ವಿವಿಧ ಬೇಡಿಕೆಗಳ ಈಡೇರಿಸಲು ಆಗ್ರಹಿಸಿ ಶೋಷಿತರ ಒಕ್ಕೂಟ ರಸ್ತೆ ತಡೆ

0
23

ಸುರಪುರ: ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಶೋಷಿತ ಪರ ಹೋರಾಟದ ಸಂಘಟನೆಗಳ ಒಕ್ಕೂಟ ದಿಂದ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ರಸ್ತೆ ತಡೆದು ಟೈರ್‍ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ರಾಜ್ಯಾಧ್ಯಕ್ಷ ವೆಂಕೋಬ ದೊರೆ ಬೊಮ್ಮನಹಳ್ಳಿ ಮಾತನಾಡಿ,ಕಳೆದ ತಿಂಗಳು ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಲ್ಲಿಸಿರುವ ಮನವಿಗೆ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ, ಅಲ್ಲದೆ ತಾಲೂಕಿನ ಅನೇಕ ಗ್ರಾಮ ಪಂಚಾಯತಿಗಳ ಪಿಡಿಓಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದು ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು.ನಗರ ಸೇರಿ ತಾಲೂಕಿನಾದ್ಯಂತ ಒತ್ತುವರಿಯಾಗಿರುವ ಅರಣ್ಯ ಭೂಮಿ ಮರಳಿ ವಶಪಡಿಸಿಕೊಂಡು ಒತ್ತುವರಿ ಮಾಡಿಕೊಂಡವರ ಮೇಲೆ ಕ್ರಮ ಕೈಗೊಳ್ಳಬೇಕು.

Contact Your\'s Advertisement; 9902492681

ನಗರದಲ್ಲಿ ಸ್ವಚ್ಛತೆಗೆ ಕ್ರಮ ಕೈಗೊಳ್ಳಬೇಕು.ಕಳೆದ ಕೆಲ ದಿನಗಳ ಹಿಂದೆ ಸುರಿದ ಮಳೆಗೆ ಅನೇಕ ಕಡೆಗಳಲ್ಲಿ ವಿದ್ಯುತ್ ಕಂಬಗಳು ಬಿದ್ದಿದ್ದು ಇದುವರೆಗೂ ದುರಸ್ತಿಗೊಳಿಸದ ಜೆಸ್ಕಾಂ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಇಲ್ಲವಾದಲ್ಲಿ ಸುರಪುರ ಬಂದ್ ಮಾಡಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.

ನಂತರ ಜಿಲ್ಲಾ ಉಸ್ತುವಾರಿ ಸಚಿವರಿಗೆ ಬರೆದ ಮನವಿ ತಹಸಿಲ್ದಾರ್ ಕೆ.ವಿಜಯಕುಮಾರ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ಸುಮಾರು ಅರ್ಧ ಗಂಟೆಗಳ ಕಾಲ ರಸ್ತೆ ತಡೆ ನಡೆಸಿದ್ದರಿಂದ ವಾಹನ ಸವಾರರು ಪರದಾಡಿ ಟ್ರಾಫಿಕ್ ಜಾಮ್ ಉಂಟಾಗಿತ್ತು.ಪಿಎಸ್‍ಐ ಸಿದ್ದಣ್ಣ ಯಡ್ರಾಮಿ ನೇತೃತ್ವದಲ್ಲಿ ಬಂದೋಬಸ್ತ್ ಮಾಡಲಾಗಿತ್ತು.

ಪ್ರತಿಭಟನೆಯಲ್ಲಿ ಸಂಘಟನೆ ಮುಖಂಡರಾದ ಒಕ್ಕೂಟದ ತಾಲೂಕ ಅಧ್ಯಕ್ಷ ಕೇಶವ ನಾಯಕ,ಕಾರ್ಯದರ್ಶಿ ಹಣಮಂತ್ರಾಯ,ದವಲಸಾಬ್,ವೆಂಕಟೇಶ ಡಿ.ಸಿ,ರಾಜು ಶಖಾಪುರ, ಅಭಿ, ಶಿವು,ದೇವಪ್ಪ,ಚಂದ್ರಕಾಂತ ಡೊಣ್ಣಿಗೇರ,ಸಂದಾಲ ವೆಂಕಟಾಪುರ,ಶ್ರೀಕೃಷ್ಣ ಕುಂಬಾರಪೇಟ,ಶಿವರಾಜ ಕುಂಬಾರಪೇಟ,ಪರಶುರಾಮ ಮೇದಾರಗಲ್ಲಿ,ಸಿದ್ದು ಮಂಗಿಹಾಳ,ಮಹೇಶ ನಂದಿಹಳ್ಳಿ,ಮಲ್ಲು ಕುಂಬಾರಪೇಟ,ಮಹಾದೇಶ ಕುಂಬಾರಪೇಟ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here