ಬಿಸಿ ಬಿಸಿ ಸುದ್ದಿ

ಕಲಬುರಗಿ: ಎಸ್.ಎಸ್.ಎಲ್ ಲಾ ಕಾಲೇಜಿನಲ್ಲಿ ವಾರ್ಷಿಕೋತ್ಸವ, ಬೀಳ್ಕೊಡುಗೆ

ಕಲಬುರಗಿ: ನಗರದಲ್ಲಿರುವ ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಶೇಠ ಶಂಕರಲಾಲ ಲಾಹೋಟಿ ಕಾನೂನು ಕಾಲೇಜಿನಲ್ಲಿ ಶನಿವಾರ ವಾರ್ಷಿಕೋತ್ಸವ ಮತ್ತು ಎಲ್.ಎಲ್.ಬಿ ಐದು ಮತ್ತು ಮೂರು ವರ್ಷಗಳ ಕಾನೂನು ಪದವಿಯ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವು ಅದ್ದೂರಿಯಾಗಿ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಲಬುರಗಿ ಹೈಕೋರ್ಟ್ ಪೀಠದ ಹೆಚ್ಚುವರಿ ರಿಜಿಸ್ಟ್ರಾರ್ ಜನರಲ್ ರಾಗಿರುವ ಬಸವರಾಜ ಚಂಗಟಿರವರು, ಕಳೆದ ಅರವತ್ತು ವರ್ಷಗಳಿಂದ ಎಸ್.ಎಸ್.ಎಲ್ ಲಾ ಕಾಲೇಜು ಅತ್ಯುತ್ತಮ ಶಿಕ್ಷಣ ನೀಡುತ್ತಿದೆ. ಇಲ್ಲಿ ಕಲೆತವರು ಲಾಯರ್, ಜಡ್ಜ್ ಗಳು ಕೂಡ ಆಗಿದ್ದಾರೆ ಎಂದರು.

ಸರ್ವೋಚ್ಚ ನ್ಯಾಯಾಲಯದ ಪ್ರಖ್ಯಾತ ನ್ಯಾಯಮೂರ್ತಿಗಳು ಎಂಬ ಖ್ಯಾತಿ ಗಳಿಸಿರುವ ಡಾ. ಶಿವರಾಜ್ ಪಾಟೀಲ್ ರವರು ಅಂದಿನ ದಿನಗಳಲ್ಲಿ ಈ ಕಾಲೇಜಿನ ಪ್ರಾಂಶುಪಾಲರಾಗಿದ್ದರು. ಅವರ ಕೈನಲ್ಲಿ ಕಲೆತ ಅನೇಕರು ಇಂದು ದೊಡ್ಡದೊಡ್ಡ ಸ್ಥಾನದಲ್ಲಿದ್ದಾರೆ. ಅನೇಕ ಸಾಧಕರನ್ನು ಹುಟ್ಟು ಹಾಕಿದ ಕಾಲೇಜು ಇದಾಗಿದೆ.
ಸಾಧಕರ ಹಾದಿಯಲ್ಲಿ ನಾವು ಸಾಗಬೇಕಾಗಿದೆ. ಸಾಧಿಸುವ ಧೃಡ ನಿರ್ಧಾರ ಮಾಡಬೇಕು. ಶಿಕ್ಷಣ ಮುಗಿದ ತಕ್ಷಣ ಸ್ಟ್ರಗಲ್ ಮುಗಿಯಿತು ಎಂದುಕೊಳ್ಳಬಾರದು. ಮುಂದೆ ಸ್ಟ್ರಗಲ್ ಮಾಡಬೇಕಾಗಿರುತ್ತದೆ. ಕಷ್ಟಪಟ್ಟು ಓದುವ ಬದಲಿಗೆ ಇಷ್ಟಪಟ್ಟು ಓದುವುದನ್ನು ಮೈಗೂಡಿಸಿಕೊಂಡು ಸಾಗಬೇಕು ಎಂದು ಬಸವರಾಜ ಚಂಗಟಿರವರು ತಿಳಿಸಿದರು.

ಬಳಿಕ ಮಾತನಾಡಿದ ಹೈಕೋರ್ಟಿನ ವಕೀಲರು, ಜಿಬಿಎಕೆ ಘಟಕದ ಉಪಾಧ್ಯಕ್ಷರಾಗಿರುವ ಅಶೋಕ್ ಬಿ. ಮೂಲ್ಗೆರವರು, ನಾನು ಇದೆ ಕಾಲೇಜಿನಲ್ಲಿ ಕಲೆತು. ಇದೇ ಕಾಲೇಜಿನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವುದು ಖುಷಿ ತಂದಿದೆ. ಶ್ರಮಪಟ್ಟು ಕೆಲಸ ಮಾಡಿದರೆ ವಕೀಲ ವೃತ್ತಿಯಲ್ಲಿ ಯಶಸ್ಸು ಕಾಣಬಹುದಾಗಿದೆ. ಹಣಕ್ಕಾಗಿ ವಕೀಲರು ಕ್ಲೈಂಟ್ & ಕೇಸ್ ಗಳನ್ನು ಕಳೆದುಕೊಳ್ಳಬಾರದು. ವಕೀಲ ವೃತ್ತಿಯಂತ ಶ್ರೇಷ್ಠವಾದದ್ದು ಯಾವುದು ಇಲ್ಲ. ದುಡ್ಡಿಗೆ ಬೆನ್ನತ್ತಬಾರದು. ಕೆಲಸದ ಮೇಲೆ ಶ್ರದ್ಧೆ ಇರಬೇಕು ಎಂದರು.

ಕಾರ್ಯಕ್ರಮವನ್ನು ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾ ನಿರೂಪಿಸಿದರೆ, ಭೂಮಿಕಾ ಮತ್ತು ಸಂಗಡಿಗರು ಸ್ವಾಗತ ಗೀತೆ ಹಾಡಿದರು. ಕಾಲೇಜಿನ ಪ್ರಾಂಶುಪಾಲರಾಗಿರುವ ಮಹೇಶ್ವರಿ ಎಸ್ ಹಿರೇಮಠರವರು ಅತಿಥಿಗಳನ್ನು ಸ್ವಾಗತಿಸಿದರೆ, ವಿದ್ಯಾರ್ಥಿನಿ ಮೃಣಾಲಾ ಅತಿಥಿಗಳ ಪರಿಚಯ ಮಾಡಿಕೊಟ್ಟರು. ಉಪನ್ಯಾಸಕಿ, ವಿದ್ಯಾರ್ಥಿ ಸಂಯೋಜಕಿಯಾಗಿರುವ ಕರುಣಾ ಎಸ್ ಪಾಟೀಲ್ ರವರು ವಂದಿಸಿದರು.

ಅಂತಿಮ ವರ್ಷದ ವಿದ್ಯಾರ್ಥಿಗಳಾದ ಗಣೇಶ್ ಪಾಟೀಲ್, ಗಿರೀಶ್ ಸೇರಿದಂತೆ ಅನೇಕರು ಅನುಭವ ಹಂಚಿಕೊಂಡರು. ಈ ವೇಳೆ ವರ್ಷದ ಅತ್ಯುತ್ತಮ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ವಿವಿಧ ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದವರಿಗೆ, ಎನ್.ಎಸ್.ಎಸ್ ಶಿಬಿರದಲ್ಲಿ ಪಾಲ್ಗೊಂಡವರಿಗೆ ಪ್ರಮಾಣ ಪತ್ರ ನೀಡಲಾಯಿತು.

ಈ ಸಂದರ್ಭದಲ್ಲಿ ಕಲಬುರಗಿ ಹೈಕೋರ್ಟ್ ಪೀಠದ ಹೆಚ್ಚುವರಿ ರಿಜಿಸ್ಟ್ರಾರ್ ಜನರಲ್ ಬಸವರಾಜ ಚಂಗಟಿ, ಹೈಕೋರ್ಟಿನ ವಕೀಲರು, ಜಿಬಿಎಕೆ ಘಟಕದ ಉಪಾಧ್ಯಕ್ಷ ಅಶೋಕ್ ಬಿ. ಮೂಲ್ಗೆ, ಹೆಚ್.ಕೆ.ಇ ಸೊಸೈಟಿ ಕಲಬುರಗಿಯ ಉಪಾಧ್ಯಕ್ಷ ರಾಜ್ ಬಿ ಭೀಮಳ್ಳಿ, ಕಾರ್ಯದರ್ಶಿ ಉದಯಕುಮಾರ್ ಚಿಂಚೋಳಿ, ಜಂಟಿ ಕಾರ್ಯದರ್ಶಿ ಡಾ. ಕೈಲಾಸ್ ಬಿ ಪಾಟೀಲ್, ನಾಗಣ್ಣ ಗಂಟಿ, ಕಾಲೇಜಿನ ಪ್ರಾಂಶುಪಾಲರಾದ ಮಹೇಶ್ವರಿ ಎಸ್ ಹಿರೇಮಠ, ಉಪನ್ಯಾಸಕಿ, ವಿದ್ಯಾರ್ಥಿ ಸಂಯೋಜಕಿ ಕರುಣಾ ಎಸ್ ಪಾಟೀಲ್, ಡಾ. ಜ್ಯೋತಿ ಎಸ್ ಕಡಾದಿ, ಜ್ಯೋತಿ ಅಂಗರಕಿ, ಡಾ. ಸವಿತಾ ಆರ್ ಗಿರಿ ಸೇರಿದಂತೆ ಉಪನ್ಯಾಸಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

3 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

3 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

3 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

19 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

21 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago