ಬಿಸಿ ಬಿಸಿ ಸುದ್ದಿ

ಶಿಕ್ಷಣ ಯಶಸ್ಸಿನ ಹಿಂದಿನ ಶಕ್ತಿ: ರಾಜ್ಯಪಾಲ ಥಾವರ್ ಚಂದ ಗೆಹ್ಲೋಟ್

ಕಲಬುರಗಿ: ಶಿಕ್ಷಣವು ಯಶಸ್ಸಿನ ಹಿಂದಿನ ಪ್ರಮುಖ ಚಾಲನಾ ಶಕ್ತಿಯಾಗಿದೆ ಎಂದು ರಾಜ್ಯಪಾಲ ಹಾಗೂ ಗುಲಬರ್ಗಾ ವಿಶ್ವವಿದ್ಯಾಲಯದ ಕುಲಾಧಿಪತಿ ಥಾವರ್ ಚಂದ ಗೆಹ್ಲೋಟ್ ಹೇಳಿದರು.

ಗುಲಬರ್ಗಾ ವಿವಿಯ ಡಾ. ಬಿ.ಆರ್. ಅಂಬೇಡ್ಕರ್ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಗುಲ್ಬರ್ಗ ವಿಶ್ವವಿದ್ಯಾಲಯದ 42ನೇ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಿಕ್ಷಣಕ್ಕೆ ಆದ್ಯತೆ ನೀಡುವುದು ಎಂದರೆ ಯಶಸ್ಸಿನ ಹಾದಿ ಆಯ್ಕೆ ಮಾಡಿಕೊಂಡಂತೆ ಎಂದರು.

ಭಾರತದ ಅರ್ಥ ವ್ಯವಸ್ಥೆ ಸುಧಾರಿಸುವ ವಿದ್ಯಾರ್ಥಿಗಳು ತಮ್ಮ ಪಾಲುದಾರಿಕೆ ಸಾಬೀತುಪಡಿಸಿದರೆ ದೇಶ ಪುನಃ ಜಗತ್ತಿನ ವಿಶ್ವಗುರು ಆಗಲಿದೆ ಎಂದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಗೋವಾದ ಡೋನಾಪೌಲಾ ಸಿಎಸ್‌ಐಆರ್, ರಾಷ್ಟ್ರೀಯ ಸಾಗರಶಾಸ್ತ್ರ ಸಂಸ್ಥೆಯ ನಿರ್ದೇಶಕ ಪ್ರೊ. ಸುನೀಲಕುಮಾರ ಸಿಂಗ್ ಮಾತನಾಡಿ, ಬದುಕಿನಲ್ಲಿ ಮುಂದೆ ಬರಬೇಕಾದರೆ ಇಲಿ ಓಟ (ರ‌್ಯಾಟ್ ರೇಸ್) ನಿಲ್ಲಿಸಬೇಕು. ಇತರರಿಗಾಗಿ ಕೆಲಸ ಮಾಡುವುದರ ಬದಲು ನೀವು ಇಷ್ಟಪಡುವುದನ್ನು ಮಾಡಿದರೆ ಮಾತ್ರ ಸಾಧನೆ ಕೈವಶವಾಗುತ್ತದೆ ಎಂದರು.

ಇಷ್ಟ ಪಡುವುದನ್ನು ಮಾಡುವುದನ್ನು ರೂಢಿಸಿಕೊಂಡರೆ ನಮ್ಮ ಮೇಲೆ ನಮಗೆ ಹೆಚ್ಚು ನಂಬಿಕೆ ಮೂಡುತ್ತದೆ. ನಮ್ಮ ಮೇಲೆ ನಮಗಿರುವ ನಂಬಿಕೆಯೇ ನಮ್ಮ ಗೆಲುವಿನ ಹಾದಿ ನಿರ್ಧರಿಸುತ್ತದೆ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

