ಜೇವರ್ಗಿ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರು, ಜೇವರ್ಗಿ ಶಾಸಕರಾದ ಡಾ. ಅಜಯ್ ಧರ್ಮಸಿಂಗ್ ಅವರು ಗುರುವಾರ ಜೇವರ್ಗಿಯ ತಾಲೂಕು ಕ್ರೀಂಡಾಗಣದಲ್ಲಿ ಜರುಗಿದ 78ನೇ ಸ್ವಾತಂತ್ರ‍್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಜೇವರ್ಗಿಯಲ್ಲಿ 42 ವಿಕಲ ಚೇತನರಿಗೆ ಮೋಟಾರೀಕೃತ ಟ್ರೈಸೈಕಲ್‌ಗಳ ವಿತರಣೆ ಮಾಡಿ ಶುಭ ಕೋರಿದರು.
ಇದಲ್ಲದೆ ಸಿಎಂ ಪದಕ ವಿಜೇತರಾಗಿರುವ ಅಗ್ನಶಾಮಕ ಠಾಣೆ ಪೇದೆ ಸುಭಾಸ ಅವರಿಗೆ ಸಮಾರಂಭದಲ್ಲಿ ಸತ್ಕರಿಸಲಾಯ್ತು. ಇದಲ್ಲದೆ ವಿದ್ಯುತ್ ಅಪಘಾತದಲ್ಲಿ ಸಾವನ್ನಪ್ಪಿರುವ ರೈತ ರೇಣುಕಾ ಕುಟುಂಬಕ್ಕೆ 5 ಲಕ್ಷ ರು ಪರಿಹಾರದ ಚೆಕ್ ಶಾಸಕರು ವಿತರಿಸಿದರು.
ಇದಲ್ಲದೆ, ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಮೂವರು ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ ಮಾಡಿ ಸನ್ಮಾನಿಸಲಾಯಿತು. ದ್ವಿತೀಯ ಪಿ.ಯು.ಸಿ.ಯಲ್ಲಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳನ್ನು ಡಾ. ಅಜಯ್ ಸಿಂಗ್ ಸತ್ಕರಿಸಿದರು.
ತಹಶೀಲ್ದಾರ್ ಮಲ್ಲಣ್ಣ ಯಲಗೋಡು, ತಾಪಂ ವೈದ್ಯಾಧಿಕಾರಿ ಡಾ. ಸಿದ್ದು ಪಾಟೀಲ್, ತಾಪಂ ಮುಖ್ಯಾಧಿಕಾರಿಗಳು ಸೇರಿದಂತೆ ತಾಲೂಕಿನ ವಿವಿದ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಶಾಸಕರು ಅತ್ಯುತ್ತಮ ಸೇವೆ ಸಲ್ಲಿಸಿದ ಸರಕಾರಿ ಸಿಬ್ಬಂದಿಗಳನ್ನು ಗೌರವಿಸಿ ಶುಭ ಕೋರಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…