ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿಯಲ್ಲಿ ಪರ್ತಾಬಾದ್ ವಲಯದ ಇಟಗಾ ಕಾರ್ಯಕ್ಷೇತ್ರ ಹಾಗೂ ಶರಣ ಸಿರಸಿಗಿ ವಲಯ ಹಡಗಿಲ ಹಾರುತಿ ಕಾರ್ಯಕ್ಷೇತ್ರದಲ್ಲಿ ರೈತರಿಗೆ ವಿವಿಧ ತಳಿಯ ಹಣ್ಣಿನ ಗಿಡಗಳ ವಿತರಣೆ ಹಾಗೂ ಗಿಡನಾಟಿ ಮಾಡಲಾಯಿತು.
ಸದರಿ ಕಾರ್ಯಕ್ರಮದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಸಿ ಎನ್ ಬಾಬಳಗಾವ್ ರೈತರಿಗೆ ಗಿಡ ವಿತರಿಸಿ ಮಾತನಾಡಿ ನಮ್ಮ ಬಾಗದಲ್ಲಿ ಅತಿ ಹೆಚ್ಚು ಬಿಸಿಲಿನ ತಾಪಮಾನವಿದ್ದು ಮಳೆ ಪ್ರಮಾಣ ಕಡಿಮೆ ಹಾಗೂ ಅಂತರ್ಜಲ ಮಟ್ಟ ಕುಸಿತ ಜೊತೆಗೆ ಕೃಷಿಯಲ್ಲಿ ಇಳುವರಿ ಕಡಿಮೆ ಹೀಗಾಗಿ ಪರಮ ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಡೆ ಅವರು ಜನರ ಆರೋಗ್ಯದ ಜೊತೆಗೆ ಉತ್ತಮ ಪರಿಸರ ನಿರ್ಮಾಣವಾಗಲು ರಾಜ್ಯದಲ್ಲಿ ಪ್ರತಿ ವರ್ಷ ದಶಲಕ್ಷ ಗಿಡ ನಾಟಿ ಕಾರ್ಯಕ್ರಮ ಹಮ್ಮಿಕೊಂಡು ಅನುಷ್ಠಾನ ಮಾಡುತ್ತಿರುವುದು ತುಂಬಾ ಒಳ್ಳೆಯ ಕೆಲಸವೆಂದು ಹೇಳಿದರು.
ಕಾರ್ಯಕ್ರಮದಲ್ಲಿ ತಾಲೂಕಿನ ಯೋಜನಾಧಿಕಾರಿ ರಿಯಾಜ್ ಅತ್ತಾರ್ , ಅಮೃತ್ ಚೌಹಾನ್ ದಸ್ತಗಿರ್ ಪಟೇಲ್, ಕೃಷಿ ಅಧಿಕಾರಿ ಗಂಗಾಧರ್ ಮೇಲಿನಮನಿ ವಲಯ ಮೇಲ್ವಿಚಾರಕರು ಭೀಮರಾಯ್ ಹಾಗೂ ಜಗನಾಥ್ ಪ್ರತಿನಿಧಿಗಳು ಪ್ರಭಾವತಿ ಮತ್ತು ಮಹಾನಂದ ಮತ್ತು ರೈತರು ಸ್ವ ಸಹಾಯ ತಂಡಗಳ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…