ಬಿಸಿ ಬಿಸಿ ಸುದ್ದಿ

ಡಿ. ದೇವರಾಜ ಅರಸು ಪ್ರಶಸ್ತಿಗೆ ಮಾಜಿ ಸಚಿವ ಎಸ್ .ಕೆ.ಕಾಂತ ಆಯ್ಕೆ

ಕಲಬುರಗಿ: 2023-24 ನೇ ಸಾಲಿನ ಡಿ. ದೇವರಾಜ ಅರಸು ರಾಜ್ಯಮಟ್ಟದ ಪ್ರಶಸ್ತಿಗೆ ಹಿರಿಯ ರಾಜಕಾರಣಿ, ಮಾಜಿ ಸಚಿವ ಎಸ್ .ಕೆ.ಕಾಂತ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ ತಿಳಿಸಿದ್ದಾರೆ.

ಬೆಂಗಳೂರಿನ ವಿಕಾಸ ಸೌಧ ಕಚೇರಿಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಸಾಹಿತಿ ಅಲ್ಲಮಪ್ರಭು ಬೆಟ್ಟದೂರ ನೇತೃತ್ವದ ಆಯ್ಕೆ ಸಮಿತಿ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಿದೆ. ಪ್ರಶಸ್ತಿಯು ಐದು ಲಕ್ಷ ರೂ. ನಗದು ಹಾಗೂ ಫಲಕವನ್ನು ಒಳಗೊಂಡಿದೆ. ಆ.20ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಪೂರ್ವಾಹ್ನ 11 ಗಂಟೆಗೆ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 109ನೇ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ ಎಂದರು.

ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಸ್. ಕೆ .ಕಾಂತ ಅವರಿಗೆ ಪ್ರಶಸ್ತಿ ಪ್ರ ಮಾಡಲಿದ್ದಾರೆ’ ಎಂದು ಸಚಿವ ಶಿವರಾಜ್ ತಂಗಡಗಿ ತಿಳಿಸಿದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

8 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

10 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

16 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

17 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

17 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago