ಭಾಲ್ಕಿ; ಶರಣ ವಿ.ಸಿದ್ಧರಾಮಣ್ಣ ಶರಣರು ನಿಧನಕ್ಕೆ ಪೂಜ್ಯ ಶ್ರೀ ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರು ಸಂತಾಪ ವ್ಯಕ್ತಪಡಿಸಿದ್ದಾರೆ.
ವಿ.ಸಿದ್ಧರಾಮಣ್ಣ ಶರಣರು ಪೂಜ್ಯ ಶ್ರೀ ಡಾ.ಚನ್ನಬಸವ ಪಟ್ಟದ್ದೇವರ ಸಾನಿಧ್ಯದಲ್ಲಿ ಶ್ರೀಮಠಕ್ಕೆ ಆಗಮಿಸಿ, ಶ್ರೀಮಠದ ಬಸವತತ್ವ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದರು. ಪೂಜ್ಯರ ಮಾರ್ಗದರ್ಶನದಲ್ಲಿ ವಿ.ಸಿದ್ಧರಾಮಣ್ಣನವರು ರಚಿಸಿರುವ ಶರಣರ ನಾಟಕಗಳನ್ನು ಜಿಲ್ಲೆಯಾದ್ಯಂತ ಪ್ರದರ್ಶನಗೊಳ್ಳುತ್ತಿದ್ದವು. ವಚನ ಸಂಗೀತ ನಡೆಯುತಿತ್ತು.
ಶರಣರ ಕುರಿತು ರಚಿಸಿರುವ ಗೀತೆಗಳು ಅಮರತ್ವ ಪಡೆದಿವೆ. ಷಟ್‍ಸ್ಥಲ ಧ್ವಜ ಗೀತೆ, ಬಸವಣ್ಣನವರ ಜಯ ಜಯ ಗುರು ಬಸವಣ್ಣ ಎಂಬ ಮಂಗಳಾರತಿ ಈ ರೀತಿಯ ಅನೇಕ ಗೀತೆಗಳು ಜನರ ಬಾಯಲ್ಲಿ ಕುಣಿದಾಡುತ್ತಿವೆ. ಬಸವಕಲ್ಯಾಣ ಅನುಭವಮಂಟಪ ಸಂಚಾಲಕರಾಗಿ ತಮ್ಮ ಸೇವೆಯನ್ನು ಸಲ್ಲಿಸಿದರು.
ಬಸವತತ್ವ ಪ್ರಸಾರಕ್ಕೆ ತಮ್ಮ ಆಯುಷ್ಯವನ್ನೆ ಮುಡುಪಾಗಿಟ್ಟಿದ ಶತಾಯುಷಿ ವಿ.ಸಿದ್ಧರಾಮಣ್ಣ ಶರಣರು. ಅವರ ನಿಧನದಿಂದ ಬಸವತತ್ವಕ್ಕೆ ತುಂಬಲಾಗದ ನಷ್ಟವಾಗಿದೆ ಎಂದು ಪೂಜ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ವಿ.ಸಿದ್ಧರಾಮಣ್ಣ ಶರಣರ ಅಂತ್ಯ ಸಂಸ್ಕಾರವನ್ನು ನಾಳೆ 2 ಗಂಟೆಗೆ ವಿಜಯನಗರ ಜಿಲ್ಲೆಯ ಮತ್ತಿಹಳ್ಳಿ ಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದವರಿಂದ ತಿಳಿದು ಬಂದಿದೆ.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…