ಬಿಸಿ ಬಿಸಿ ಸುದ್ದಿ

ಯಕ್ಷಗಾನ ಭಾಗವತ ರಾಘವೇಂದ್ರ ಮಯ್ಯಗೆ ವಿಶೇಷ ಸನ್ಮಾನ

ಕಲಬುರಗಿ : ಯಕ್ಷಗಾನದ ಬಡಗುತಿಟ್ಟು ಪ್ರಕಾರದಲ್ಲಿ ಗಮನಾರ್ಹ ಸಾಧನೆ ಮಾಡಿ ಯಕ್ಷಗಾನವನ್ನು ರಾಜ್ಯ ಮತ್ತು ಹೊರ ರಾಜ್ಯ ಗಳಲ್ಲಿ ಜನಪ್ರಿಯಗೊಳಿಸಿದ ಕುಂದಾಪುರ ಶ್ರೀ ಮಹಾಗಣಪತಿ ಪ್ರವಾಸಿ ಯಕ್ಷಗಾನ ಮಂಡಳಿಯ ಖ್ಯಾತ ಭಾಗವತರಾದ ರಾಘವೇಂದ್ರ ಮಯ್ಯ ಅವರನ್ನು ಕಲ್ಬುರ್ಗಿಯಲ್ಲಿ ಆಗಸ್ಟ್ 10ರಂದು ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು.

ಖ್ಯಾತ ಉದ್ಯಮಿಗಳಾದ ಮಹಾದೇವ ಗುತ್ತೇದಾರ್ ಶಾಲು ಹಾರ ಕಾಣಿಕೆ ನೀಡಿ ಗೌರವಿಸಿ ನಾಡಿನ ಮಹೋನ್ನತ ಸಂಸ್ಕೃತಿಯ ಭಾಗ ಯಕ್ಷಗಾನದ ಪ್ರಸಾರ ಪ್ರಚಾರ ಕಾರ್ಯವನ್ನು ಮಾಡುತ್ತಿರುವ ರಾಘವೇಂದ್ರ ಮಯ್ಯರಿಗೆ ಶುಭಕೋರಿ ಕಲ್ಬುರ್ಗಿಯಲ್ಲಿ ಯಕ್ಷಗಾನ ಪ್ರದರ್ಶನ ನೀಡಲು ಆಗಮಿಸಿದ ರಾಘವೇಂದ್ರ ಮಯ್ಯ ಮತ್ತು ಅವರ ಕಲಾವಿದರ ಬಳಗವು ಆಗಮಿಸಿರುವುದು ಸಂತಸದ ಹಾಗೂ ಸ್ತುತ್ಯಾರ್ಹ ಸಂಗತಿ ಎಂದರು.

ಆಕಾಶವಾಣಿಯ ನಿವೃತ್ತ ಹಿರಿಯ ಕಾರ್ಯಕ್ರಮ ನಿರ್ವಹಣಾಧಿಕಾರಿ ಡಾ. ಸದಾನಂದ ಪೆರ್ಲ ಮಾತನಾಡಿ ಶ್ರೀ ಮಹಾಗಣಪತಿ ಪ್ರವಾಸಿ ಯಕ್ಷಗಾನ ತಂಡವು ತನ್ನ 31ನೇ ವರ್ಷದ ಯಕ್ಷ ಪ ರಾಜ್ಯ ಮತ್ತು ಹೊರ ರಾಜ್ಯಗಳಲ್ಲಿ ಮಾಡಿ ಮಹಾರಾಷ್ಟ್ರ ಗೋವಾ,ತೆಲಂಗಾಣ ಹಾಗು ಕರ್ನಾಟಕದಲ್ಲಿ ಕರಾವಳಿಯ ಅಪೂರ್ವ ಕಲಾ ವೈಭವವನ್ನು ಜನಪ್ರಿಯಗೊಳಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಉದ್ಯಮಿ ರಾಜೇಶ್ ಮತ್ತು ಸಾಯಿನಾಥ ಎಂ ಗುತ್ತೇದಾರ್ ಉಪಸ್ಥಿತರಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

5 mins ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

6 mins ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

9 mins ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

17 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

19 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago