ಬಿಸಿ ಬಿಸಿ ಸುದ್ದಿ

ಕುರಿ ಮತ್ತು ಆಡು ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ

ಕಲಬುರಗಿ; ಎಸ್.ಬಿ.ಐ. ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಉಚಿತವಾಗಿ ಇದೇ ಆಗಸ್ಟ್ 20 ರಿಂದ 29 ರವರೆಗೆ 10ದಿನಗಳ ಕಾಲ ಉಚಿತವಾಗಿ ಕುರಿ ಮತ್ತು ಆಡು ಸಾಕಾಣಿಕೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಎಸ್.ಬಿ.ಐ. ಆರ್‍ಸೆಟ್ ನಿರ್ದೇಶಕರು ತಿಳಿಸಿದ್ದಾರೆ.

ಈ ತರಬೇತಿ ಸಂದರ್ಭದಲ್ಲಿ ಉಚಿತ ಊಟ ಹಾಗೂ ವಸತಿ ಸೌಲಭ್ಯ ನೀಡಲಾಗುತ್ತದೆ. ವಯೋಮಿತಿ 18 ರಿಂದ 45 ವರ್ಷದೊಳಗಿನ ಬಿ.ಪಿ.ಎಲ್., ಅಂತ್ಯೋದಯ ರೇಷನ್, ಎಮ್‍ಜಿಎನ್‍ಆರ್‍ಇಜಿಎ ಕಾರ್ಡ್ ಹೊಂದಿದ ಕುಟುಂಬದ ನಿರುದ್ಯೋಗಿ ಅಭ್ಯರ್ಥಿಗಳು ಸಂಸ್ಥೆಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲಾತಿಗಳೊಂದಿಗೆ 2024ರ ಆಗಸ್ಟ್ 19 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತರಬೇತಿ ಸಂಸ್ಥೆಯಲ್ಲಿ ಇದೇ ಆಗಸ್ಟ್ 19 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3.30 ಗಂಟೆಯವರೆಗೆ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು.

ಮತ್ತಿತರ ಹೆಚ್ಚಿನ ಮಾಹಿತಿಗಾಗಿ ತರಬೇತಿ ಸಂಸ್ಥೆಯನ್ನು ಹಾಗೂ ಮೊಬೈಲ್ ಸಂಖ್ಯೆ 9448994585, 9886781239 ಹಾಗೂ 9900135705ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

4 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

4 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

4 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

20 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

23 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago