ಬಿಸಿ ಬಿಸಿ ಸುದ್ದಿ

ಇಂಜಿನಿಯರಿಂಗ್‍ನೊಂದಿಗೆ ಮೂಲಭೂತ ಅಂಶಗಳನ್ನು ಸಂಯೋಜಿಸುವುದರಿಂದ ಉತ್ಪಾದಕ ಸಂಶೋಧನೆ ಮತ್ತು ಯೋಜನೆಗಳಿಗೆ ಅನುಕೂಲ

ಕಲಬುರಗಿ; ಮೂಲಭೂತ ಅಂಶಗಳನ್ನು ಇಂಜಿನಿಯರಿಂಗ್‍ನೊಂದಿಗೆ ಸಂಯೋಜಿಸುವುದು ವಿಭಿನ್ನ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಹಿಡಿಯಲು ಉತ್ಪಾದಕ ಸಂಶೋಧನೆ ಮತ್ತು ಯೋಜನೆಗಳಿಗೆ ಬಹಳ ಅನುಕೂಲವಾಗುತ್ತದೆ ಎಂದು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಪರಿಷತ್ತಿನ (ಕೆಎಸ್‍ಸಿಎಸ್‍ಟಿ) ಕಾರ್ಯದರ್ಶಿ ಹಾಗೂ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‍ಸಿ) ಬೆಂಗಳೂರಿನ ಮೆಟೀರಿಯಲ್ಸ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕರೂ ಆದ ಪೆÇ್ರ. ಅಶೋಕ್ ಎಂ ರಾಯಚೂರು ಅಭಿಪ್ರಾಯಪಟ್ಟರು.

ಕಲಬುರಗಿ ನಗರದ ಶರಣಬಸವ ವಿಶ್ವವಿದ್ಯಾಲಯದ ದೊಡ್ಡಪ್ಪ ಅಪ್ಪಾ ಸಭಾಮಂಟಪದಲ್ಲಿ, ಶುಕ್ರವಾರ ನಡೆದ ಎರಡು ದಿನಗಳ 47ನೇ ಸರಣಿ ವಿದ್ಯಾರ್ಥಿ ಯೋಜನೆ ಕಾರ್ಯಕ್ರಮದ (ಎಸ್‍ಪಿಪಿ) ವಾರ್ಷಿಕ ರಾಜ್ಯಮಟ್ಟದ ಭಿತ್ತಿಪತ್ರ ಮಂಡನೆ ಮತ್ತು ಯೋಜನಾ ಪ್ರದರ್ಶನದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಪೆÇ್ರ. ಅಶೋಕ್ ಕೆಎಸ್‍ಸಿಎಸ್‍ಟಿ ಎಲ್ಲಾ ಯೋಜನಾ ಪ್ರಸ್ತಾಪಗಳನ್ನು ಯಾವಾಗಲೂ ಉತ್ತೇಜಿಸುತ್ತದೆ ಹಾಗೂ ಬೆಂಬಲಿಸುತ್ತದೆ. ಕೆಎಸ್‍ಸಿಎಸ್‍ಟಿ ಮೂಲಭೂತ ಸಮಸ್ಯೆಗಳಿಗೆ ಪರಿಹಾರಗಳನ್ನು ಒದಗಿಸುವಲ್ಲಿ ಹೆಚ್ಚಿನ ಮಹತ್ವವನ್ನು ನೀಡುತ್ತದೆ ಎಂದು ಹೇಳಿದರು.

