ಕಲಬುರಗಿ: ವಿಶೇಷ ಚೇತನರಿಗೆ ನೆರವು ಯೋಜನೆಯಡಿಯಲ್ಲಿ 447 ದಿವ್ಯಾಂಗರಿಗೆ ಮತ್ತು ರಾಷ್ಟ್ರೀಯ ವಯೋಶ್ರೀ ಯೋಜನೆಯಡಿಯಲ್ಲಿ 20 ಹಿರಿಯ ನಾಗರಿಕರಿಗೆ ತ್ರಿಚಕ್ರ ವಾಹನಗಳು, ಶ್ರವಣ ಸಾಧನಗಳು ಸೇರಿದಂತೆ ಹಲವು ಸಹಾಯಕ ಸಾಧನಗಳನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ವಿವರಿಸಿದರು.
ಗುರುವಾರ ನಗರದ ಡಿಎಆರ್ ಮೈದಾನದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ರಾಷ್ಟ್ರಧ್ವಜಾರೋಹಣ ಸಮಾರಂಭದಲ್ಲಿ ಭಾಗವಹಿಸಿದ ನಂತರ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಗಣ್ಯರನ್ನು ಸನ್ಮಾನಿಸಿ, ವಿವಿಧ ಅಭಿವೃದ್ಧಿಗೆ ಕಾರ್ಯಗಳಿಗೆ ಚಾಲನೆ ನೀಡಿ, ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಿದರು.
ಎಸ್.ಎಸ್.ಎಲ್ ಸಿ ಮತ್ತು ಪಿಯುಸಿ ಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಿ ಗೌರವಿಸಲಾಯಿತು.ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ವತಿಯಿಂದ 50 ಕಲ್ಯಾಣ ಕರ್ನಾಟಕ ಸಾರಿಗೆ ಮತ್ತು 14 ಟ್ರಕ್’ಗಳಿಗೆ ಚಾಲನೆ ನೀಡಲಾಯಿತು.
ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ವಿವಿಧ ಶಾಲೆಯ ಮಕ್ಕಳು ದೇಶಭಕ್ತಿ ಗೀತೆಗಳು, ಸೇರಿದಂತೆ ಹಲವು ನೃತ್ಯ ಪ್ರದರ್ಶನ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರಗನ್ನು ಹೆಚ್ಚಿಸಿತು.
ಈ ಸಂದರ್ಭದಲ್ಲಿ ಸಂಸದ ರಾಧಾಕೃಷ್ಣ ದೊಡ್ಡಮನಿ, ಶಾಸಕರಾದ ಅಲ್ಲಮಪ್ರಭು ಪಾಟೀಲ, ಕನೀಜ್ ಫಾತಿಮಾ, ವಿಧಾನ ಪರಿಷತ್ ಶಾಸಕರಾದ ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ದೇವೆಂದ್ರಪ್ಪ ಮರತೂರು, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಕಲಬುರಗಿ ಮಹಾನಗರ ಪಾಲಿಕೆಯ ಮಹಾಪೌರರಾದ ಯಲ್ಲಪ್ಪ ನಾಯ್ಕೋಡಿ, ಕೆ.ಕೆ.ಅರ್.ಡಿ.ಬಿ ಕಾರ್ಯದರ್ಶಿ ಎಂ.ಸುಂದರೇಶ ಬಾಬು, ಡಿ.ಸಿ. ಬಿ.ಫೌಜಿಯಾ ತರನ್ನುಮ್, ಐ.ಜಿ.ಪಿ ಅಜಯ್ ಹಿಲೋರಿ, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಆಕಾಶ ಶಂಕರ್, ಡಿ.ಸಿ.ಪಿ ಕನಿಕಾ ಸಿಕ್ರಿವಾಲ್, ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ ದೇವಿದಾಸ್, ಡಿ.ಸಿ.ಎಫ್. ಸುಮಿತ್ ಪಾಟೀಲ, ಕೆ.ಕೆ.ಆರ್.ಟಿ.ಸಿ ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪಾ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಜಿಲ್ಲಾ ಅಂಗವಿಕಲ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸಾದೀಕ್ ಹುಸೈನ್ ಖಾನ್ ಸೇರಿದಂತೆ ಹಲವರು ಇದ್ದರು.
ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…