- ಎಂ.ಡಿ ಮಶಾಖ ಚಿತ್ತಾಪುರ
ಚಿತ್ತಾಪುರ: ತಾಲೂಕಿನ ದಂಡಗುಂಡ ಗ್ರಾಮದಲ್ಲಿ ಆ.19 ರಂದು ನಡೆಯುವ ಬಸವಣ್ಣನವರ ಜಾತ್ರೆಯ ಪ್ರಯುಕ್ತ ಚಿತ್ತಾಪುರ ಪೊಲೀಸ್ ಠಾಣೆ ವತಿಯಿಂದ ಶಾಂತಿ ಸಭೆ ಹಮ್ಮಿಕೊಳ್ಳಲಾಯಿತು.
ನಂತರ ಡಿವೈಎಸ್ಪಿ ಶಂಕರಗೌಡ ಪಾಟೀಲ್ ಅವರು ಮಾತನಾಡಿ, ಶ್ರಾವಣ ಮಾಸದ ನಡುವಿನ ಸೋಮವಾರದಂದು ನಡೆಯುವ ಬಸವಣ್ಣನವರ ಜಾತ್ರೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಶಾಂತಿಯಿಂದ ಜಾತ್ರೆಯನ್ನು ಮಾಡಬೇಕು ಎಂದರು.
ಬೇರೆ ಬೇರೆ ರಾಜ್ಯ, ಜಿಲ್ಲೆಗಳಿಂದ ಆಗಮಿಸುವ ಭಕ್ತರಿಗೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದ್ದು, ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗುತ್ತದೆ. ಹೀಗಾಗಿ ಪ್ರತಿಯೊಬ್ಬರು ಸಹಕರಿಸಬೇಕು ಎಂದರು.
ಸಿಪಿಐ ಚಂದ್ರಶೇಖರ ತಿಗಡಿ, ಪಿಎಸ್’ಐ ಶ್ರೀಶೈಲ್ ಅಂಬಾಟಿ, ಟ್ರಸ್ಟ್ ಅಧ್ಯಕ್ಷ ಭಾಗಣ್ಣಗೌಡ ಸಂಕನೂರ್, ಭೀಮಣ್ಣ ಸಾಲಿ, ಮಹಾಂತಗೌಡ, ಚಂದ್ರಶೇಖರ ಆವಂಟಿ, ಶಿವರಾಜ, ಬಸವರಾಜ, ಭೀಮರಾಯಗೌಡ, ಬಸವರಾಜಗೌಡ, ಗುರುರಾಜ ಸೇರಿದಂತೆ ಅನೇಕ ಮುಖಂಡರು ಹಾಗೂ ಗ್ರಾಮಸ್ಥರು ಇದ್ದರು.