ಎಸ್‍ಪಿಪಿ ಮತ್ತು ಕೆಎಸ್‍ಸಿಎಸ್‍ಟಿಯು ಉದಯೋನ್ಮುಖ ತಂತ್ರಜ್ಞರು ಮತ್ತು ವಿಜ್ಞಾನಿಗಳಿಗೆ ಅವರ ವಿನೂತನ ಯೋಜನಾ ಕಾರ್ಯಗಳಲ್ಲಿ ತನ್ನ ಸಹಾಯವನ್ನು ಹೇಗೆ ನೀಡುತ್ತಿದೆ ಎಂಬುದರ ಕುರಿತು ವಿವರವಾಗಿ ಹೇಳಿದ ಪೆÇ್ರ. ಅಶೋಕ್, “ವಿದ್ಯಾರ್ಥಿಗಳು ಪ್ರಸ್ತುತಪಡಿಸುವ ಯೋಜನೆಗಳು ಯಾವಾಗಲೂ ಸ್ಥಳೀಯ ಸಮಸ್ಯೆಗಳಿಗೆ ಹಾಗೂ ರಾಜ್ಯವು ಎದುರಿಸುತ್ತಿರುವ ಸಮಸ್ಯೆಗಳಿಗೆ ಮತ್ತು ಸಮಾಜ ಮತ್ತು ಸ್ಥಳೀಯ ಸಮುದಾಯದ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಬೇಕು”. ವಿದ್ಯಾರ್ಥಿಗಳು ಮತ್ತು ವೈಜ್ಞಾನಿಕ ಸಮುದಾಯವು ಸಮಾಜಕ್ಕೆ ಏನನ್ನಾದರೂ ಮರಳಿ ನೀಡುವ ಜವಾಬ್ದಾರಿಯನ್ನು ಹೊಂದಿದೆ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಇಂದು ಸಣ್ಣ ನಗರಗಳಲ್ಲಿ ಘನತ್ಯಾಜ್ಯ ನಿರ್ವಹಣೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಸಂಶೋಧನಾ ಯೋಜನೆಗಳ ಅಗತ್ಯವಿದೆ. ದೊಡ್ಡ ನಗರಗಳಲ್ಲಿ ಘನತ್ಯಾಜ್ಯ ನಿರ್ವಹಣೆಯನ್ನು ಯೋಜಿಸಲಾಗಿದ್ದರೂ, ಈ ಸಮಸ್ಯೆಗೆ ಶಾಶ್ವತ ಪರಿಹಾರವನ್ನು ಕಂಡುಹಿಡಿಯುವುದು ದುಸ್ತರವಾಗಿದೆ ಮತ್ತು ಸಣ್ಣ ನಗರಗಳಲ್ಲಿ ಪರಿಸ್ಥಿತಿ ಇನ್ನೂ ಕೆಟ್ಟದಾಗಿದೆ. “ತಾಲ್ಲೂಕು ಮತ್ತು ನಗರ ಪ್ರದೇಶಗಳಲ್ಲಿ ಸುಸ್ಥಿರ ಜೀವನಕ್ಕಾಗಿ ಘನ ತ್ಯಾಜ್ಯ ನಿರ್ವಹಣೆಯ ಕುರಿತು ಹೆಚ್ಚಿನ ಸಂಶೋಧನಾ ಕಾರ್ಯಗಳ ಅಗತ್ಯವಿದೆ” ಎಂದು ಒತ್ತಿ ಹೇಳಿದರು.

ಇಂಜಿನಿಯರಿಂಗ್ ಕ್ಷೇತ್ರದಲ್ಲಿ ಇಂಟರ್ ಡಿಸಿಪ್ಲಿನರಿ ವಿಧಾನದ ಅಗತ್ಯವನ್ನು ತಿಳಿಸಿದ ಪೆÇ್ರ. ರಾಯಚೂರು, ವಿದ್ಯಾರ್ಥಿಗಳು ತಮ್ಮ ಅಧ್ಯಯನವನ್ನು ಸಂಯೋಜಿಸಲು ಮತ್ತು ಇಂಜಿನಿಯರಿಂಗ್ ವಿಭಾಗದಲ್ಲಿ ಇತರ ವಿದ್ಯಾರ್ಥಿಗಳೊಂದಿಗೆ ಸಂಯೋಜಿತ ಸಂಶೋಧನೆ ನಡೆಸಲು ಯಾವುದೇ ಅಡೆತಡೆಗಳು ಇರಬಾರದು ಹಾಗೂ ಈ ವಿಧಾನವು ಸಮಾಜದ ಪ್ರಯೋಜನಕ್ಕಾಗಿ, ಉತ್ತಮ ಸಂಶೋಧನಾ ಕಾರ್ಯವನ್ನು ತಯಾರಿಸಲು ಒಂದು ವಿಭಾಗದಲ್ಲಿನ ಪರಿಣಿತಿಯನ್ನು ಇನ್ನೊಂದರೊಂದಿಗೆ ಬಳಸಲು ಅವಕಾಶವನ್ನು ನೀಡುತ್ತದೆ ಎಂದು ತಿಳಿಸಿದರು.

ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಶ್ರೀ ಬಸವರಾಜ ದೇಶಮುಖ, 47ನೇ ಸರಣಿ ವಿದ್ಯಾರ್ಥಿ ಯೋಜನೆ ಕಾರ್ಯಕ್ರಮ ಹಾಗೂ ರಾಜ್ಯಮಟ್ಟದ ಭಿತ್ತಿಪತ್ರ ಮಂಡನೆ ಮತ್ತು ಯೋಜನಾ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿ, ಈ ಭಾಗದ ಶೈಕ್ಷಣಿಕ ಸಬಲೀಕರಣಕ್ಕೆ ಶರಣಬಸವೇಶ್ವರ ಸಂಸ್ಥಾನ ಹಾಗೂ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕೊಡುಗೆಯನ್ನು ಸ್ಮರಿಸಿದರು.

ಶರಣಬಸವೇಶ್ವರ ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ ಅವರು ತಮ್ಮ ಅವಿರತ ಶ್ರಮದಿಂದ ಶಿಕ್ಷಣದಿಂದ ವಂಚಿತವಾಗಿದ್ದ ಕಲ್ಯಾಣ ಕರ್ನಾಟಕ ಪ್ರದೇಶವನ್ನು ಏಕಾಂಗಿಯಾಗಿ ಪ್ರಮುಖ ಶಿಕ್ಷಣ ಕೇಂದ್ರವನ್ನಾಗಿ ಪರಿವರ್ತಿಸಿರುವುದು ನಮಗೆಲ್ಲಾ ಹೆಮ್ಮೆಯ ವಿಷಯವೇ ಎಂದರು.

ಪೂಜ್ಯ ಅಪ್ಪಾಜಿ ಅವರು ಈ ಪ್ರದೇಶದಲ್ಲಿ ಮೊದಲ ಖಾಸಗಿ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಜವಾಬ್ದಾರಿಯನ್ನು ಹೊಂದಿದ್ದು, ಸಾವಿರಾರು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮಾರ್ಗಗಳನ್ನು ಒದಗಿಸಿದ್ದಾರೆ, ಅವರು ಗುಲಬರ್ಗಾ ವಿಶ್ವವಿದ್ಯಾಲಯದ ಸ್ಥಾಪನೆಗೆ ಕಾರಣೀಕರ್ತರಾಗಿದ್ದಾರೆ. ಮುಂದಿನ ವರ್ಷ ಇಲ್ಲದಿದ್ದರೆ ಕನಿಷ್ಠ ಒಂದು ವರ್ಷದ ನಂತರ ಬೀದರ್ ನಗರದಲ್ಲಿ ಇದೇ ರೀತಿಯ ಎಸ್‍ಪಿಪಿ ಕಾರ್ಯಕ್ರಮವನ್ನು ಆಯೋಜಿಸುವಂತೆ ಶ್ರೀ ದೇಶಮುಖ್ ಕೆಎಸ್‍ಸಿಎಸ್‍ಟಿಗೆ ವಿನಂತಿಸಿದರು.

ಶರಣಬಸವ ವಿಶ್ವವಿದ್ಯಾಲಯದ ಉಪಕುಲಪತಿ ಪೆÇ್ರ. ಅನಿಲಕುಮಾರ ಬಿಡವೆ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ, ಶರಣಬಸವ ವಿಶ್ವವಿದ್ಯಾಲಯದ ಧ್ಯೇಯವಾಕ್ಯವು “ಯೋಜನಾ ಆಧಾರಿತ ಕಲಿಕೆ” ಮತ್ತು ವಿವಿಯ ಪಠ್ಯಕ್ರಮವು ಆಕ್ಸ್‍ಫರ್ಡ್ ವಿಶ್ವವಿದ್ಯಾಲಯದ ಮಾದರಿಯನ್ನು ಆಧರಿಸಿದೆ ಎಂದರು.

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕನಿಷ್ಠ 6 ಯೋಜನೆಗಳನ್ನು ಮಾಡುವುದು ಕಡ್ಡಾಯವಾಗಿದ್ದು, ಅಂತಿಮ ವರ್ಷದಲ್ಲಿ ಮಾರುಕಟ್ಟೆ ಯೋಜನೆಯೊಂದಿಗೆ ವಿದ್ಯಾರ್ಥಿಗಳು ತಮ್ಮ ಯೋಜನೆಯನ್ನು ಪ್ರದರ್ಶಿಸುವುದು ಅವಶ್ಯಕವಾಗಿದೆ. ಬೇರೆ ವಿಭಾಗಗಳ ವಿದ್ಯಾರ್ಥಿಗಳೊಂದಿಗೆ ಸಹಯೋಗದ ಸಂಶೋಧನೆಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ ಅವರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಮುಕ್ತವಾದ ಆಯ್ಕೆಗಳನ್ನು ಪರಿಚಯಿಸುವುದರಿಂದ ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ತಮ್ಮ ಜ್ಞಾನವನ್ನು ಹೆಚ್ಚಿಸಲು ಹಾಗೂ ತಮ್ಮ ಕೋರ್ಸ್‍ಗಳನ್ನು ಹೊರತುಪಡಿಸಿ ಹೊಸ ವಿಷಯಗಳನ್ನು ಕಲಿಯಲು ಅವಕಾಶ ಮಾಡಿಕೊಟ್ಟಿದ್ದು ಶರಣಬಸವ ವಿಶ್ವವಿದ್ಯಾಲಯ ಎಂದು ಹೆಮ್ಮೆಯಿಂದ ತಿಳಿಸಿದರು.

ಕಾರ್ಯಕ್ರಮದಲ್ಲಿ ಕೆಎಸ್‍ಸಿಎಸ್‍ಟಿಯ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ. ಯು. ಟಿ. ವಿಜಯ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿಶ್ವವಿದ್ಯಾಲಯದ ಕುಲಸಚಿವ ಪೆÇ್ರ. ಎಸ್. ಜಿ. ಡೊಳ್ಳೇಗೌಡರ್ ಸ್ವಾಗತಿಸಿದರು. ಡೈರೆಕ್ಟರ್ ಡಾ. ವಿ. ಡಿ. ಮೈತ್ರಿ, ಡೀನ್ ಡಾ. ಲಕ್ಷ್ಮೀ ಪಾಟೀಲ್ ಮಾಕಾ, ಕುಲಸಚಿವ (ಮೌಲ್ಯಮಾಪನ) ಡಾ. ಎಸ್. ಎಚ್. ಹೊನ್ನಳ್ಳಿ, ಹಣಕಾಸು ಅಧಿಕಾರಿ ಪೆÇ್ರ. ಕಿರಣ್ ಮಾಕಾ ಸೇರಿದಂತೆ ಇತರ ಪ್ರಮುಖರು ಉಪಸ್ಥಿತರಿದ್ದರು.

emedialine

Recent Posts

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

1 hour ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

1 hour ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

1 hour ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

1 hour ago

ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಬೇಡಿ

ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…

1 hour ago

ಸೇಡಂ: `ಅಮ್ಮ ಪ್ರಶಸ್ತಿ’ ಪ್ರದಾನ ಸಮಾರಂಭ ನಾಳೆ

ಸೇಡಂ (ಕಲಬುರಗಿ);  ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…

2 hours ago