ಕಲಬುರಗಿ: ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ 19 ನೇ ವರ್ಷದ ‘ಅಮ್ಮ ಪ್ರಶಸ್ತಿ’ಗಾಗಿ 2019 ನೇ ಸಾಲಿನಲ್ಲಿ ಪ್ರಕಟವಾದ ಕೃತಿಗಳನ್ನು ಆಹ್ವಾನಿಸಲಾಗಿದೆ.
ಕಳೆದ 18 ವರ್ಷಗಳಿಂದ ನಿರಂತರ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ನೀಡಲಾಗುತ್ತಿರುವ ಈಗ ಅಮ್ಮ ಪ್ರಶಸ್ತಿಗೆ 19 ರ ಸಂಭ್ರಮ. ಈ ಹಿನ್ನೆಲೆಯಲ್ಲಿ ರಾಜ್ಯ ಮಟ್ಟದ ಪ್ರತಿಷ್ಠಿತ ’ಅಮ್ಮ ಪ್ರಶಸ್ತಿ’ಗಾಗಿ ಸಾಹಿತ್ಯದ ಯಾವುದೇ ಪ್ರಕಾರದ ಕೃತಿಗಳ ಎರಡು ಪ್ರತಿಗಳನ್ನು ಕಳುಹಿಸಬಹುದಾಗಿದೆ. ಕೃತಿಗಳನ್ನು ಸ್ವೀಕರಿಸಲು ಅಕ್ಟೋಬರ್ 30 ಕೊನೆಯ ದಿನಾಂಕವಾಗಿರುತ್ತದೆ ಎಂದು ಪ್ರತಿಷ್ಠಾನದ ಸಂಚಾಲಕಿ ರತ್ನಕಲಾ ಮಹಿಪಾಲರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೃತಿಗಳನ್ನು ಕಳುಹಿಸಬೇಕಾದ ವಿಳಾಸ : ಶ್ರೀಮತಿ ರತ್ನಕಲಾ ಮಹಿಪಾಲರೆಡ್ಡಿ ಮುನ್ನೂರು, ಸಂಚಾಲಕಿ, ಮಾತೋಶ್ರೀ ಮಹಾದೇವಮ್ಮ ಮುನ್ನೂರು ಪ್ರತಿಷ್ಠಾನ “ಅಮ್ಮ ನಿಲಯ”, ರಾಮಚಂದ್ರ ಲೇಔಟ್, ಜಿ. ಕೆ. ಕ್ರಾಸ್, ಊಡಗಿ ರಸ್ತೆ, ಸೇಡಂ-೫೮೫ ೨೨೨. ಕಲಬುರಗಿ ಜಿಲ್ಲೆ. ಹೆಚ್ಚಿನ ವಿವರಗಳಿಗಾಗಿ, ಮೊಬೈಲ್ ಸಂಖ್ಯೆ: 9731666052 ಸಂಪರ್ಕಿಸಬಹುದು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…