ಶರಣಬಸವ ವಿಶ್ವವಿದ್ಯಾಲಯದಲ್ಲಿ ವಿಜೃಂಭಣೆಯಿಂದ ಜರುಗಿದ ಸ್ವಾತಂತ್ರ್ಯ ದಿನಾಚರಣೆ

0
35

ಕಲಬುರಗಿ; ವಿಜ್ಞಾನ ಮತ್ತು ತಂತ್ರಜ್ಞಾನ, ಶಿಕ್ಷಣ, ಮೂಲ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ದೇಶ ಶ್ಲಾಘನೀಯ ಪ್ರಗತಿ ಸಾಧಿಸಿದೆ. 2047 ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತದ ಕನಸನ್ನು ನನಸಾಗಿಸಲು ಬಡತನ, ಅಸಮಾನತೆ ಮತ್ತು ಪರಿಸರ ಸಮಸ್ಯೆಗಳಂತಹ ಕಾಡುವ ಸಮಸ್ಯೆಗಳನ್ನು ನಿವಾರಿಸಲು ಒಗ್ಗಟ್ಟಿನ ಪ್ರಯತ್ನದ ಅಗತ್ಯವಿದೆ ಎಂದು ಶರಣಬಸವ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯೆ ಹಾಗೂ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್ ಪೂಜ್ಯ ಮಾತೋಶ್ರೀ ಡಾ. ದಾಕ್ಷಾಯಿಣಿ ಅವ್ವಾಜಿ ಹೇಳಿದರು.

ಕಲಬುರಗಿ ನಗರದ ಶರಣಬಸವ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ ಗುರುವಾರ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆಯ ಸ್ಮರಣಾರ್ಥ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಡಾ. ದಾಕ್ಷಾಯಿಣಿ ಅವ್ವಾಜಿ, ಅಚಲ ಬದ್ಧತೆ ಮತ್ತು ಸಮಗ್ರತೆಯಿಂದ ಮಾತ್ರ ಎಲ್ಲ ಕ್ಷೇತ್ರಗಳಲ್ಲಿ ಅಭಿವೃದ್ಧಿ ಹೊಂದಿದ ಭಾರತದ ಕನಸು ನನಸಾಗಲು ಸಾಧ್ಯ ಎಂದರು. “ಈ ದೇಶವನ್ನು ಎಲ್ಲ ರೀತಿಯಲ್ಲೂ ಶ್ರೇಷ್ಠವಾಗಿಸಲು ಮತ್ತು ಅದನ್ನು ಆರ್ಥಿಕ ಮಹಾಶಕ್ತಿಯನ್ನಾಗಿ ಮಾಡಲು ಅವಿರತವಾಗಿ ಶ್ರಮಿಸಲು ಬದ್ಧತೆ ಮತ್ತು ಜವಾಬ್ದಾರಿಯುತ ಭವಿಷ್ಯದ ನಾಗರಿಕರನ್ನು ರೂಪಿಸುವ ಮಹತ್ತರವಾದ ಜವಾಬ್ದಾರಿ ಇಂದು ಶಿಕ್ಷಕರ ಮೇಲಿದೆ” ಎಂದು ತಿಳಿಸಿದರು.

Contact Your\'s Advertisement; 9902492681

ಕೋಟ್ಯಂತರ ಭಾರತೀಯರ ತ್ಯಾಗ ಬಲಿದಾನದಿಂದ ಭಾರತದ ಸ್ವಾತಂತ್ರ್ಯಕ್ಕೆ ಬುನಾದಿ ಹಾಕಲಾಗಿದ್ದು, ಈ ತ್ಯಾಗಗಳು ವ್ಯರ್ಥವಾಗಬಾರದು ಮತ್ತು ದೇಶದ ಸ್ವಾತಂತ್ರ್ಯವನ್ನು ರಕ್ಷಿಸುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕನ ಮೇಲಿದ್ದು, ಯಾವುದೇ ತ್ಯಾಗಕ್ಕೂ ಸಿದ್ಧರಾಗಿರಬೇಕು ಎಂದು ಡಾ. ಅವ್ವಾಜಿ ಕರೆ ನೀಡಿದರು.

ಶರಣಬಸವೇಶ್ವರ ವಿದ್ಯಾವರ್ಧಕ ಸಂಘವು ತನ್ನ ಶಿಕ್ಷಣ ಸಂಸ್ಥೆಗಳ ಸರಪಳಿಯಲ್ಲಿ 30,000 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮಾರ್ಗಗಳನ್ನು ಒದಗಿಸುತ್ತಿದೆ ಎಂದ ಅವರು, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮತ್ತು ಪ್ರತಿ ವರ್ಷ 700 ರಿಂದ 800 ವಿದ್ಯಾರ್ಥಿಗಳಿಗೆ ಉಚಿತ ವೈದ್ಯಕೀಯ ಸೀಟುಗಳನ್ನು ಖಾತ್ರಿಪಡಿಸುವಲ್ಲಿ ಎದ್ದು ಕಾಣುತ್ತಿರುವ ಶರಣಬಸವೇಶ್ವರ ವಸತಿ ಸಂಯುಕ್ತ ಪದವಿ ಪೂರ್ವ ಕಾಲೇಜಿಗೆ ಡಾ ಅವ್ವಾಜಿ ವಿಶೇಷ ಪ್ರಶಂಸೆ ವ್ಯಕ್ತಪಡಿಸಿದರು.

“ಶರಣಬಸವೇಶ್ವರ ವಸತಿ ಸಂಯುಕ್ತ ಪದವಿ ಪೂರ್ವ ಕಾಲೇಜನ್ನು ನಗರದಲ್ಲಿ ಇನ್ನೂ ಒಂದು ಶಾಖೆಯನ್ನು ತೆರೆಯುವ ಮೂಲಕ ಮತ್ತಷ್ಟು ವಿಸ್ತರಿಸಲು ನಾವು ಭವಿಷ್ಯದ ಯೋಜನೆಗಳನ್ನು ಹೊಂದಿದ್ದೇವೆ, ಇದು ಪ್ರತಿ ವರ್ಷ ಕಾಲೇಜಿಗೆ ಪ್ರವೇಶಕ್ಕಾಗಿ ಸಾರ್ವಜನಿಕರಿಂದ ಹೆಚ್ಚುತ್ತಿರುವ ಬೇಡಿಕೆಗಳನ್ನು ಪೂರೈಸುವ ಮುಖ್ಯ ಉದ್ದೇಶವಾಗಿದೆ ಎಂದರು.

ವಿವಿಧ ಶಾಲಾ-ಕಾಲೇಜುಗಳ ಎನ್‍ಸಿಸಿ ಕೆಡೆಟ್‍ಗಳು ಮತ್ತು ವಿದ್ಯಾರ್ಥಿಗಳ ಗೌರವ ರಕ್ಷೆಯನ್ನು ಸ್ವೀಕರಿಸಿದ ಸಂಸ್ಥಾನದ 9ನೇ ಮಹಾದಾಸೋಹ ಪೀಠಾಧಿಪತಿ ಚಿರಂಜೀವಿ ಪೂಜ್ಯ ದೊಡ್ಡಪ್ಪ ಅಪ್ಪಾಜಿ ಅವರು ತಮ್ಮ ಚೊಚ್ಚಲ ಭಾಷಣದಲ್ಲಿ, ನಮ್ಮ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗದ ಫಲದಿಂದ ಪ್ರತಿಯೊಬ್ಬರೂ ಸ್ವಾತಂತ್ರ್ಯದ ಫಲವನ್ನು ಅನುಭವಿಸುತ್ತಿದ್ದೇವೆ ಮತ್ತು ದೇಶದ ಗಡಿಯನ್ನು ರಕ್ಷಿಸಲು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಯೋಧರಿಗೆ ನೆನಪಿಸಿಕೊಳ್ಳುತ್ತಾ, ಉಪಸ್ಥಿತರಿದ್ದ ತಮ್ಮ ಗುರುಗಳಿಗೆ ಹಾಗೂ ಅವರ ತಂದೆಯವರಾದ ಮತ್ತು ಶರಣಬಸವೇಶ್ವರ ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ, ತಾಯಿಯವರಾದ ಡಾ. ದಾಕ್ಷಾಯಿಣಿ ಅವ್ವಾಜಿ ಸೇರಿದಂತೆ ಅವರ ಸಹೋದರಿಯರಾದ ಕುಮಾರಿ ಭವಾನಿ, ಕುಮಾರಿ ಶಿವಾನಿ ಕುಮಾರಿ ಮಹೇಶ್ವರಿ ಅವರಿಗೆ ನಮನ ಸಲ್ಲಿಸಿದರು.

ಸಂಘದ ಕಾರ್ಯದರ್ಶಿಗಳಾದ ಶ್ರೀ ಬಸವರಾಜ ದೇಶಮುಖ, ವಿವಿಯ ಉಪಕುಲಪತಿ ಪೆÇ್ರ. ಅನಿಲಕುಮಾರ ಬಿಡವೆ, ಕುಲಸಚಿವ ಡಾ. ಎಸ್.ಜಿ.ಡೊಳ್ಳೇಗೌಡರ್, ಡೀನ್ ಡಾ. ಲಕ್ಷ್ಮೀ ಪಾಟೀಲ ಮಾಕಾ, ನಿರ್ದೇಶಕ ಡಾ. ವಿ.ಡಿ.ಮೈತ್ರಿ ಸೇರಿದಂತೆ ಇತರ ಪ್ರಮುಖರು ಉಪಸ್ಥಿತರಿದ್ದರು. ನಂತರ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಸಾಂಸ್ಕøತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ಇದಕ್ಕೂ ಮುನ್ನ ಶರಣಬಸವ ವಿಶ್ವವಿದ್ಯಾಲಯದಲ್ಲಿರುವ ಧ್ವಜಸ್ತಂಭದಲ್ಲಿ, ಕುಲಸಚಿವ ಡಾ. ಎಸ್.ಜಿ.ಡೊಳ್ಳೇಗೌಡರ್, ಡೀನ್ ಡಾ. ಲಕ್ಷ್ಮೀ ಪಾಟೀಲ ಮಾಕಾ, ಹಣಕಾಸು ಅಧಿಕಾರಿ ಪೆÇ್ರ. ಕಿರಣ ಮಾಕಾ, ನಿರ್ದೇಶಕ ಪೆÇ್ರ. ವಿ.ಡಿ.ಮೈತ್ರಿ ಮತ್ತಿತರರ ಉಪಸ್ಥಿತಿಯಲ್ಲಿ ಉಪಕುಲಪತಿ ಡಾ. ಅನಿಲಕುಮಾರ ಬಿಡವೆಯವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here