ಬಿಸಿ ಬಿಸಿ ಸುದ್ದಿ

ದೇಶದ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಪ್ರಮುಖ

ಕಲಬುರಗಿ: ನಗರದ ಮಹರ್ಷಿ ವೇದವ್ಯಾಸ ಮಂಥನ ಮತ್ತು ಪ್ರೇರಣ ಟ್ರಸ್ಟ್ ಅಡಿಯಲ್ಲಿರುವ ಸ್ವಾಭಿಮಾನಿ ಶ್ರೀ ವಿಠ್ಠಲ್ ಹೇರೂರ ಮೇಟ್ರಿಕ್ ನಂತರದ ಬಾಲಕರ ಉಚಿತ ವಸತಿ ನಿಲಯದಲ್ಲಿ ಗುರುವಾರ ೭೮ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸಂಯುಕ್ತ ಕರ್ನಾಟಕ ಪತ್ರಿಕೆಯ ಸ್ಥಾನಿಕ ಸಂಪಾದಕರಾದ ಸುಭಾಷ್ ಬಣಗಾರ ಮಾತನಾಡಿ, ಬ್ರೀಟಿಷರ ಆಡಳಿತದಿಂದ ಆ.೧೫ರಂದು ಸ್ವತಂತ್ರಗೊಂಡರೆ, ಸೆ.೧೭ರಂದು ನಿಜಾಮರ ಆಡಳಿತದ ಕಪಿಮುಷ್ಠಿಯಿಂದ ಹೊರಬರಲಾಯಿತು. ದೇಶದ ಜನರು ಒಂದು ಬಾರಿ ಮಾತ್ರ ಸ್ವಾತಂತ್ರ ದಿನಾಚರಣೆ ಆಚರಿಸುತ್ತಾರೆ. ಆದರೆ ಕಲ್ಯಾಣ ಕರ್ನಾಟಕದ ಜನರು ಎರಡು ಬಾರಿ ಆಚರಿಸುತ್ತಾರೆ ಎಂದು ಹೇಳಿದರು.

೭೮ನೇ ಸ್ವಾತಂತ್ರ್ಯೋತ್ಸವವನ್ನು ವಿಕಸಿತ ಭಾರತ ೨೦೪೭ ಎಂದು ಘೋಷಿಸಲಾಗಿದೆ. ೨೦೪೭ಕ್ಕೆ ಸ್ವಾತಂತ್ರ್ಯ ಗೊಂಡು ೧೦೦ ವರ್ಷಗಳಾಗುತ್ತವೆ. ಈ ಸಂದರ್ಭದಲ್ಲಿ ದೇಶದ ವಿಕಾಸಕ್ಕೆ, ನಮ್ಮೆಲ್ಲರ ವಿಕಾಸಕ್ಕೆ ನಾವೆಲ್ಲರೂ ಪಣತೊಡಬೇಕು. ನಮ್ಮ ಕೈಲಾದ ಮಟ್ಟಿಗೆ ಸಮಾಜ ಸೇವೆ ಮಾಡುವ ಮೂಲಕ ದೇಶದ ಅಭಿವೃದ್ಧಿಗೆ ಶ್ರಮಿಸಬೇಕು. ಸ್ವಚ್ಛಂದ ಭಾರತಕ್ಕಾಗಿ ನಮ್ಮ ಸುತ್ತಮುತ್ತಲ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಮರ-ಗಿಡಗಳನ್ನು ಬೆಳೆಸಬೇಕು. ಪರಿಸರ ಮಾಲಿನ್ಯ ಕಲುಷಿತವಾಗದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಯುವಕರು ಪಾತ್ರ ಪ್ರಮುಖವಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಟ್ರಸ್ಟ್ನ ಅಧ್ಯಕ್ಷರಾದ ಡಾ. ಮಲ್ಲಿಕಾರ್ಜುನ್ ಮುಕ್ಕಾ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಯನ್ನು ಅರಿತು ಕಾರ್ಯ ನಿರ್ವಹಿಸಬೇಕು. ಅಂದಾಗ ಮಾತ್ರ ಇಂತಹ ಕಾರ್ಯಕ್ರಮಗಳಿಗೆ ಅರ್ಥ ಬರುತ್ತದೆ ಎಂದರು.

ಅತಿಥಿಗಳಾಗಿ ಟ್ರಸ್ಟಿನ ಖಜಾಂಚಿ ಈರಣ್ಣ ಜಮಾದಾರ, ಪ್ರಧಾನ ಕಾರ್ಯದರ್ಶಿ ಎಸ್ ಶ್ಯಾಮ್‌ಕುಮಾರ್, ಸಹ ಪ್ರಧಾನ ಕಾರ್ಯದರ್ಶಿ ಸತೀಶ್ ಕುಮಾರ್, ಸಂಘಟನಾ ಕಾರ್ಯದರ್ಶಿ ಯಲ್ಲಪ್ಪ ತಳವಾರ್, ಸದಸ್ಯರಾದ ಪ್ರೊಫೆಸರ್ ಗಿರಿಮಲ್ಲಪ್ಪ ಹರವಾಳ್, ಸೋಮರಾಯ ಎಂ ನಾಗವಿ, ಚಂದ್ರಶೇಖರ್ ಕೋಟಾರಗಸ್ತಿ ಹಾಗೂ ವಸತಿ ನಿಲಯದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

14 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago