ಕನಕಗಿರಿ: ತಾಲೂಕಿನ ಸಮಗ್ರ ಅಭಿವೃದ್ದಿಗೆ ಕೆಡಿಪಿ ಸದಸ್ಯರು ಕೆಲಸ ಮಾಡುವಂತೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕೆ.ರಾಜಶೇಖರ್ ಹೇಳಿದರು.
ಅವರು, ಪಟ್ಟಣದ ತಾಲೂಕು ಪಂಚಾಯತ್ ಕಚೇರಿಯ ಸಭಾಂಗಣದಲ್ಲಿ ತಾ.ಪಂ ಯ ತ್ರೈಮಾಸಿಕ ಪರಿಶೀಲನಾ ಕೆಡಿಪಿ ಸಮಿತಿಯ ಸದಸ್ಯರ ಪದಗ್ರಹಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಾಲೂಕಿನ ಅಭಿವೃದ್ದಿಯ ಕುರಿತು ಸದಸ್ಯರು ಸಲಹೆಗಳನ್ನು ನೀಡುವಂತೆ ತಿಳಿಸಿದರು.
ನಂತರ ನೂತನ ಕೆಡಿಪಿ ಸದಸ್ಯರಾದ ಶರಣಪ್ಪ ತೆಗ್ಗಿನಮನಿ, ಕೆ.ವೀರವೆಂಕಟ ವಿರುಪಾಕ್ಷಿ, ಹುಸೇನಸಾಬ್ ಹುಲಿಹೈದರ್, ಗಂಗಮ್ಮ ಚಿಕ್ಕಡಂಕನಕಲ್, ರಾಮನಗೌಡ ಬುನ್ನಟ್ಟಿ, ಯಲ್ಲಪ್ಪ ಉದ್ದಿಹಾಳ ಅವರನ್ನು ತಾಲೂಕು ಪಂಚಾಯತಿ ವತಿಯಿಂದ ಸನ್ಮಾನಿಸಿ ಆದೇಶ ಪತ್ರವನ್ನು ನೀಡುವ ಮೂಲಕ ಗೌರವಿಸಲಾಯಿತು. ಇದೇ ವೇಳೆ ಜಿ.ಪಂ ಯ ಕೆಡಿಪಿ ಸದಸ್ಯರಾಗಿ ನಾಮನಿರ್ದೇಶನಗೊಂಡ ನಾಗಪ್ಪ ಹುಗ್ಗಿ ಸಿರಿವಾರ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ತಹಶೀಲ್ದಾರ್ ವಿಶ್ವನಾಥ ಮುರುಡಿ, ಮಾಜಿ ಜಿ.ಪಂ ಸದಸ್ಯರಾದ ವಿರೇಶ್ ಸಮಗಂಡಿ, ಹನುಮೇಶ್ ನಾಯಕ ಸೇರಿದಂತೆ ಪಟ್ಟಣ ಪಂಚಾಯತಿ, ತಾ.ಪಂ, ಗ್ರಾ.ಪಂ ಅಧ್ಯಕ್ಷರು, ಸದಸ್ಯರು ಹಾಗೂ ಹಲವರು ಭಾಗಿಯಾಗಿದ್ದರು. ಪಿಡಿಓ ಬಸವರಾಜ್ ಸಂಕನಾಳ ಅವರು ಕಾರ್ಯಕ್ರಮ ನಿರೂಪಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…