ಕಲಬುರಗಿ: ಭಾರತದ ಪ್ರಗತಿ ಶಿಕ್ಷಣದಿಂದ ಸಾಧ್ಯ. ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು. ಪ್ರಸ್ತುತ ವಿಷಯಗಳ ಬಗ್ಗೆ ಮಾಹಿತಿ ಹೊಂದಿರಬೇಕು. ವಿದ್ಯಾರ್ಥಿಗಳಲ್ಲಿ ಅಡಗಿದ ಪ್ರತಿಭೆಯನ್ನು ಬೆಳಕಿಗೆ ತರುವುದು ಉಪನ್ಯಾಸಕರ ಕರ್ತ್ಯವ್ಯ ಆಗಿದ್ದು ವಿಶ್ವ ವಿದ್ಯಾಲಯಗಳ ಅಭಿವೃದ್ಧಿ ನಾಂದಿ ಆಗಲಿದೆ ಎಂದು ಕೆಬಿಎನ್ ವಿಶ್ವವಿದ್ಯಾಲಯದ ಸಮ ಕುಲಾಧಿಪತಿ ಸಯ್ಯದ ಮುಹಮ್ಮದ್ ಅಲಿ ಅಲ್ ಹುಸೇನಿ ಹೇಳಿದರು.
ನಗರದ ಖಾಜಾ ಬಂದಾನವಾಜ ವಿವಿಯಲ್ಲಿ ಆಯೋಜಿಸಿದ್ದ 78ನೇ ಸ್ವಾತಂತ್ರೋತ್ಸವ ಆಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ದೇಶ ಸ್ವಾತಂತ್ರ್ಯ ಪಡೆದ ನಂತರ ಅನೇಕ ಕ್ಷೆತ್ರಗಳಲ್ಲಿ ಪ್ರಗತಿ ಹೊಂದುತ್ತಿದೆ. ಅಲ್ಲದೇ ಭಾರತ ಈಗ ಆರ್ಥಿಕವಾಗಿ ಅತೀ ವೇಗವಾಗಿ ಬೆಳೆಯುತ್ತಿದೆ. ಇತ್ತೀಚಿನ ದಿನಗಳಲ್ಲಿ ಜ್ಞಾನ ಪಡೆಯಲು ಅಂತರ್ಜಾಲದಂತಹ ಮಾರ್ಗಗಳಿವೆ. ಪ್ರತಿ ಪ್ರಜೆಯೂ ತಮ್ಮನ್ನು ಅಪಗ್ರೇಡ್ ಮಾಡಿಕೊಳ್ಳ ಬಹುದು ಎಂದರು.
ಖಾಜಾ ಬಂದನಾವಾಜ್ ವಿಶ್ವವಿದ್ಯಾಲಯ ವಿದ್ಯಾರ್ಥಿಗಳನ್ನು ಭಾರತದ ಉತ್ತಮ ಪ್ರಜೆಯನ್ನಾಗಿ ಮಾಡುವಲ್ಲಿ ನಿರತವಾಗಿದೆ ಎಂದರು. ಕೆಬಿಎನ್ ವಿವಿಯನ್ನು ಇನ್ನೂ ಎತ್ತರಕ್ಕೆ ಬೆಳೆಸುವಲ್ಲಿ ನಾವೆಲ್ಲ ಶ್ರಮಿಸಬೇಕಿದೆ. ಆ ನಿಟ್ಟಿನಲ್ಲಿ ಎಲ್ಲಾ ಉಪನ್ಯಾಸಕ ವರ್ಗ ಇನ್ನೂ ಕಠಿಣ ಶ್ರಮ ವಹಿಸಿ, ಸಂಶೋಧನೆಯಲ್ಲಿ ನಿರತರಾಗಬೇಕು ಎಂದ ಅವರು ಶೀಘ್ರದಲ್ಲಿಯೇ ಕೆಬಿಎನ್ ವಿವಿಯಲ್ಲಿ ಇನ್ನೂ ಹೆಚ್ಚು ಸೌಲಭ್ಯಗಳು ಲಭ್ಯವಾಗಲಿವೆ ಎಂದು ತಿಳಿಸಿದರು.
ವಿವಿಯ ಉಪಕುಲಪತಿ ಪ್ರೊ ಅಲಿ ರಜಾ ಮೂಸ್ವಿ ಪ್ರಜಾಪ್ರಭುತ್ವ ಮತ್ತು ಉನ್ನತ ಶಿಕ್ಷಣದ ಬಗ್ಗೆ ಮಾತನಾಡಿದರು. ಕೆಬಿಎನ ವಿವಿಯು ಜ್ಞಾನದ ಕೇಂದ್ರ ವಾಗಬೇಕು, ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಯಾಗಬೇಕು ಎಂದು ಅಭಿಪ್ರಾಯಪಟ್ಟರು.
ಸಯ್ಯದ್ ಅಕ್ಬರ ಹುಸೇನಿ ಶಾಲೆಯ ಎನ್ ಸಿಸಿ ಘಟಕದ ವಿದ್ಯಾರ್ಥಿಗಳು ಪಥ ಸಂಚಲನ ಮಾಡಿದರು. ಸ್ವಾತಂತ್ರೋತ್ಸವದ ಅಂಗವಾಗಿ ಏರ್ಪಡಿಸಿದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ವೈದ್ಯಕೀಯ ನಿಕಾಯದ ಡೀನ ಡಾ ಸಿದ್ದೇಶ್ ಸಿರವಾರ, ಇಂಜಿನಿಯರಿಂಗ ಡೀನ ಪ್ರೊ ಅಜಾಮ, ಮೆಡಿಕಲ ಸೂಪರಿಸೂಪರಿಂಟೆಂಡೆಂಟ್ ಡಾ ಸಿದ್ಧಲಿಂಗ ಚೆಂಗಟಿ, ಕಲಾ ಭಾಷಾ ನಿಕಾಯದ ಡೀನ್ ಡಾ. ನಿಶಾತ್ ಆರೀಫ್ ಹುಸೇನಿ, ಡಾ ಬಷೀರ,ಡಾ ರಾಧಿಕಾ ಕೆಬಿಎನ್ ಅಡಿ ಬರುವ ಎಲ್ಲ ವಿದ್ಯಾ ಸಂಸ್ಥೆಗಳ ಸಮಸ್ತ ಶಿಕ್ಷಕ ಮತ್ತು ಶಿಕ್ಷಕೇತರ ವರ್ಗ ಹಾಗೂ ಎಲ್ಲ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…