ಉತ್ತಮ ಆರೋಗ್ಯಕ್ಕೆ ಮುಂಜಾಗ್ರತೆಯೇ ಸಂಜೀವಿನಿ

0
37

ಕಲಬುರಗಿ: ಶ್ರೀ ಹಿಂಗುಲಾಂಬಿಕಾ ಶಿಕ್ಷಣ ಸಂಸ್ಥೆಯ ಶ್ರೀ ಹಿಂಗುಲಾಂಬಿಕಾ ಆರ್ಯುವೇದ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ, ಸಂಶೋಧನಾ ಕೇಂದ್ರ ಹಾಗೂ ಮಲ್ಲೇಶಪ್ಪ ಮಿಣಜಗಿ ಪ್ರತಿಷ್ಠಾನದ ಆಶ್ರಯದಲ್ಲಿ ನಗರದ ಗಾಜೀಪುರ ಏರಿಯಾದ ಅತ್ತರ ಕಾಂಪೌಂಡ್‍ನಲ್ಲಿ ಖ್ಯಾತ ಪ್ರಸ್ತುತಿ ಹಾಗೂ ಸ್ತ್ರೀರೋಗ ತಜ್ಞೆ ಡಾ. ಇಂದಿರಾ ಶಕ್ತಿ ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

ಸಾರ್ವಜನಿಕರು ತಮ್ಮ ಆರೋಗ್ಯದ ಬಗ್ಗೆ ತುಂಬಾ ಮುಂಜಾಗ್ರತೆವಹಿಸಬೇಕು. ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ಸೇವನೆ, ಐರಾನ್ ಮತ್ತು ಕ್ಯಾಲ್ಸಿಯಂ ಮಾತ್ರೆಗಳು ಕಡ್ಡಾಯವಾಗಿ ಸೇವಿಸಬೇಕು. ನಿಯಮಿತವಾಗಿ ವೈದ್ಯರ ಬಳಿ ಹೋಗಿ ತಪಾಸಣೆ ಮಾಡಿಕೊಳ್ಳಬೇಕು ಎಂದು ತಿಳಿಸಿದ ಶಕ್ತಿ, ರಾಜ್ಯ ಸರ್ಕಾರವು ಮಹಿಳೆಯರ ಮತ್ತು ಮಕ್ಕಳ ಆರೋಗ್ಯದ ಬಗೆಗಿನ ಜನಪರ ಯೋಜನೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

Contact Your\'s Advertisement; 9902492681

ಪ್ರತಿ ತಿಂಗಳು ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಉಚಿತ ಔಷಧಿ, ಉಚಿತ ರಕ್ತ ಪರೀಕ್ಷೆ ಮೊದಲಾದ ಚಿಕಿತ್ಸಾ ನೀಡಲಾಗುತ್ತಿದ್ದು, ಇದನ್ನು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು. ಸುಮಾರು 100ಕ್ಕೂ ಹೆಚ್ಚು ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಬಂದು ಆರೋಗ್ಯ ತಪಾಸಣೆ ನಡೆಸಿಕೊಂಡರು.

ಕಾಲೇಜಿನ ಪ್ರಾಂಶುಪಾಲ ಡಾ. ಅಲ್ಲಮಪ್ರಭು ಗುಡ್ಡಾ, ಆಸ್ಪತ್ರೆಯ ಅಧೀಕ್ಷಕ ಡಾ. ವಿಜಯಲಕ್ಷ್ಮೀ ಹರನೂರಕರ್, ಡಾ. ರಾಮರಾವ ದೇಶಮುಖ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here