ಕಲಬುರಗಿ: 2024-25 ನೇ ಸಾಲಿನ ರಾಜ್ಯಮಟ್ಟದ ಡಿ ದೇವರಾಜ ಅರಸು ಪ್ರಶಸ್ತಿಗೆ ಭಾಜನರಾಗಿರುವ ಸಾಮಾಜಿಕ ಹೋರಾಟಗಾರ ಮತ್ತು ಮಾಜಿ ಸಚಿವ ಎಸ್ ಕೆ ಕಾಂತ ರವರನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಭು ದೊರೆಯವರು ಅಧಿಕೃತವಾಗಿ ಸರ್ಕಾರಿ ಆದೇಶ ಪ್ರತಿಯನ್ನು ನೀಡಿ ಅಭಿನಂದಿಸಿದರು.
ಅಗಸ್ಟ್ 20ರಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿರುವ ರಾಜ್ಯಮಟ್ಟದ ಡಿ ದೇವರಾಜ ಅರಸು ಜಯಂತೋತ್ಸವ ಕಾರ್ಯಕ್ರಮಕ್ಕೆ ಈ ಸಂದರ್ಭದಲ್ಲಿ ಆಹ್ವಾನಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದು, ಪ್ರಶಸ್ತಿಯು 5 ಲಕ್ಷ ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಚೇರಿ ಅಧೀಕ್ಷಕರಾದ ಮಹ್ಮದ್ ಆರೀಫ್, ವಿಲಾಸ್ ಕುಮಾರ್ ಹಾಗೂ ಇತರ ಸಿಬ್ಬಂದಿ ವರ್ಗದವರು ಹಾಜರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…