ಸುರಪುರ:ಕಳೆದ ಮೇ ತಿಂಗಳಲ್ಲಿ ನಡೆದ ಉಪ ಚುನಾವಣೆಯಲ್ಲಿ ರಾಜಾ ವೇಣುಗೋಪಾಲ ನಾಯಕ ಅವರು ಗೆಲುವು ಸಾಧಿಸಲಿ, ಹುಲಿಗಿ ಕ್ಷೇತ್ರಕ್ಕೆ ಪಾದಯಾತ್ರೆ ಮಾಡುವುದಾಗಿ ಹರಕೆ ಹೊತ್ತಿದ್ದ ನಗರದ ಹುಲಗಮ್ಮ ದೇವಸ್ಥಾನದ ಹುಲಗಪ್ಪ ಪೂಜಾರಿಯವರು ಹೊಸಪೇಟೆ ತಾಲೂಕಿನ ಹುಲಿಗಿ ಕ್ಷೇತ್ರಕ್ಕೆ ಪಾದಯಾತ್ರೆ ಆರಂಭಿಸಿದರು.
ನಗರದ ಬೋವಿಗಲ್ಲಿ ಬಳಿಯಲ್ಲಿನ ಹುಲಗಮ್ಮ ದೇವಸ್ಥಾನದ ಪೂಜಾರಿಯಾಗಿರುವ ಹುಲಗಪ್ಪ ಪೂಜಾರಿಯವರು ತಮ್ಮ ಪಾದಯಾತ್ರೆಯನ್ನು ಆರಂಭಿಸಿ,ಶ್ರೀ ವೇಣುಗೋಪಾಲಸ್ವಾಮಿ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿ ನಂತರ ತಮ್ಮ ಪಾದಯಾತ್ರೆ ಆರಂಭಿಸಿದರು.ಈ ಸಂದರ್ಭದಲ್ಲಿ ನಗರದ ಅನೇಕ ಕಡೆಗಳಲ್ಲಿ ಜನರು ಪೂಜಾರಿ ಪಾದಕ್ಕೆ ನೀರು ಸುರಿದು ಹೂ ಹಣ್ಣು ಅರ್ಪಿಸಿ ಪ್ರಯಾಣಕ್ಕೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಹುಲಗಪ್ಪ ಪೂಜಾರಿಯವರು,ಹಿಂದೆ ರಾಜಾ ವೆಂಕಟಪ್ಪ ನಾಯಕ ಅವರು 2023ರ ಚುನಾವಣೆಯಲ್ಲಿಯೂ ಜಯಗಳಿಸಲೆಂದು ತಾಯಿಗೆ ಹರಕೆ ಹೊರಲಾಗಿತ್ತು,ಈಗ ರಾಜಾ ವೆಂಕಟಪ್ಪ ನಾಯಕ ಅವರ ನಿಧನ ದಿಂದ ನಡೆದ ಉಪ ಚುನಾವಣೆಯಲ್ಲಿ ರಾಜಾ ವೇಣುಗೋಪಾಲ ನಾಯಕ ಅವರು ಜiÀುಗಳಿಸಲಿ,ಹುಲಿಗಿ ತಾಯಿ ನಿನ್ನ ಕ್ಷೇತ್ರಕ್ಕೆ ಪಾದಯಾತ್ರೆ ಮೂಲಕ ಬರುವುದಿಗಿ ಹರಕೆ ಹೊತ್ತಿದ್ದೆ.ಅದರಂತೆ ಈಗ ಪಾದಯಾತ್ರೆ ಹೊರಡಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಮಲ್ಲಣ್ಣ ಸಾಹು ಮುಧೋಳ,ರಮೇಶ ದೊರೆ ಆಲ್ದಾಳ,ವೆಂಕಟೇಶ ಬೇಟೆಗಾರ,ಸಿದ್ದಣಗೌಡ ಹಂಧ್ರಾಳ,ಗೋಪಾಲ ಗೌಂಡಿ,ಶರಣು ಸಾಹುಕಾರ,ಹಣಮಂತ್ರಾಯಗೌಡ ಮೇಟಿ ಚಿಗರಾಳ,ಶರಣು ಸಾಹುಕಾರ ಕುಂಬಾರಪೇಟ ಸೇರಿದಂತೆ ಬೋವಿಗಲ್ಲಿ,ಕುಂಬಾರಪೇಟ ಸೇರಿ ವಿವಿಧ ಕಡೆಗಳ ನೂರಾರು ಜನರು ಭಾಗವಹಿಸಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…