ಸೊಲ್ಲಾಪುರ : ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ಆದರ್ಶ ಕನ್ನಡ ಬಳಗ ಮಹಾರಾಷ್ಟç ಹಾಗೂ ಸೊಲ್ಲಾಪುರ ಜಿಲ್ಲೆಯ ಕನ್ನಡಪರ ಸಂಘ-ಸAಸ್ಥೆಗಳ ಸಹಯೋಗದಲ್ಲಿ ಭಾರತ ಸ್ವಾತಂತ್ರೊö್ಯÃತ್ಸವದ ಅಮೃತ ಮಹೋತ್ಸವದ ಅಂಗವಾಗಿ ‘ಗಡಿನಾಡು ಕನ್ನಡ ಸಾಹಿತ್ಯ ಸಾಂಸ್ಕೃತಿಕ ಉತ್ಸವ’ ಕಾರ್ಯಕ್ರಮ ಅಗಷ್ಟ ೧೧ ರಂದು ಸೊಲ್ಲಾಪುರದಲ್ಲಿ ಆಯೋಜಿಸಲಾಗಿದೆ ಎಂದು ಆದರ್ಶ ಕನ್ನಡ ಬಳಗದ ಅಧ್ಯಕ್ಷ ಮಲಿಕಜಾನ್ ಶೇಖ ತಿಳಿಸಿದರು.
ನಗರದ ಸತ್ಯವಿಜಯ ಸಭಾಭವನದಲ್ಲಿ ಅಗಷ್ಟ ೧೧ ರಂದು ‘ಗಡಿನಾಡು ಕನ್ನಡ ಸಾಹಿತ್ಯ ಸಾಂಸ್ಕೃತಿಕ ಉತ್ಸವ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಬೆಳಿಗ್ಗೆ ೯.೩೦ ಗಂಟೆಗೆ ವಿವಿಧ ಕಲಾ ತಂಡಗಳೊAದಿಗೆ ಭುವನೇಶ್ವರಿ ದೇವಿ ಮೇರವಣಿಗೆ ಅದ್ದೂರಿಯಾಗಿ ನಡೆಯಲಿದ್ದು, ಬಸವಾರೂಢ ಮಠದ ಪೂಜ್ಯ ಶಿವಪುತ್ರ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಮತ್ತು ಮಾಜಿ ನಗರಸೇವಕ ರಮೇಶ ನಾರಾಯಣದಾಸ ರಾಠಿಯವರ ಅಧ್ಯಕ್ಷತೆಯಲ್ಲಿ ರೇವಣಸಿದ್ಧ ಶಿವಶರಣ ಸೇವಾಸಂಘದ ಅಧ್ಯಕ್ಷ ಪರಮೇಶ್ವರ ಕಂಚೆ ಮೆರವಣಿಗೆ ರಥೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.
ಬೆಳಿಗ್ಗೆ ೧೦ ಗಂಟೆಗೆ ನಾಗಣಸೂರ ವಿರಕ್ತಮಠದ ಪೂಜ್ಯ ಡಾ|| ಅಭಿನವ ಬಸವಲಿಂಗ ಮಹಾಸ್ವಾಮಿಜಿ ಮತ್ತು ಸಸ್ತಾಪೂರ ಶಾಖಾಮಠದ ಪೂಜ್ಯ ಡಾ. ಈಶ್ವರಾನಂದ ಮಹಾಸ್ವಾಮಿಜಿಗಳ ಸಾನಿಧ್ಯದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಅವರ ಅಧ್ಯಕ್ಷತೆಯಲ್ಲಿ ಸಂಸದೆ ಪ್ರಣಿತಿ ಶಿಂಧೆ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಶಾಸಕ ಸಚಿನ ಕಲ್ಯಾಣಶೆಟ್ಟಿ ಗಡಿನಾಡು ಪ್ರಶಸ್ತಿ ಪ್ರದಾನ ಮಾಡಲಿದ್ದು, ಶಾಸಕ ವಿಜಯಕುಮಾರ ದೇಶಮುಖ ಸ್ಮರಣ ಸಂಚಿಕೆ ಬಿಡುಗಡೆ ಗೋಳಿಸುವರು. ಶಾಸಕ ಸುಭಾಷ ದೇಶಮುಖ ಜ್ಯೋತಿ ಬೆಳಗಿಸಲಿದ್ದು, ಮಾಜಿ ಸಚಿವ ಸಿದ್ಧರಾಮ ಮ್ಹೇತ್ರೆ ಅವರು ಭುವನೇಶ್ವರಿ ಪ್ರತಿಮೆಗೆ ಪೂಜೆ ಸಲ್ಲಿಸುವರು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ ಮತ್ತಿಹಳ್ಳಿ ಪ್ರಾಸ್ತವಿಕ ನುಡಿಗಳನ್ನಾಡುವರು.
