ಸುರಪುರ: ನಗರದ ಕಬಾಡಗೇರಾ ಭಕ್ತರು ಶ್ರಾವಣ ಮಾಸದ ಅಂಗವಾಗಿ ಲಿಂಗಸೂಗುರ ತಾಲೂಕಿನ ಗುಡಗುಂಟ ಗ್ರಾಮದ ಅಮರೇಶ್ವರ ದೇವಸ್ಥಾನಕ್ಕೆ 16ನೇ ವರ್ಷದ ಪಾದಯಾತ್ರೆ ಹೊರಟಿದ್ದಾರೆ.ಪ್ರತಿ ವರ್ಷವೂ ಶ್ರಾವಣ ಮಾಸದ ಸಂದರ್ಭದಲ್ಲಿ ಪಾದಯಾತ್ರೆ ನಡೆಸುತ್ತಿದ್ದು,ಅದರಂತೆ ಈ ವರ್ಷದ ಪಾದಯಾತ್ರೆಯನ್ನು ಆರಂಭಿಸಲಾಗಿದೆ.
ನಗರದ ಕಬಾಡಗೇರಾದಲ್ಲಿರುವ ಈಶ್ವರ ದೇವಸ್ಥಾನ ದಿಂದ ಪಾದಯಾತ್ರೆಗೆ ಚಾಲನೆ ನೀಡಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು,ಗುಡಗುಂಟ ಅಮರೇಶ್ವರ ಕ್ಷೇತ್ರಕ್ಕೆ ಕಳೆದ 15 ವರ್ಷಗಳಿಂದ ಹೋಗಲಾಗಿದೆ. ಈ ವರ್ಷ 16ನೇ ವರ್ಷದ ಪಾದಯಾತ್ರೆ,ಇಲ್ಲಿಯ ಅನೇಕ ಭಕ್ತರು ಗುಡಗುಂಟ ಅಮರೇಶ್ವರ ಕ್ಷೇತ್ರದ ಭಕ್ತರಾಗಿದ್ದು,ಈ ವರ್ಷವು ಶ್ರದ್ಧಾ ಭಕ್ತಿಯಿಂದ ಪಾದಯಾತ್ರೆ ನಡೆಸಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಶರಣಯ್ಯ ಸ್ವಾಮಿ ಮಠಪತಿ,ಮಲ್ಲಿಕಾರ್ಜುನ ಹೂಗಾರ,ಶಂಕ್ರಪ್ಪ ಹೂಗಾರ,ಬಸವರಾಜ ಹೂಗಾರ, ಮಲ್ಲಿಕಾರ್ಜುನ ಮುಧೋಳ,ಶರಣು ಕಳ್ಳಿಮನಿ,ಬಸವರಾಜ ಜಾಲಹಳ್ಳಿ,ಯಲ್ಲಪ್ಪ ಜಾಗಿರದಾರ,ಬಸ್ಸಯ್ಯ ಸ್ವಾಮಿ,ಯಲ್ಲಪ್ಪ ನಾಯಕ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…