ಫೋಟೋ ಜರ್ನಲ್ ಲಿಸ್ಟ್ ಶಿವಶರಣ ಬೆಣ್ಣೂರ್ ಗೆ ಜಿಲ್ಲಾಡಳಿತದಿಂದ ಸನ್ಮಾನ

0
67

ಕಲಬುರಗಿ: ಇತ್ತೀಚಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಚುನಾವಣಾ ಆಯೋಗದಿಂದ ಏರ್ಪಡಿಸಿದ ಛಾಯಾಚಿತ್ರ ಸ್ಪರ್ಧೆಯಲ್ಲಿ ರಾಜ್ಯಮಟ್ಟದ ವಿಶೇಷ ಪ್ರಶಸ್ತಿ ಪಡೆದ ವಿಜಯ ಕರ್ನಾಟಕ ಕಲಬುರಗಿ ಆವೃತ್ತಿಯ ಫೋಟೋ ಜರ್ನಲ್ ಲಿಸ್ಟ್ ಶಿವಶರಣ ಬೆಣ್ಣೂರ್ ಅವರಿಗೆ ಕಲಬುರಗಿ ಜಿಲ್ಲಾಡಳಿತದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರಶಸ್ತಿ ನೀಡಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಫೌಜಿಯಾ ತರನ್ನೂಮ್ ವಿಜಯ ಕರ್ನಾಟಕ ಸ್ಥಾನಿಕ ಸಂಪಾದಕರಾದ ದೇವಯ್ಯ ಗುತ್ತೇದಾರ್, ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮ ಪ್ರಭು ಪಾಟೀಲ್, ಉತ್ತರ ಮತಕ್ಷೇತ್ರದ ಶಾಸಕಿ ಕನೀಜ್ ಫಾತಿಮಾ, ಪಾಲಿಕೆಯ ಮಹಾಪೌರರಾದ ಯಲ್ಲಪ್ಪ ನಾಯ್ಕೋಡಿ, ಸಂಸದ ರಾಧಾಕೃಷ್ಣ ದೊಡ್ಡಮನಿ, ವಿಧಾನ ಪರಿಷತ್ತಿ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ್, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಜಾರ್ ಅಲಮ್ ಖಾನ್ ಸೇರಿದಂತೆ ಇಲಾಖೆ ಅಧಿಕಾರಿಗಳು ರಾಜಕೀಯ ಮುಖಂಡರು ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here