ಕಲಬುರಗಿ; ಜಿಲ್ಲಾ ಉದ್ಯೋಗ ವಿನಿಮಯ ವತಿಯಿಂದ ಇದೇ ಆಗಸ್ಟ್ 17 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯ ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಫ್ಲಿಪ್ಕಾರ್ಟ್ದಲ್ಲಿ ಹಬ್ ಸ್ಟೋರರ್ ಹುದ್ದೆಗೆ ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿರಬೇಕು. ಹಬ್ ಟೀಮ್ ಲೀಡರ್ ಹುದ್ದೆಗೆ ಪಿಯುಸಿ ಪಾಸಾಗಿರಬೇಕು. ಡೆಲಿವರಿ ಎಕ್ಸಿಕ್ಯೊಟಿವ್ ಹುದ್ದೆಗೆ ಎಸ್.ಎಸ್.ಎಲ್.ಸಿ. ಪಾಸಾಗಿರಬೇಕು. ವಯೋಮಿತಿ 18 ರಿಂದ 35 ವರ್ಷದೊಳಗಿರಬೇಕು.
ಚೈತನ್ಯ ಫೈನಾನ್ಸ್ದಲ್ಲಿ ಯುನಿಟ್ ಆಡಿಟ್ ಮ್ಯಾನೇಜರ್, ಯುನಿಟ್ ಕ್ರೆಡಿಟ್ ಮ್ಯಾನೇಜರ್ ಹಾಗೂ ಬಿ.ಎಮ್. ಹುದ್ದೆಗಳಿಗೆ ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 32 ವರ್ಷದೊಳಗಿರಬೇಕು.
ಆರ್.ಬಿ.ಎಲ್. ಫೈನ್ಸರ್ವ್ದಲ್ಲಿ ಗ್ರೂಪ್ ಲೋನ್ ಆಫೀಸರ್ ಹುದ್ದೆಗೆ ಪಿಯುಸಿ, ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು.
ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳ ಝೆರಾಕ್ಸ್, ರೆಸ್ಯೂಮ್(ಬಯೋಡಟಾ) ಭಾವಚಿತ್ರಗಳು ಹಾಗೂ ಆಧಾರ್ಕಾರ್ಡ್ ದಾಖಲೆಗಳೊಂದಿಗೆ ಮೇಲ್ಕಂಡ ದಿನದಂದು ನಡೆಯುವ ನೇರ ಸಂದರ್ಶನÀದಲ್ಲ್ಲಿ ಭಾಗವಹಿಸಬಹುದಾಗಿದೆ. ನೇರ ಸಂದರ್ಶನÀದಲ್ಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಮೊಬೈಲ್ ಸಂಖ್ಯೆ 08472-274846, ಮೊಬೈಲ್ ಸಂಖ್ಯೆ 9620095270 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.