ಕಲಬುರಗಿ: 78 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕಲಬುರಗಿ ಯ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ರಾಷ್ಟ್ರಧ್ವಜಾರೋಹಣವನ್ನು ಎಂಎಲ್ ಸಿ ಹಾಗೂ ಪಕ್ಷದ ಜಿಲ್ಲಾಧ್ಯಕ್ಷರಾದ ಜಗದೇವ ಗುತ್ತೇದಾರ ನೆರವೇರಿಸಿದರು.
ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಹಾಜಿರಿದ್ದರು.
ಈ ಸಂದರ್ಭದಲ್ಲಿ ಸಂಸದರಾದ ರಾಧಾಕೃಷ್ಣ ದೊಡ್ಡಮನಿ ಸೇರಿದಂತೆ ಪಕ್ಷದ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.