ಬಿಸಿ ಬಿಸಿ ಸುದ್ದಿ

ಸಚಿವಾಲಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಬಹುಮಾನ ವಿತರಣೆ ನಾಳೆ

ಬೆಂಗಳೂರು: ‘ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಸರ್ಕಾರ ಸಚಿವಾಲಯ ನೌಕರರ ಸಂಘ ಮತ್ತು ವಿಧಾನ ಪರಿಷತ್ ಸಚಿವಾಲಯ ಹಾಗೂ ವಿಧಾನಸಭೆಯ ಸಚಿವಾಲಯ ನೌಕರರ ಸಂಘದ ಆಶ್ರಯದಲ್ಲಿ ವಿಕಾಸಸೌಧ ಸಮ್ಮೇಳನ ಸಭಾಂಗಣದ 419 ರಲ್ಲಿ ಆಗಸ್ಟ್ 9ರಂದು ಮಧ್ಯಾಹ್ನ 1:30 ಗಂಟೆಗೆ ಸಚಿವಾಲಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಬಹುಮಾನ ವಿತರಣಾ ಸಮಾರಂಭ ನಡೆಯಲಿದೆ, ಎಂದು ಕರ್ನಾಟಕ ಸರ್ಕಾರ ಸಚಿವಾಲಯ ನೌಕರ ಸಂಘದ ಅಧ್ಯಕ್ಷ ರಮೇಶ ಸಂಗಾ ಅವರು ತಿಳಿಸಿದರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಖ್ಯಾತ ಸಾಹಿತಿ, ಸಂಭಾಷಣಕಾರ ಮತ್ತು ನಟ, ನಿರ್ದೇಶಕ ಕವಿರತ್ನ ಡಾ. ವಿ. ನಾಗೇಂದ್ರ ಪ್ರಸಾದ್ ಮತ್ತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಿ. ರಣದೀಪ್ ಅವರು ಆಗಮಿಸುವರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಸರಕಾರ ಸಚಿವಾಲಯ ನೌಕರರ ಸಂಘದ ಅಧ್ಯಕ್ಷ ರಮೇಶ್ ಸಂಗಾ ವಹಿಸುವರು. ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸಚಿವಾಲಯ ನೌಕರ ಸಂಘದ ಅಧ್ಯಕ್ಷ ಕೆ.ಎಸ್. ಹೇಮಂತ್ ಮತ್ತು ವಿಧಾನಸಭೆ ಸಚಿವಾಲಯ ನೌಕರರ ಸಂಘದ ಅಧ್ಯಕ್ಷ ಎನ್. ಜೆ. ಮೋಹನ್ ಕುಮಾರ್ ಅವರು ಉಪಸ್ಥಿತರಿರುವರು ಎಂದು ತಿಳಿಸಿದ್ದಾರೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

6 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

8 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

15 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

15 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

15 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago