿಗೂ ಸಹ ಕಾನೂನಿನ ಬಗ್ಗೆ ತಿಳಿ ಹೇಳಬೇಕು. ಗ್ರಾಮೀಣ ಭಾಗದಲ್ಲಿ ಅಕ್ಷರಸ್ಥರು ಕಡಿಮೆ ಇರುವುದರಿಂದ ಬಾಲ್ಯ ವಿವಾಹದ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತವೆ. ಹಾಗಾಗಿ ವಿದ್ಯಾರ್ಥಿಗಳು ಈ ಕಾಯ್ದೆಯ ಬಗ್ಗೆ ಅರಿತು ಸುತ್ತಲಿನ ಜನರಿಗೆ ಜಾಗೃತಿ ಮೂಡಿಸಬೇಕು. ಹೆಣ್ಣು ಮಕ್ಕಳು ಲೈಂಗಿಕ ದೌರ್ಜನ್ಯಕ್ಕೆ ಒಳಗಾದರೆ ತಂದೆ, ತಾಯಿ, ಪೋಷಕರಿಗೆ ಅಥವಾ ಶಿಕ್ಷಕರಿಗೆ ತಿಳಿಸಬೇಕು. ಬಾಲ್ಯ ವಿವಾಹದ ಬಗ್ಗೆ ಮಕ್ಕಳಿಗೆ ತಿಳಿದು ಬಂದರೆ ಅದನ್ನು ತಿಳಿಸುವ ಕೆಲಸ ಆಗಬೇಕು. ಬೇರೆಯವರಿಂದ ತೊಂದರೆಯಾದರೆ ಕಾನೂನಿನ ಸಹಾಯ ಪಡೆದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಮಕ್ಕಳಿಗೆ ಸಲಹೆ ನೀಡಿದರು.

ಅತಿಥಿಗಳಾಗಿ ಆಗಮಿಸಿದಂತಹ ಪೋಲಿಸ ಇಲಾಖೆಯ ಎ.ಸಿ.ಪಿ.ಗಳಾದ  ವಾಜೀದ ಪಟೇಲ್ ಅವರು ಮಾತನಾಡುತ್ತ ಮಕ್ಕಳು ಅಪರಿಚಿತರೊಂದಿಗೆ ಸಲಿಗೆಯಿಂದಿರಬಾರದು. ನಿಮ್ಮೊಂದಿಗೆ ಯಾರಾದರು ಅಸಭ್ಯವಾಗಿ ವರ್ತಿಸಿದರೆ ಮೊದಲು ಪೋಷಕರಿಗೆ ತಿಳಿಸಬೇಕು. ಮಕ್ಕಳು ಕಾನೂನಿನ ಬಗ್ಗೆ ತಿಳಿಯಲು ಪ್ರಯತ್ನ ಪಡಬೇಕು ಎಂದು ಹೇಳಿದರು.

ನಂತರ ಅದೇ ಇಲಾಖೆಯ ಮಹಿಳಾ ಪಿ.ಎಸ್.ಐ. ಗಳಾದ ಶ್ರೀಮತಿ ನರ್ಮದಾ ಮಠಪತಿ ಅವರು ಮಾತನಾಡಿ, ಪ್ರತಿಯೊಬ್ಬ ನಾಗರಿಕರಿಗೂ ಕಾನೂನಿನ ಬಗ್ಗೆ ಅರಿವು ಮೂಡಿಸಲು ತಾಲೂಕುವಾರು ಕಾನೂನು ಸೇವಾ ಸಮಿತಿಯನ್ನು ರಚಿಸಿ ಜನರಿಗೆ ಮತ್ತು ಮಕ್ಕಳಿಗೆ ಕಾನೂನಿನ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ನ್ಯಾಯಾಂಗವು ಅತ್ಯಂತ ಶ್ರೇಷ್ಠವಾದುದಾಗಿದೆ. ಇದು ಮನುಷ್ಯರ ಜೀವನದಲ್ಲಿ ರಕ್ಷಾ ಕವಚದಂತೆ ಕೆಲಸ ಮಾಡುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಉಪನ್ಯಾಸಕರಾದ ಬಸವರಾಜ ಗೋಣಿ , ಕಾಶೀಬಾಯಿ, ಶೈಲಜಾ ನಾಕೇದಾರ, ಜ್ಯೋತಿ ಪಾಟೀಲ, ಅನೀತಾ ಪಾಟೀಲ, ಪ್ರೀಯಾ ನಿಗ್ಗುಡಗಿ ಮತ್ತು ಎಲ್ಲಾ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

ಶಿಕ್ಷಣ ವಿಭಾಗದ ಉಪನ್ಯಾಸಕರಾದ ಕಾಶೀಬಾಯಿ ಬೋಗಶೆಟ್ಟಿ ಅವರು ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರನ್ನು ಸ್ವಾಗತಿಸಿ ಕಾರ್ಯಕ್ರಮವನ್ನು ನಿರ್ವಹಿಸಿದರು. ಕನ್ನಡ ವಿಭಾಗದ ಉಪನ್ಯಾಸಕರಾದ ಗೋಣಿ ಬಸವರಾಜ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರನ್ನು ವಂದಿಸಿದರು ಎಂದು ಪತ್ರಿಕಾ ಪ್ರಕಟಣೆಗಾಗಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಮೋಹನರಾಜ ಪತ್ತಾರ ಅವರು ತಿಳಿಸಿದ್ದಾರೆ.

emedialine

Recent Posts

ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಪಟ್ಟಣದ ವಾರ್ಡ್ ಸಂಖ್ಯೆ12 ರಲ್ಲಿ ಸಿ.ಸಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಪುರಸಭೆ ಮಾಜಿ ಅಧ್ಯಕ್ಷ,…

8 hours ago

ಭ್ರಷ್ಟಾಚಾರ ರಹಿತ ವಿವಿಗೆ ಆದ್ಯತೆ: ರಾಘವೇಂದ್ರ ಭೈರಪ್ಪ

ಕಲಬುರಗಿ: ವಿಶ್ವವಿದ್ಯಾಲಯದಲ್ಲಿ ನಡೆಯುವ ಪ್ರತಿಯೊಂದು ಕಾರ್ಯವು ಕೂಡ ಭ್ರಷ್ಟಾಚಾರ ರಹಿತವಾಗಿರಬೇಕು ಎನ್ನುವ ಮನೋಭಾವ ಹೊಂದಿ ಕೆಲಸ ಮಾಡುತ್ತಿದ್ದೇನೆ ಎಂದು ಗುಲಬರ್ಗಾ…

8 hours ago

ಸ್ವಚ್ಛತಾ ಅಭಿಯಾನ ಕಾರ್ಯಕ್ರಮ

ಕಲಬುರಗಿ: ಸ್ವಸ್ತಿಕ ನಗರದ ಅಮರಾವತಿ ಅಪಾಟೆರ್ಂಟ್ ನಿವಾಸಿಗಳಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಜರುಗಿತು. ನಮ್ಮ ದೇಶದ ಪ್ರಧಾನಮಂತ್ರಿ ಅವರ ಸ್ವಚ್ಛ…

8 hours ago

ಸಚಿವ ಸಂಪುಟ ಸಭೆಯಲ್ಲಿ ವಿವಿಧ ಬೇಡಿಕೆ ಈಡೇರಿಕ್ಕೆಗೆ ಆಗ್ರಹ

ಕಲಬುರಗಿ:ಸಚಿವ ಸಂಪುಟ ಸಭೆಯಲ್ಲಿ ಮುಖ್ಯವಾಗಿ ರಾಜ್ಯ ಸರಕಾರದ ವತಿಯಿಂದ ಕಲಬುರಗಿಯಲ್ಲಿ ತೊಗರಿ ಪಾರ್ಕ ಸ್ಥಾಪಿಸಬೇಕು, ಕಲಬುರಗಿ ಅಭಿವೃದ್ದಿ ಮಂಡಳಿಯನ್ನು ಕೆ.ಎಂ.ಎಫ್…

8 hours ago

ಸೇಡಂ: ನೀರಿನಲ್ಲಿ ಮುಳುಗಿ ಮೃತ ಕುಟುಂಬಕ್ಕೆ ಸರ್ಕಾರದಿಂದ 3 ಎಕ್ಕರೆ ಜಮೀನು ನೀಡಿ

ಕಲಬುರಗಿ: ಸೇಡಂ ತಾಲೂಕಿನ ಕುರುಗುಂಟ ಗ್ರಾಮದ  ರಾಜು ನಾಮವಾರ್ ಸಂಗಾವಿ ಹೊಳೆಯಲ್ಲಿ ಮುಳಗಿ ಸಾವನ್ನಪ್ಪಿದ ಮೃತರ ಕುಟುಂಬಕ್ಕೆ 3 ಎಕ್ಕರೆ …

9 hours ago

ಟಿಎಪಿಸಿಎಂ ಅಧ್ಯಕ್ಷರಾಗಿ ಪಾಟೀಲ್ ಅವಿರೋಧ ಆಯ್ಕೆ

ಕಲಬುರಗಿ: ಸಹಕಾರಿ ಕ್ಷೇತ್ರದ ಇಲ್ಲಿನ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ (ಟಿಎಪಿಸಿಎಂ) ಸಂಘದ ಅಧ್ಯಕ್ಷರಾಗಿ ಶರಣಬಸಪ್ಪ ಜಗದೀಶ ಪಾಟೀಲ್…

9 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420