ಆಳಂದ; ಭಾರತ ವಿಕಾಸ ಸಂಗಮ ಹಾಗೂ ವಿಕಾಸ ಅಕಾಡೆಮಿಯಿಂದ ವಿದ್ಯಾರ್ಥಿಗಳಿಗಾಗಿ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳನ್ನು ಆ. 11 ರಂದು ಆಳಂದ ಪಟ್ಟಣದ ಎಸ್‍ಆರ್‍ಜಿ ಆಂಗ್ಲ್ ಮಾಧ್ಯಮ ಶಾಲೆಯಲ್ಲಿ ಆಯೋಜಿಸಲಾಗಿದೆ ಎಂದು ವಿಕಾಸ ಅಕಾಡೆಮಿ ತಾಲೂಕು ಸಂಚಾಲಕ ಹಾಗೂ ಕಸಾಪ ಅಧ್ಯಕ್ಷ ಹಣಮಂತ ಶೇರಿ, ಖಜೂರಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, 7ನೇ ಭಾರತೀಯ ಸಂಸ್ಕøತಿ ಉತ್ಸವ, ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿಯ ಸ್ವರ್ಣ ಜಯಂತಿ ಸಮಾರಂಭದ ಅಂಗವಾಗಿ ಈ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಆಳಂದ ತಾಲೂಕಿನ ಎಲ್ಲ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಮಕ್ಕಳಿಗೆ ಒಟ್ಟು ವಿವಿಧ 14 ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ವಿವಿಧ ಶಾಲೆಗಳಿಂದ ಸ್ಪರ್ಧೆಗಳಲ್ಲಿ ಭಾಗವಹಿಸುವ ಎಲ್ಲ ಮಕ್ಕಳಿಗೆ ಪ್ರಮಾಣ ಪತ್ರ ಮತ್ತು ವಿಜೇತರಾಗುವ ಮಕ್ಕಳಿಗೆ ಪ್ರಮಾಣ ಪತ್ರದ ಜೊತೆಗೆ ನಗದು ಬಹುಮಾನ ಮತ್ತು ಸ್ಮರಣಿಕೆ ನೀಡಲಾಗುತ್ತದೆ.
ಈ ಸ್ಪರ್ಧೆಗಳ ಬಗ್ಗೆ ಶಿಕ್ಷಣ ಇಲಾಖೆಯಿಂದ ಎಲ್ಲಾ ಶಾಲೆಗಳಿಗೂ ಮಾಹಿತಿ ನೀಡಲಾಗಿದ್ದು ಹೆಚ್ಚಿನ ಮಕ್ಕಳು ಭಾಗವಹಿಸಬೇಕೆಂದು ಮನವಿ ಮಾಡಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…