ಮಧ್ಯಾಹ್ನ ೧೨ ಗಂಟೆಗೆ ಗಡಿನಾಡು ವಿಚಾರಗೋಷ್ಠಿ ಕಾರ್ಯಕ್ರಮ ನಡೆಯಲಿದ್ದು, ಅಕ್ಕಲಕೋಟ ವಿರಕ್ತಮಠದ ಪೂಜ್ಯ ಬಸವಲಿಂಗ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಕನ್ನಡ ಸಾಹಿತ್ಯ ಅಕಾಡೆಮಿ ಸದಸ್ಯ ಡಾ. ಸಿದ್ಧಾರಾಮ ಹೊನ್ಕಲ್ ಅವರ ಅಧ್ಯಕ್ಷತೆಯಲ್ಲಿ ‘ಮಹಾರಾಷ್ಟçದ ಅಭಿವೃದ್ಧಿಯಲ್ಲಿ ಕನ್ನಡ-ಕನ್ನಡಿಗರ ಪಾತ್ರ’ ಕುರಿತು ಕಲಬುರಗಿಯ ಸಾಹಿತಿ ಡಾ|| ಶ್ರೀಶೈಲ ನಾಗರಾಳ, ‘ಕನ್ನಡ-ಮರಾಠಿ ಸಾಹಿತ್ಯ-ಸಂಸ್ಕೃತಿ ಸಾಮರಸ್ಯ’ ಕುರಿತು ಬಿದರ ಜಿಲ್ಲೆಯ ಸಾಹಿತಿ ಡಾ|| ಗವಿಸಿದ್ದಪ್ಪ ಪಾಟೀಲ ಹಾಗೂ ‘ಗಡಿಯಾಚೆಗಿನ ಶರಣ ಸಂಪ್ರದಾಯ’ ಕುರಿತು ಯುವ ಸಾಹಿತಿ ಡಾ. ರಾಜಕುಮಾರ ಹಿರೇಮಠ ಉಪನ್ಯಾಸ ನೀಡಲಿದ್ದಾರೆ.
ಮಧ್ಯಾಹ್ನ ೨ ಗಂಟೆಗೆ ಬಹುಭಾಷಾ ಕವಿಗೋಷ್ಠಿ ನಡೆಯಲಿದ್ದು ತದನಂತರ ೩.೩೦ ಗಂಟೆಗೆ ಸಂವಾದ – ಮಹಾರಾಷ್ಟçದ ಗಡಿ ಕನ್ನಡಿಗರ ಸ್ಥಿತಿಗತಿ ಸೇರಿದಂತೆ ಒಟ್ಟು ೩ ಗೋಷ್ಠಿಗಳು ನಡೆಯಲಿದ್ದು, ಅಗಷ್ಟ ೧೧ ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ತೋಳನೂರ ಗಂಗಾಧರ ಸ್ವಾಮಿ ಮಠದ ಪೂಜ್ಯ ಚೆನ್ನಮಲ್ಲ ಮಹಾಸ್ವಾಮಿಗಳು ಸಾನಿಧ್ಯ ವಹಿಸಲಿದ್ದಾರೆ. ಮುಗಳಿ ಬಸವಮಂಟಪದ ಪೂಜ್ಯ ಮಹಾನಂದಾತಾಯಿ ಹಿರೇಮಠ ಸಮಾರೋಪ ನುಡಿಗಳನ್ನಾಡುವರು.
ಸುದ್ದಿಗೋಷ್ಠಿಯಲ್ಲಿ ಕಸಾಪ ಮಹಾರಾಷ್ಟç ಘಟಕದ ಗೌರವ ಕಾರ್ಯದರ್ಶಿ ಶರಣಪ್ಪ ಫುಲಾರಿ, ಗುರುಬಸು ವಗ್ಗೋಲಿ, ಕೋಶಾಧ್ಯಕ್ಷ ಮಹೇಶ ಮೇತ್ರಿ, ಆದರ್ಶ ಕನ್ನಡ ಬಳಗದ ಉಪಾಧ್ಯಕ್ಷ ರಾಜಶೇಖರ ಉಮರಾಣಿಕರ, ಬಸವರಾಜ ಧನಶೆಟ್ಟಿ, ಚಿದಾನಂದ ಮಠಪತಿ, ವಿದ್ಯಾಧರ ಗುರವ, ಗಿರೀಶ ಜಕಾಪುರೆ ಸೇರಿದಂತೆ ಮೊದಲಾದವರು ಇದ್ದರು.
ಸಮಾರಂಭದಲ್ಲಿ ಪಾಲ್ಗೋಳ್ಳಲಿರುವ ಪ್ರಮುಖ ಅತಿಥಿಗಳು : ಸಿದ್ಧರಾಮೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ಧರ್ಮರಾಜ ಕಾಡಾದಿ, ಮಾಜಿ ಶಾಸಕ ವಿಶ್ವನಾಥ ಚಾಕೋತೆ, ಯುವ ನಾಯಕಿ ಶೀತಲ ಮೇತ್ರೆ, ಜಿಲ್ಲಾ ಪಂ. ಮಾಜಿ ಕೃಷಿ ಸಭಾಪತಿ ಮಲ್ಲಿಕಾರ್ಜುನ ಪಾಟೀಲ, ಜಿಲ್ಲಾ ಪಂ. ಮಾಜಿ ವಿಪಕ್ಷ ನಾಯಕ ಆನಂದ ತಾನವಡೆ, ಉದ್ಯಮಿ ಮಹಾದೇವ ಕೋಗನೂರೆ, ಅಶ್ವಿನಿ ಆಸ್ಪತ್ರೆಯ ಮುಖ್ಯಸ್ಥ ಕಿರಣ ಜಾಮಗೊಂಡ, ಶಿವಸೇನಾ ನಾಯಕ ಅಮರ ಪಾಟೀಲ, ಬಿಜೆಪಿಯ ಉದಯ ಪಾಟೀಲ, ಮಾಜಿ ನಗರಸೇವಕ ಗುರುಶಾಂತ ದುತ್ತೂರಗಾಂವಕರ, ಈರಪ್ಪ ಸಾಲಕ್ಕಿ ಮಹಾಂತೇಶ ಕವಲಗಿ, ಸಿದ್ಧೇಶ್ವರ ಜೋಕಾರೆ, ಶರಣಬಸಪ್ಪ ಖೇಡಗಿ, ಕಿರಣ ಪೂಜಾರಿ ಸೇರಿದಂತೆ ಇನ್ನಿತರರು ಪಾಲ್ಗೋಳ್ಳಲಿದ್ದಾರೆ.
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ಆದರ್ಶ ಕನ್ನಡ ಬಳಗ ಮಹಾರಾಷ್ಟç ಹಾಗೂ ಸೊಲ್ಲಾಪುರ ಜಿಲ್ಲೆಯ ಕನ್ನಡಪರ ಸಂಘ-ಸAಸ್ಥೆಗಳ ಸಹಯೋಗದಲ್ಲಿ ಭಾರತ ಸ್ವಾತಂತ್ರೊö್ಯÃತ್ಸವದ ಅಮೃತ ಮಹೋತ್ಸವದ ಅಂಗವಾಗಿ ‘ಗಡಿನಾಡು ಕನ್ನಡ ಸಾಹಿತ್ಯ ಸಾಂಸ್ಕೃತಿಕ ಉತ್ಸವ’ ಕಾರ್ಯಕ್ರಮ ಅಗಷ್ಟ ೧೧ ರಂದು ಸೊಲ್ಲಾಪುರದಲ್ಲಿ ಆಯೋಜಿಸಲಾಗಿದ್ದು, ಉತ್ಸವದಲ್ಲಿ ಗಡಿಭಾಗದ ಕನ್ನಡ ಸಂಘ-ಸAಸ್ಥೆಗಳು, ಕನ್ನಡ ಹೋರಾಟಗಾರರು, ಸಾಹಿತಿಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಾಭಿಮಾನಿಗಳು ಪಾಲ್ಗೊಂಡು ಉತ್ಸವಕ್ಕೆ ಮೆರಗು ತರಬೇಕು.- ಸೋಮಶೇಖರ ಜಮಶೆಟ್ಟಿ, ಅಧ್ಯಕ್ಷರು, ಕಸಾಪ ಮಹಾರಾಷ್ಟç ಗಡಿನಾಡು ಘಟಕ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…