ಆಳಂದ; ಪಟ್ಟಣದ ಪ್ರತಿಷ್ಠಿತ ಎಸ್‍ಆರ್‍ಜಿ ಫೌಂಡೇಶನ್ ಅಡಿಯಲ್ಲಿ ನಡೆಯುತ್ತಿರುವ ಪೂಜ್ಯ ಶ್ರೀ ರಾಜಶೇಖರ ಮಹಾಸ್ವಾಮೀಜಿ ಬಿ.ಎಡ್ ಶಿಕ್ಷಣ ಮಹಾವಿದ್ಯಾಲಯಕ್ಕೆ 2022-23ನೇ ಸಾಲಿನ ಪ್ರಥಮ ರ್ಯಾಂಕ್ ಲಭಿಸಿದೆ.
ಕಾಲೇಜಿನ ವಿದ್ಯಾರ್ಥಿನಿ ಸಾರಿಕಾ ಜವಳಿ ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ಬಿ.ಎಡ್‍ನಲ್ಲಿ ಪ್ರಥಮ ರ್ಯಾಂಕ್ ಪಡೆದು ಕೀರ್ತಿ ತಂದಿದ್ದಾಳೆ. ವಿಶ್ವವಿದ್ಯಾಲಯವು ಸೋಮವಾರ ಹಮ್ಮಿಕೊಂಡಿದ್ದ ತನ್ನ 42ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾಚರಚಂದ್ ಗೇಹ್ಲೋತ್ ಚಿನ್ನದ ಪದಕ ನೀಡಿ ಗೌರವಿಸಿದರು.
ವಿದ್ಯಾರ್ಥಿನಿಯ ಸಾಧನೆಗೆ ಸಂಸ್ಥೆಯ ಅಧ್ಯಕ್ಷರೂ, ಮಾಜಿ ಶಾಸಕರಾದ ಸುಭಾಷ್ ಆರ್ ಗುತ್ತೇದಾರ, ಕಾರ್ಯದರ್ಶಿಗಳಾದ ಹರ್ಷಾನಂದ ಗುತ್ತೇದಾರ, ಆಡಳಿತಾಧಿಕಾರಿ ಡಾ. ರಾಘವೇಂದ್ರ ಚಿಂಚನಸೂರ, ಪ್ರಾಚಾರ್ಯ ಡಾ. ಅಶೋಕರೆಡ್ಡಿ ಸೇರಿದಂತೆ ಸಿಬ್ಬಂದಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.
ಇಷ್ಟ ಪಟ್ಟು ಓದಿದ್ದರಿಂದ ಹಾಗೂ ಕಾಲೇಜಿನಲ್ಲಿ ಒಳ್ಳೆಯ ಶೈಕ್ಷಣಿಕ ವಾತಾವರಣ ಇದ್ದುದ್ದರಿಂದ ರ್ಯಾಂಕ್ ಗಳಿಸಲು ಸಾಧ್ಯವಾಗಿದೆ. ಕಾಲೇಜಿನಲ್ಲಿ ಓದಿಗೆ ಪೂರಕ ವಾತಾವರಣ ಇತ್ತು ಮುಂದೆ ಶಿಕ್ಷಕಿಯಾಗಬೇಕು ಎನ್ನುವ ಮಹತ್ವಾಕಾಂಕ್ಷಿ ಹೊಂದಿದ್ದೇನೆ- ಸಾರಿಕಾ ಜವಳಿ, ಪ್ರಥಮ ರ್ಯಾಂಕ್ ಪಡೆದ ವಿದ್ಯಾರ್ಥಿನಿ
ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆಗಳು. ನಮ್ಮ ಸಂಸ್ಥೆಯಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿದ್ದೇವೆ. ವೈಜ್ಞಾನಿಕ ಬೋಧನಾ ಪದ್ಧತಿಗಳನ್ನು ಅಳವಡಿಸಿಕೊಂಡು ಉಪನ್ಯಾಸಕರು ಶಿಕ್ಷಣ ನೀಡುತ್ತಿದ್ದಾರೆ ಸಮರ್ಪಣಾ ಮನೋಭಾವದ ಉಪನ್ಯಾಸಕರ ಶ್ರಮದಿಂದ ನಿರೀಕ್ಷಿತ ಫಲಿತಾಂಶ ಪಡೆಯಲು ಸಾಧ್ಯವಾಗಿದೆ- ಸುಭಾಷ ಆರ್ ಗುತ್ತೇದಾರ, ಮಾಜಿ ಶಾಸಕರು ಹಾಗೂ ಸಂಸ್ಥೆಯ ಅಧ್ಯಕ್ಷರು.