168 ಚಿನ್ನದ ಪದಕ 74 ವಿದ್ಯಾರ್ಥಿಗಳಿಗೆ ಪ್ರದಾನ: ಗುಲಬರ್ಗಾ ವಿವಿಯ 42ನೇ ಘಟಿಕೋತ್ಸವದಲ್ಲಿ 52 ವಿದ್ಯಾರ್ಥಿನಿಯರು, 22 ವಿದ್ಯಾರ್ಥಿಗಳು ಸೇರಿ ಒಟ್ಟು 74 ವಿದ್ಯಾರ್ಥಿಗಳಿಗೆ 169 ಚಿನ್ನದ ಪದಕ, 9 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪರಿವರ್ತಿಸಿ ನಗದು ಬಹುಮಾನ ನೀಡಲಾಯಿತು.

ಕನ್ನಡ ಅಧ್ಯಯನ ಸಂಸ್ಥೆಯ ವಿದ್ಯಾರ್ಥಿನಿ ಆನಂದಮ್ಮ 13 ಚಿನ್ನದ ಪದಕಗಳನ್ನು ಪಡೆದು ಗಮನ ಸೆಳೆದರು.

ಇದೇ ವೇಳೆ, ಪ್ರಾಣಿಶಾಸ್ತ್ರ ವಿಭಾಗದ ಪೂರ್ವಕ ಗದ್ವಾಲ- 7 ಚಿನ್ನದ ಪದಕ, ಎಂಬಿಎ ಅಧ್ಯಯನ ವಿಭಾಗದ ಅಭಿಷೇಕ-6 ಚಿನ್ನದ ಪದಕ, ಸಮಾಜಕಾರ್ಯ ವಿಭಾಗದ ಅಂಬಿಕಾ-6 ಚಿನ್ನದ ಪದಕ, ರಾಜ್ಯಶಾಸ್ತ್ರ ವಿಭಾಗದ ಪಲ್ಲವಿ-6 ಚಿನ್ನದ ಪದಕ, ಸಸ್ಯಶಾಸ್ತ್ರ ವಿಭಾಗದ ಆಫ್ರಿನ್ ಸುಲ್ತಾನಾ, ಜೀವರಸಾಯನ ಶಾಸ್ತ್ರ ವಿಭಾಗದ ವಿಷ್ಣುಕಾಂತ, ಎಂಸಿಎ ವಿಭಾಗದ ಮಲ್ಕಮ್ಮ, ಸೂಕ್ಷ್ಮ ಜೀವಶಾಸ್ತ್ರ ವಿಭಾಗದ ಭಾಗ್ಯ ಕ್ರಮವಾಗಿ 5 ಚಿನ್ನದ ಪದಕಗಳನ್ನು ಸ್ವೀಕರಿಸಿದರು.

ಈ ಘಟಿಕೋತ್ಸವದಲ್ಲಿ ಒಟ್ಟು 29309 ವಿದ್ಯಾರ್ಥಿಗಳಿಗೆ ವಿವಿಧ ಪದವಿ ಸ್ವೀಕರಿಸಿದರು. ಈ ಪೈಕಿ 15869 ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ಪದವಿ ಪ್ರಮಾಣಪತ್ರ ಪಡೆದರು.

ಏತನ್ಮಧ್ಯೆ, ವಿವಿಧ ನಿಕಾಯಗಳ 113 ವಿದ್ಯಾರ್ಥಿಗಳಿಗೆ ಪಿಎಚ್ ಡಿ ಪದವಿ ಪ್ರದಾನ ಮಾಡಲಾಯಿತು. ಕಲಾ ನಿಕಾಯ-35 ಪಿಎಚ್‌ಡಿ, ಸಮಾಜ ವಿಜ್ಞಾನ ನಿಕಾಯ- 29 ಪಿಎಚ್‌ಡಿ, ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯ-26 ಪಿಎಚ್‌ಡಿ, ವಾಣಿಜ್ಯ ಮತ್ತು ನಿರ್ವಹಣಾ ನಿಕಾಯ- 11 ಪಿಎಚ್‌ಡಿ, ಶಿಕ್ಷಣ ನಿಕಾಯ-9 ಸಂಶೋಧನಾ ವಿದ್ಯಾರ್ಥಿಗಳಿಗೆ ಪಿಎಚ್‌ಡಿ ಪ್ರದಾನ ಮಾಡಲಾಯಿತು.

ಆರಂಭದಲ್ಲಿ ವಿವಿ ಉಪಕುಲಪತಿ ಪ್ರೊ.ದಯಾನಂದ ಅಗಸರ ಸ್ವಾಗತಿಸಿ ವಿವಿಯ ಸಾಧನೆಗಳ ಕುರಿತು ಪರಿಚಯ ಮಂಡಿಸಿದರು.

ಕುಲಸಚಿವ ಪ್ರೊ. ಲಕ್ಷ್ಮಣ ರಾಜನಾಳಕರ್, ಹಣಕಾಸು ಅಧಿಕಾರಿ ಕು. ಗಾಯತ್ರಿ ಸೇರಿದಂತೆ ವಿವಿಧ ನಿಕಾಯಗಳ ಮುಖ್ಯಸ್ಥರು, ಡೀನರು ವೇದಿಕೆಯಲ್ಲಿದ್ದರು.

ಲಿಂಗರಾಜಪ್ಪ, ತಿವಾರಿ, ದಸ್ತಿಗೆ ಗೌರವ ಡಾಕ್ಟರೇಟ್; ಗುಲಬರ್ಗಾ ವಿವಿಯ 42ನೇ ಘಟಿಕೋತ್ಸವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.

ಕಾನೂನು ಮತ್ತು ನ್ಯಾಯಾಂಗ ಕ್ಷೇತ್ರದಲ್ಲಿ ಗುರುತರ ಸೇವೆ ಪರಿಗಣಿಸಿ ಅರ್ಚನಾ ಪ್ರದೀಪ್ ತಿವಾರಿ, ಪ್ರಾದೇಶಿಕ ಅಸಮತೋಲನ ನಿವಾರಣೆಗೆ ನಿರಂತರ ಹೋರಾಟ ಮತ್ತು ಸಾಮಾಜಿಕ ಸೇವೆ ಸಲ್ಲಿಸಿದ ಹೋರಾಟಗಾರ ಲಕ್ಷ್ಮಣ ದಸ್ತಿ, ಶಿಕ್ಷಣ, ಕೃಷಿ ಕ್ಷೇತ್ರದಲ್ಲಿ ಅನುಪಮ ಸೇವೆ ಸಲ್ಲಿಸುತ್ತಿರುವ ಲಿಂಗರಾಜಪ್ಪ ಅಪ್ಪ ಅವರನ್ನು ಗೌರವ ಡಾಕ್ಟರೇಟ್‌ ನೀಡಿ ಗೌರವಿಸಲಾಯಿತು.

ವೇಳಾಪಟ್ಟಿ ಹಾಕಿಕೊಂಡು ಓದುವುದಕ್ಕಿಂತ ಓದಬೇಕೆನಿಸಿದಾಗ ಮಾತ್ರ ಓದಿದ್ದು, ಈಗಾಗಲೇ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ನನಗೆ ನಮ್ಮಪ್ಪ ದೇವಿಂದ್ರಪ್ಪ ಹಾಗೂ ಅವ್ವ ಮಲ್ಲಮ್ಮ ಸಾಕಷ್ಟು ಪ್ರೋತ್ಸಾಹ, ಪ್ರೇರಣೆ ನೀಡಿದ್ದಾರೆ. ಮುಂದೆ ಕನ್ನಡ ಪ್ರಾಧ್ಯಾಪಕಿಯಾಗುವ ಆಸೆ. – ಆನಂದಮ್ಮ, 13 ಚಿನ್ನದ ಪದಕ ಪಡೆದ ವಿದ್ಯಾರ್ಥಿನಿ

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

8 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

18 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

18 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

18 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago