ಬಿಸಿ ಬಿಸಿ ಸುದ್ದಿ

ಸರಕಾರದ ಯೋಜನೆಗಳು ಸದುಪಯೋಗ ಪಡಿಸಿಕೊಳ್ಳಲು: ಮಹೇಶ ಧಮ್ಮರಗಿಡ್ಡ ಕರೆ

ಆಳಂದ: ಸರಕಾರದ ಯೋಜನೆಗಳನ್ನು ಅರ್ಹ ಜನಸಾಮಾನ್ಯರು ಸದುಪಯೋಗ ಪಡಿಸಿಕೊಂಡಾಗ ಮಾತ್ರ ಯೋಜನೆಗಳು ಯಶಸ್ವಿಯಾಗಲು ಸಾಧ್ಯವಾಗುತ್ತದೆ ಎಂದು ನಿಂಬರ್ಗಾ ಉಪತಹಶೀಲ್ದಾರರಾದ ಮಹೇಶ ಧಮ್ಮರಗಿಡ್ಡ ಕರೆ ನೀಡಿದರು.

ತಾಲೂಕಿನ ನಿಂಬರ್ಗಾ ಗ್ರಾಮದ ಡಾ.ಅಂಬೇಡ್ಕರ್ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸಿದ್ಧಲಿಂಗೇಶ್ವರ ಪ್ರೌಢ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ‘ಕಲಬುರಗಿ ಪ್ರಭ’ ಕನ್ನಡ ದಿನ ಪತ್ರಿಕೆ ವತಿಯಿಂದ ಹಮ್ಮಿಕೊಂಡಿದ್ದ ಶಾಲಾ ಶಿಕ್ಷಕರಿಗೆ ಹಾಗೂ ಅವರ ಕುಟುಂಬಗಳಿಗೆ ಉಚಿತ ಆಯುμÁ್ಮನ್ ಭಾರತ್ ಆರೋಗ್ಯ ಕಾರ್ಡ್ ವಿತರಿಸಿ ಮಾತನಾಡಿದರು. ಸರಕಾರ ಬಡವರ ಆರೋಗ್ಯದ ಹೀತ ದೃಷ್ಟಿಯಿಂದ ಬಿಪಿಎಲ್ ಪಡಿತರ ಕಾರ್ಡ್ ದಾರರಿಗೆ 5 ಲಕ್ಷ ಮತ್ತು ಎ.ಪಿ.ಎಲ್ ಪಡಿತರ ಕಾರ್ಡ್ ದಾರರಿಗೆ 1.5 ಲಕ್ಷದವರಿಗೂ ಉಚಿತವಾಗಿ ಆರೋಗ್ಯದ ಚಿಕಿತ್ಸೆಯನ್ನು ಪಡೆದುಕೊಳಬಹುದೆಂದು ತಿಳಿಸಿದರು.

ಜ್ಞಾನಜೋತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಶ್ರೀನಿವಾಸ ಗಾಜರೆ ಮಾತನಾಡಿ, ನಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರಿಗೆ ಹಾಗೂ ಅವರ ಕುಟುಂಬಗಳಿಗೆ ಉಚಿತವಾಗಿ ಆಯುμÁ್ಮನ ಭಾರತ ಕಾರ್ಡ್ ಗಳನ್ನು ನೀಡಿದ ‘ಕಲಬುರಗಿ ಪ್ರಭ’ ಪತ್ರಿಕೆಯ ಸಾಮಾಜಿಕ ಕಾರ್ಯ ನಿಜಕ್ಕೂ ಶ್ಲಾಘನೀಯವಾದದ್ದು ಎಂದು ಸಂತೋಷ ವ್ಯಕ್ತಪಡಿಸಿದರು.

ಅದರಂತೆ ನಿಂಬರ್ಗಾ ಪೆÇೀಲಿಸ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಮ ಗಾರ್ಡ್ ಗಳಾದ ರವಿ ಮಾಂಗ ಹಾಗೂ ಶರಣಬಸಪ್ಪಾ ಕಲಬುರಗಿ ಕುಟುಂಬಗಳಿಗೆ ಆಯುμÁ್ಮನ ಭಾರತ ಕಾರ್ಡ್ ಗಳನ್ನು ನಿಂಬರ್ಗಾ ಪಿಎಸ್ ಐ ಶ್ರೀಮತಿ ಇಂದುಮತಿ ರವರು ಠಾಣೆಯಲ್ಲಿ ವಿತರಿಸಿ ಮಾತನಾಡಿದವರು, ಕಲಬುರಗಿ ಪ್ರಭ ಪತ್ರಿಕೆಯು ತಮ್ಮ ದೈನಂದಿನ ಕಾರ್ಯಗಳ ಜೊತೆಗೆ ಜನಸಾಮಾನ್ಯರ ಜೊತೆಯಲ್ಲಿ ಬೇರೆತ್ತು ಅವರ ಕಷ್ಟಕಾರ್ಪಣ್ಯಗಳಿಗೆ ಸ್ಪಂದಿಸುವಂತ ಕಾರ್ಯ ಮಾಡುತ್ತಿರುವದು ನಿಜಕ್ಕೂ ಹೆಮ್ಮೆಪಡುವಂತ ವಿಷಯ. ಅವರ ಸಾಮಾಜಿಕ ಕಾರ್ಯಗಳು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಸಾಗುವಂತಾಗಲಿ ಅವರ ಸಾಮಾಜಿಕ ಕೆಲಸಕ್ಕೆ ನಾನು ಕೂಡ ಸಹಕಾರ ನೀಡುವೆ ಎಂದು ಭರವಸೆಯ ಮಾತುಗಳನ್ನಾಡಿದರು.

ಈ ಸಂಧರ್ಭದಲ್ಲಿ ಕಲಬುರಗಿ ಪ್ರಭ ಪತ್ರಿಕೆಯ ಸಂಪಾದಕರಾದ ವಿಜಯಕುಮಾರ ಜಿಡಗಿ, ಶಿವಯೋಗಿ ರಂಗನ್, ಪೆÇೀಲಿಸ್ ಸಿಬ್ಬಂದಿಗಳಾದ ಕಲ್ಯಾಣಿ ಯಳಸಂಗಿ, ಗುರು ಸ್ವಾಮಿ, ಲಕ್ಷ್ಮೀಪುತ್ರ ಗೌಂಡಿ, ಸೈಯದ್ ಬದ್ರದ್ದಿನ್, ಮಲ್ಲಿಕಾರ್ಜುನ ಇನ್ನಿತರರು ಇದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

8 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

11 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

17 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

17 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

18 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago