ಕಲಬುರಗಿ: ವಿದ್ಯಾರ್ಥಿಗಳ ಭವಿಷ್ಯದಲ್ಲಿ ಸಂಸ್ಕಾರವಂತ ಜೀವನ ನಡೆಸಲು ಹಾಗೂ ಆರೋಗ್ಯಕರ ಸಮಾಜ ಕಟ್ಟಲು ರಾಷ್ಟ್ರೀಯ ಸೇವಾ ಯೋಜನೆ ಪೂರಕ ವೇದಿಕೆ ಎಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಹಾಗೂ ಪದವಿ, ಪದವಿ ಪೂರ್ವ, ಕಾನೂನು ಮಹಾವಿದ್ಯಾಲಯಗಳ ಸಂಯೋಜಕರಾದ ನಾಗಣ್ಣ ಘಂಟಿ ಹೇಳಿದರು .
ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸೀರಿ ಮಹಿಳಾ ಮಹಾವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ವಾರ್ಷಿಕ ವಿಶೇಷ ಶಿಬಿರ 2023-24 ನ್ನು ಉದ್ಘಾಟನೆ ಮಾಡಿ ಮಾತನಾಡುತ್ತಾ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಸೇವೆಯ ಮೂಲಕ ಸಮಾಜದ ಅರಿವು ಮೂಡಿಸುವುದು ರಾಷ್ಟ್ರೀಯ ಸೇವಾ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.
ಇದರಿಂದ ಸ್ವಯಂಸೇವಕರ ವ್ಯಕ್ತಿತ್ವ ವಿಕಸನವಾಗುತ್ತದೆ. ಸಮಾಜಸೇವೆಯ ಪ್ರಜ್ಞೆ ಜಾಗೃತಗೊಳ್ಳುತ್ತದೆ. ಸೇವೆ ಎನ್ನುವ ಪದ ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಅತ್ಯಂತ ಮಹತ್ವವನ್ನು ಪಡೆದಿದೆ. ನಮ್ಮಲ್ಲಿರುವ ಶ್ರಮ, ವಿದ್ಯೆ, ಬುದ್ಧಿ, ಜ್ಞಾನ, ಕೌಶಲ್ಯ, ಆರ್ಥಿಕ ಸೌಲಭ್ಯ ಇತ್ಯಾದಿಗಳನ್ನು ಸಮಾಜದ, ದೇಶದ ಒಳಿತಿಗಾಗಿ ಫಲಾಪೇಕ್ಷೆ ಇಲ್ಲದೆ ಅರ್ಪಣಾಮನೋಭಾವದಿಂದ ನೀಡುವ ಸಹಾಯವೇ ಸೇವೆ. ಸೇವಾ ಚಟುವಟಿಕೆ ನಮ್ಮ ಜೀವನದ ಅವಿಭಾಜ್ಯ ಭಾಗ ಹಾಗೂ ಸ್ವಭಾವವಾಗಬೇಕು ಎಂದು ಕರೆ ನೀಡಿದರು.
ರಾಷ್ಟ್ರೀಯ ಸೇವಾ ಯೋಜನೆಯ ಉದ್ದೇಶಗಳನ್ನು ಜೀವನದ ಉದ್ದಕ್ಕೂ ಪಾಲಿಸಬೇಕು. ಶಿಬಿರದಲ್ಲಿ ಕಲಿತುಕೊಂಡ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು. ಶಿಬಿರದಲ್ಲಿ ಪಾಲ್ಗೊಂಡ ಶಿಬಿರಾರ್ಥಿಗಳು ಸಂಸ್ಕಾರ ಹೆಚ್ಚಿಸುವಂತ ಮಾನವಿಯ ಮೌಲ್ಯಗಳನ್ನು ಅಳವಡಿಸಿಕೊಂಡಲ್ಲಿ ಭವಿಷ್ಯದಲ್ಲಿ ಉಪಯೋಗಕ್ಕೆ ಬುರುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ ರಾಜೇಂದ್ರ ಕೊಂಡಾ ರಾಷ್ಟ್ರೀಯ ಸೇವಾ ಯೋಜನೆಯ ಮಹತ್ವ ಕುರಿತು ಮಾತನಾಡಿದರು.
ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ವಿಜಯಪೂರದ ರಾಷ್ಟ್ರೀಯ ಸೇವಾ ಯೋಜನೆಯ ನೋಡಲ್ ಅಧಿಕಾರಿ ಹಾಗೂ ಕಾಲೇಜಿನ ಬಿ ಯುನಿಟ್ ಕಾರ್ಯಕ್ರಮ ಅಧಿಕಾರಿ ಡಾ ಮಹೇಶ್ ಕುಮಾರ್ ಗಂವ್ಹಾರ ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರನ್ನೂ ಸ್ವಾಗತಿಸಿದರು, ಕಾರ್ಯಕ್ರಮದಲ್ಲಿ ಅ ಯುನಿಟ್ ಕಾರ್ಯಕ್ರಮ ಅಧಿಕಾರಿ ಡಾ ರೇಣುಕಾ ಎಚ್, ಸ್ವಯಂ ನಿಧಿ ಘಟಕದ ಕಾರ್ಯಕ್ರಮ ಅಧಿಕಾರಿ ಶ್ರೀಮತಿ ಸುಷ್ಮಾ ಕುಲಕರ್ಣಿ ಹಾಗೂ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಮಾಧ್ಯಮ ಸಂಯೋಜಕ ಐ ಕೆ ಪಾಟೀಲ್, ಪ್ರಾಧ್ಯಾಪಕರಾದ ಡಾ ಪ್ರೇಮಚಂದ್ ಚವಾಣ್, ಡಾ ಸುಭಾಷ್ ದೊಡ್ಡಮನಿ, ಡಾ ವಿಶ್ವನಾಥ್ ದೇವರಮನಿ, ಡಾ ರಾಜೇಶ್ ಎಂ ಉಪಸ್ಥಿತರಿದ್ದರು. ಶ್ರೀಮತಿ ಕವಿತಾ ಎಂ ಕಾರ್ಯಕ್ರಮ ನಿರೂಪಿಸಿದರು.