ಕಲಬುರಗಿ: ಮಲ್ಲಿಕಾರ್ಜುನ ಕಡಕೋಳ ಅವರನ್ನು ದಾವಣಗೆರೆ ವೃತ್ತಿ ರಂಗಾಯಣದ ನಿರ್ದೇಶಕರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.ಕಳೆದ ಎರಡು ವರ್ಷಕಾಲ ಖಾಲಿ ಇದ್ದ ಹುದ್ದೆಗೆ ನಿರ್ದೇಶಕರಾಗಿ ಕಡಕೋಳ ಮೂರು ವರ್ಷದ ಅವಧಿಗೆ ನೇಮಕವಾಗಿದ್ದಾರೆ.
ಈ ಹಿಂದೆ ಕರ್ನಾಟಕ ನಾಟಕ ಅಕಾಡೆಮಿ ಮತ್ತು ರಂಗ ಸಮಾಜದ ಸದಸ್ಯರಾಗಿ ಬಾ ಅತಿಥಿ, ರಂಗ ಸಮಾಗಮ, ತಿಂಗಳ ಬೆಳಕಲಿ ರಂಗದ ಮೆರಗು ಮೊದಲಾದ ಕಾರ್ಯಕ್ರಮಗಳ ಮೂಲಕ ಕಡಕೋಳ ಅವರು ರಂಗಾಸಕ್ತರು ಮತ್ತು ಸರಕಾರದ ಗಮನ ಸೆಳೆದಿದ್ದರು. ನಾಟಕಕಾರಾಗಿ, ಲೇಖಕರಾಗಿ ಕಡಕೋಳ ಅವರು ನಿರಂತರವಾಗಿ ಶ್ರಮಿಸುತ್ತಾ ಬಂದಿದ್ದಾರೆ. ದಾವಣಗೆರೆ ವೃತ್ತಿ ರಂಗಾಯಣ ಸ್ಥಾಪನೆಗಾಗಿ ಶ್ರಿ ಸಿದ್ದರಾಮಯ್ಯ ಅವರು ಮೊದಲ ಬಾರಿ ಮುಖ್ಯಮಂತ್ರಿಗಳಾಗಿದ್ದಾಗ ಕಡಕೋಳ ಅವರೇ ಸ್ವತಃ ಪ್ರಸ್ತಾವನೆ ಸಲ್ಲಿಸಿದ್ದರು. ಅವರ ಪ್ರಸ್ತಾಪವನ್ನು ಪರಿಗಣಿಸಿ ವೃತ್ತಿ ರಂಗಭೂಮಿ ರಂಗಾಯಣ ಸ್ಥಾಪಿಸಲಾಗಿತ್ತು. “ವೃತ್ತಿ ರಂಗಭೂಮಿ : ವರ್ತಮಾನದ ಸವಾಲುಗಳು” ವಿಷಯದ ಮೇಲೆ ಫೆಲೋಶಿಪ್ ಮಾಡಿದ್ದಾರೆ.
ರಾಜ್ಯವ್ಯಾಪ್ತಿ ವೃತ್ತಿ ರಂಗಭೂಮಿಯ ಚಟುವಟಿಕೆಗಳು, ಸಂಶೋಧನೆ, ಕಲೆ ಪ್ರಸಾರ ಸೇರಿದಂತಹ ಅಧಿಕಾರ ಕಾರ್ಯವ್ಯಾಪ್ತಿಯನ್ನು ಈ ವೃತ್ತಿ ರಂಗಾಯಣ ಹೊಂದಿದೆ. ಸದ್ಯ ಈ ರಂಗಾಯಣವು ದಾವಣಗೆರೆಯ ಜಿಲ್ಲಾಧಿಕಾರಿ ಕಚೇರಿ ಸಮುಚ್ಚಯದಲ್ಲಿ ಕಾರ್ಯನಿರ್ವಹಿಸುತ್ತಿದೆ. ರಾಜ್ಯ ಮಟ್ಟದ ಈ ರಂಗಾಯಣವನ್ನು ಸ್ವತಃ ಕಟ್ಟಡ ಇತ್ಯಾದಿ ನಿರ್ಮಿಸಲು ಕೊಂಡಜ್ಜಿಯ ಬಳಿ ಹತ್ತು ಎಕರೆ ಭೂಮಿಯನ್ನು ಕಾದಿರಿಸಲಾಗಿದೆ.
ಸರ್ಕಾರದಲ್ಲಿ ರಾಜ್ಯ ಮಟ್ಟದ ಈ ಹುದ್ದೆಗೆ ಮಲ್ಲಿಕಾರ್ಜುನ ಅವರನ್ನು ನೇಮಕ ಮಾಡಿದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕನ್ನಡ ಸಂಸ್ಕೃತಿ ಸಚಿವರಾದ ಶಿವರಾಜ ತಂಗಡಗಿ, ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ ಅವರಿಗೆ ಧನ್ಯವಾದ. ನೇಮಕಗೊಂಡಿರುವ ಮಲ್ಲಿಕಾರ್ಜುನ ಕಡಕೋಳ ಅವರಿಗೆ ಅಭಿನಂದನೆ.
ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…