ಶಹಾಪುರ : ಅನೇಕ ಹಿರಿಯ ಸ್ವಾತಂತ್ರ ಹೋರಾಟಗಾರರ ತ್ಯಾಗ ಬಲಿದಾನಗಳಿಂದ ನಮಗೆ ಸ್ವಾತಂತ್ರ್ಯ ದೊರಕಿದೆ,ಅಂತಹ ಮಹಾತ್ಮರನ್ನು ಸ್ಮರಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ.ರವೀಂದ್ರನಾಥ್ ಹೊಸಮನಿ ಹೇಳಿದರು.
ನಗರದ ದೇಶಮುಖ ಬಡಾವಣೆಯಲ್ಲಿರುವ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಾಲಯದಲ್ಲಿ 78 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ ಭಾರತ ಸ್ವಾತಂತ್ರ್ಯ ಸಂಗ್ರಾಮ ಅದೊಂದು ರೋಚಕ ಇತಿಹಾಸವಾಗಿದ್ದು,ಅಂದು ನಡೆದಿರುವ ಹಲವಾರು ಸಾಹಸಮಯ ಕಥೆಗಳನ್ನು ಮತ್ತು ಚರಿತ್ರೆಯನ್ನು ಇಂದಿನ ಯುವಕರು ಓದಿ ಅರ್ಥೈಸಿಕೊಳ್ಳಬೇಕು ಎಂದು ನುಡಿದರು.
ಇನ್ನೋರ್ವ ಮುಖ್ಯ ಅತಿಥಿಗಳು ಹಾಗೂ ಹಿರಿಯ ಮುಖಂಡರಾದ ಸಿದ್ದಲಿಂಗಣ್ಣ ಆನೆಗುಂದಿ ಮಾತನಾಡಿ ದೇಶಕ್ಕಾಗಿ ನಾವೆಲ್ಲರೂ ಒಂದಾಗಿ ಸೌಹಾರ್ದತೆಯ ದೇಶದ ರಕ್ಷಣೆಗೆ ಮುಂದಾಗಬೇಕು ಜೊತೆಗೆ ಸ್ವಾತಂತ್ರ್ಯ ಹೋರಾಟಗಾರರ ಆದರ್ಶ ತತ್ವಗಳನ್ನು ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದು ನುಡಿದರು.
ಈ ಸಂದರ್ಭದಲ್ಲಿ ಹಿರಿಯ ಸಾಹಿತಿಗಳಾದ ಶಿವಣ್ಣ ಇಜೇರಿ, ಮುಖಂಡರಾದ ಸಣ್ಣ ನಿಂಗಪ್ಪ ನಾಯ್ಕೋಡಿ,ಶಿವಲಿಂಗಣ್ಣ ಸಾಹು, ಸಾಹಿತಿ ಬಸವರಾಜ ಶಿಣ್ಣೂರ ಗೌರವ ಕಾರ್ಯದರ್ಶಿ ಸುರೇಶ್ ಬಾಬು ಅರುಣಿ ಶಂಕರ್ ಹುಲಕಲ್, ದೇವೇಂದ್ರಪ್ಪ ಕನ್ಯಾಕುಳೂರ, ಸೇರಿದಂತೆ ಹಲವರು ಹಾಜರಿದ್ದರು.