ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ ತಾಯಿಯ ಎದೆಹಾಲು ಅಮೃತಕ್ಕೆ ಸಮ: ಪ್ರೊ. ವಿಜಯರೆಡ್ಡಿ

0
87

ಕಲಬುರಗಿ: ಹುಟ್ಟಿದ ಮಗುವು ಆರೋಗ್ಯಯುತವಾಗಿ ಬೆಳೆಯಲು ತಾಯಿಯ ಎದೆಹಾಲು ಅತ್ಯಂತ ಅವಶ್ಯಕವಾಗಿದೆ. ಇದರಿಂದ ಹುಟ್ಟಿದ ಮಗುವಿಗೆ ತಾಯಿಯ ಎದೆ ಹಾಲುಣಿಸುವುದು ಅಮೃತಕ್ಕೆ ಸಮವಾಗಿದೆ ಎಂದು ನಗರದ ಗೋಪಾಲದೇವ ಜಾಧವ್ ನರ್ಸಿಂಗ್ ಕಾಲೇಜು ಪ್ರಾಂಶುಪಾಲ ಪ್ರೊ.ವಿಜಯರೆಡ್ಡಿ ಹೇಳಿದರು.

ನಗರದ ಮಾಣಿಕೇಶ್ವರಿ ಕಾಲೋನಿಯಲ್ಲಿರುವ
ಆರೋಗ್ಯ ಕೇಂದ್ರದಲ್ಲಿ ಗೋಪಾಲದೇವ ಜಾಧವ ನರ್ಸಿಂಗ್ ಕಾಲೇಜು ಸಹಯೋಗದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ ಪ್ರಯುಕ್ತ ಹಮ್ಮಿಕೊಂಡ ಕಾಲೇಜು ವಿದ್ಯಾರ್ಥಿಗಳ ರಾಲಿಗೆ ಚಾಲನೆ ನೀಡಿ, ಅವರು ಮಾತನಾಡಿದರು.

Contact Your\'s Advertisement; 9902492681

ಹುಟ್ಟಿದ ಅರ್ಧ ಗಂಟೆಯೊಳಗೆ ಮಗುವಿಗೆ ತಾಯಿಯ ಎದೆ ಹಾಲುಣಿಸಬೇಕು. ಹೀಗೆ 6 ತಿಂಗಳವರೆಗೆ ತಾಯಿಯ ಎದೆ ಹಾಲು ನೀಡಿದರೇ ಮಗುವಿಗೆ ಭವಿಷ್ಯದಲ್ಲೇ ಯಾವುದೇ ಮಹಾಮಾರಿ ಕಾಯಿಲೆಯ ಸೋಂಕು ತಗಲುವುದಿಲ್ಲ ಎಂದು ತಾಯಿಂದಿರರಿಗೆ ಸಲಹೆ ನೀಡಿದರು.

ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಬಾಬುರಾವ ಮಾತನಾಡಿ, ಮಗುವಿನ ಬೆಳವಣಿಗೆಗೆ ಬೇಕಾಗುವ ಪೌಷ್ಟಿಕಾಂಶ ಮತ್ತು ಕಾರ್ಬೋಹೈಡ್ರೇಟ್‌ಗಳು ತಾಯಿಯ ಎದೆ ಹಾಲಿನಲ್ಲಿ ಹೇರಳವಾಗಿದ್ದು, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಹೀಗಾಗಿ ಶಿಶುಗಳಿಂದ ಹಿಡಿದು ಎರಡು ಮೂರು ವರ್ಷದ ಮಕ್ಕಳಲ್ಲಿ ಅಪೌಷ್ಠಿಕತೆಯನ್ನು ನಿವಾರಿಸಲು ಸ್ತನ್ಯಪಾನಕ್ಕೆ ಹೆಚ್ಚು ಒತ್ತು ನೀಡಲಾಗುತ್ತದೆ. ಆದರೆ ಇಂದಿನ ಮಹಿಳೆಯರು ಕೆಲಸಕ್ಕೆ ಹೋಗುವುದರಿಂದ ಅಥವಾ ಸೌಂದರ್ಯವು ಮಾಸುತ್ತದೆ ಎನ್ನುವ ಕಾರಣದಿಂದಾಗಿ ಮಗುವಿಗೆ ಹಾಲುಣಿಸಲು ಹಿಂದೇಟು ಹಾಕುತ್ತಾರೆ. ಇದು ಮಕ್ಕಳ ಬೆಳವಣಿಗೆಗೆ ಮಾರಕವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ ಕುರಿತು ನರ್ಸೀಂಗ್ ವಿದ್ಯಾರ್ಥಿಗಳಿಂದ ಬೀದಿ, ಬೀದಿಗಳಲ್ಲಿ ತಾಯಿಯ ಎದೆ ಹಾಲಿನ ಬಗ್ಗೆ ಘೋಷಣೆ ಮೊಳಗಿದವು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here